
ಬೆಂಗಳೂರು (ಆ.17): ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದ ಒಟ್ಟು 36 ಸಾವಿರ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿ ಮಾಡಲು ಅಭಿಯಾನವನ್ನು ಪ್ರಾರಂಭಿಸಲಾಗಿದೆ.
ರಾಜ್ಯದ ಎಲ್ಲ ದೇವಾಇನ್ಮುಂದೆ ಈ ದೇಗುಲಗಳಲ್ಲಿ ಪ್ರಸಾದ ವಿತರಣೆಗೆ ಅಥವಾ ಯಾವುದೇ ಉದ್ದೇಶಕ್ಕಾಗಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುವಂತಿಲ್ಲ. ಆಗಸ್ಟ್ 15 ರಿಂದಲೇ ಪ್ಲಾಸ್ಟಿಕ್ ನಿಷೇಧವನ್ನು ಜಾರಿಗೆ ತರಲಾಗಿದ್ದು, ಇಂದು (ಆ. 17) ಅಧಿಕೃತವಾಗಿ ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಧಾರ್ಮಿಕ ದತ್ತಿ ಇಲಾಖೆಯ ನೇತೃತ್ವದಲ್ಲಿ, ಬಸವನಗುಡಿಯ ದೊಡ್ಡಗಣಪತಿ ದೇವಾಲಯದಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಸಕ ರವಿಸುಬ್ರಮಣ್ಯ ಅವರು ಉಪಸ್ಥಿತರಿದ್ದರು.
ಅಭಿಯಾನದ ವಿವರಗಳು:
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ ಅವರು, 'ದೇವಾಲಯಗಳು ಕೇವಲ ಧಾರ್ಮಿಕ ಕೇಂದ್ರಗಳಲ್ಲ, ಅವುಗಳು ಪರಿಸರ ಸ್ವಚ್ಛತೆಯ ಸಂಕೇತವೂ ಆಗಬೇಕು. ಈ ಅಭಿಯಾನದ ಮೂಲಕ ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಪರಿಸರ ಸ್ನೇಹಿ ವಾತಾವರಣ ನಿರ್ಮಿಸುವ ಗುರಿ ಹೊಂದಿದ್ದೇವೆ' ಎಂದು ತಿಳಿಸಿದರು. ಈ ಕ್ರಮವು ಪರಿಸರ ಸಂರಕ್ಷಣೆಗೆ ದೊಡ್ಡ ಮಟ್ಟದಲ್ಲಿ ಸಹಾಯಕವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ