ನಂದಿನಿ ಹಾಲಿನ ದರ 4 ರೂ. ಹೆಚ್ಚಳ; ಬೆಲೆ ಏರಿಕೆಯ ಕಾಂಗ್ರೆಸ್ ಸರ್ಕಾರದಿಂದ ಮತ್ತೊಂದು ಬರೆ!

Published : Mar 27, 2025, 02:19 PM ISTUpdated : Mar 27, 2025, 02:33 PM IST
ನಂದಿನಿ ಹಾಲಿನ ದರ 4 ರೂ. ಹೆಚ್ಚಳ; ಬೆಲೆ ಏರಿಕೆಯ ಕಾಂಗ್ರೆಸ್ ಸರ್ಕಾರದಿಂದ ಮತ್ತೊಂದು ಬರೆ!

ಸಾರಾಂಶ

ಬೆಲೆ ಏರಿಕೆ ನಿಯಂತ್ರಿಸುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ನಂದಿನಿ ಹಾಲಿನ ದರವನ್ನು ಮೂರನೇ ಬಾರಿಗೆ ಹೆಚ್ಚಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಪ್ರತಿ ಲೀಟರ್‌ಗೆ 4 ರೂಪಾಯಿ ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದೆ. ಈ ದರ ಹೆಚ್ಚಳ ಕರ್ನಾಟಕ ಹಾಲು ಒಕ್ಕೂಟದ ಎಲ್ಲಾ ನಿಗಮಗಳಿಗೂ ಅನ್ವಯವಾಗಲಿದ್ದು, ಶೀಘ್ರದಲ್ಲೇ ಜಾರಿಗೆ ಬರಲಿದೆ.

ಬೆಂಗಳೂರು (ಮಾ.27): ಕರ್ನಾಟಕ ರಾಜ್ಯದ ಜನತೆಗೆ ಬೆಲೆ ಏರಿಕೆಯನ್ನು ನಿಯಂತ್ರಣ ಮಾಡುವುದಾಗಿ ಪ್ರಮಾಣ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದಿಂದ ಇದೀಗ ಮೂರನೇ ಬಾರಿಗೆ 4 ರೂಪಾಯಿ ನಂದಿನಿ ಹಾಲಿನ ದರವನ್ನು ಹೆಚ್ಚಳ ಮಾಡುವುದಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

ಬೆಂಗಳೂರಿನಲ್ಲಿ ಇಂದು ಸಚಿವ ಸಂಪುಟ ನಡೆಸಿದ ಸಭೆ ನಡೆಸಿದ ನಂತರ ಕರ್ನಾಟಕ ಹಾಲು ಒಕ್ಕೂಟದ ಎಲ್ಲ ನಿಗಮಗಳಿಗೂ ಅನ್ವಯವಾಗುವಂತೆ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 4 ರೂ. ದರವನ್ನು ಹೆಚ್ಚಳ ಮಾಡುವುದಕ್ಕೆ ಅನುಮೋದನೆ ನೀಡಿದೆ. ಈ ಮೂಲಕ ಒಂದೆರಡು ದಿನಗಳಲ್ಲಿಯೇ ನಂದಿನಿ ಹಾಲಿನ ದರ ಹೆಚ್ಚಳ ಅನ್ವಯವಾಗಲಿದೆ. ಈ ಮೂಲಕ ರಾಜ್ಯದ ಜನತೆಗೆ ಸರ್ಕಾರದಿಂದ ಮತ್ತೊಮ್ಮೆ ಬೆಲೆ ಏರಿಕೆ ಬರೆಯನ್ನು ಎಳೆದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇದು 3ನೇ ಬಾರಿಗೆ ಹಾಲಿನ ದರವನ್ನು ಹೆಚ್ಚಳ ಮಾಡಿದೆ.

ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷದಲ್ಲಿ 2 ರೂ. ಹೆಚ್ಚಳ ಮಾಡಿತ್ತು. ಇದಾದ ನಂತರ ಕಳೆದ ಆರೇಳು ತಿಂಗಳ ಹಿಂದೆ 50 ಗ್ರಾಂ ಹಾಲು ಹೆಚ್ಚಳ ಮಾಡಿ, ಅದಕ್ಕೆ 2 ಬೆಲೆ ಹೆಚ್ಚಳ ಮಾಡಿತ್ತು. ಇದೀಗ ಮೂರನೇ ಬಾರಿಗೆ 4 ರೂ. ಹೆಚ್ಚಳ ಮಾಡಲಾಗಿದೆ.

ಇದನ್ನೂ ಓದಿ: ಮೆಟ್ರೋ, ಬಸ್, ವಿದ್ಯುತ್ ಆಯ್ತು, ಇದೀಗ ನಂದಿನಿ ಹಾಲಿನ ದರ ಶೀಘ್ರವೇ 5 ರು. ಏರಿಕೆ?

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಲಿನ ದರವನ್ನು ಹೆಚ್ಚಳ ಮಾಡುವ ಕರ್ನಾಟಕ ಹಾಲು ಒಕ್ಕೂಟದ ಅಧಿಕಾರಿಗಳು, ಹಾಲು ಒಕ್ಕೂಟ ಜತೆ ಸಭೆ ನಡೆಸಿದ್ದರು. ಈ ವೇಳೆ ಹಾಲು ಒಕ್ಕೂಟದಿಂದ ಪ್ರತಿ ಲೀಟರ್ ಗೆ ,5 ರೂಪಾಯಿ ಹೆಚ್ಚಿಸುವಂತೆ ಸರ್ಕಾರದ ಮುಂದೆ ಬೆಡಿಕೆ ಇಟ್ಟಿದ್ದವು. ಈ ವೇಳೆ ಹಾಲಿನ ದರ ಹೆಚ್ಚಳಕ್ಕೆ ಅನುಮತಿ ನೀಡುವ ಭರವಸೆಯನ್ನು ಸಿದ್ದರಾಮಯ್ಯ ನೀಡಿದ್ದರು. ಇದೀಗ ಕ್ಯಾಬಿನೆಟ್ ಮೀಟಿಂಗ್‌ನಲ್ಲಿ ನಂದಿನಿ ಹಾಲಿನ ದರವನ್ನು 4 ರೂ. ಹೆಚ್ಚಳ ಮಾಡಲು ಅನುಮೋದನೆ ನೀಡಲಾಗಿದೆ.

ಇಂದು ಮಧ್ಯರಾತ್ರಿಯಿಂದಲೇ ಹೊಸ ದರ ಜಾರಿ: ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಸಚಿವ ಸಂಪುಟದಿಂದ ಅನುಮೋದನೆ ನೀಡಿದ ಬೆನ್ನಲ್ಲಿಯೇ ಇಂದು ಮಧ್ಯ ರಾತ್ರಿಯಿಂದಲೇ ಹೊಸ ದರ ಅನ್ವಯವಾಗಲಿದೆ. ಈ ಮೂಲಕ ಯುಗಾದಿ ಹಬ್ಬಕ್ಕೆ ರಾಜ್ಯದ ಜನತೆಗೆ ಬೆಲೆ ಏರಿಕೆಯ ಬರೆಯನ್ನು ಎಳೆದು ಶಾಕ್ ನೀಡಿದೆ. ರಾಜ್ಯದಲ್ಲಿ 5 ಉಚಿತ ಗ್ಯಾರಂಟಿಗಳನ್ನು ನೀಡಿ, ರಾಜ್ಯದ ದುಡಿಯುವ ವರ್ಗದ ಜನರ ಸುಲಿಗೆ ಮಾಡುತ್ತಿದ್ದಾರೆ. ಇದೀಗ ಹಾಲಿನ ದರ ಹೆಚ್ಚಳದ ಬೆನ್ನಲ್ಲಿಯೇ ಹಾಲಿನ ಉಪ ಉತ್ಪನ್ನಗಳನ್ನು ತಯಾರಿಸುವ ಹೋಟೆಲ್‌ನ ಉತ್ಪನ್ನಗಳಾದ ಚಹಾ-ಕಾಫಿ, ಬೇಕರಿ ಉತ್ಪನ್ನಗಳ ಬೆಲೆಯೂ ಹೆಚ್ಚಾಗಲಿದೆ.

ಇದನ್ನೂ ಓದಿ: ನಂದಿನಿ ಪ್ಯಾಕೆಟ್‌ಗೆ 50 ಮಿ.ಲೀ ಹಾಲು ಹೆಚ್ಚಿಸಿ 2 ರೂ. ಸೇರ್ಪಡೆ ಮಾಡಿದ್ದೇವೆ, ದರ ಹೆಚ್ಚಿಸಿಲ್ಲ ಸಿಎಂ ಸಿದ್ದರಾಮಯ್ಯ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ
ಸಿಸೇರಿಯನ್‌ ಹೆರಿಗೆ ಹೆಚ್ಚಳ ಏಕೆ ಎಂದು ತಿಳಿಯಲು ಆಡಿಟ್‌: ಸಚಿವ ದಿನೇಶ್‌ ಗುಂಡೂರಾವ್