
ಬೆಂಗಳೂರು (ಅ.21): ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ 3.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇಕಡಾ 38.75ಗೆ ಏರಿಕೆಯಾಗಿದೆ.
ಯುಜಿಸಿ/ಎಐಸಿಟಿಇ/ ಐಸಿಎಆರ್ (UGC/ AICTE/ ICAR) ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ ಎನ್‌ಜೆಪಿಸಿ (NJPC) ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ನು ಶೇ. 4 ರಷ್ಟು ಹೆಚ್ಚಿಸಿ (ಶೇ.46 ಕ್ಕೆ ಪರಿಷ್ಕರಿಸಿ) ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಬೆಲೆ ಏರಿಕೆ ಹಾಗೂ ಇತರೆ ಕಾರಣಗಳಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಸರ್ಕಾರಿ ನೌಕರರಿಗೆ ಈ ತುಟ್ಟಿ ಭತ್ಯೆ ಹೆಚ್ಚಳದಿಂದ ಸಂತಸ ಹೆಚ್ಚಾಗಿದೆ.
ನವರಾತ್ರಿ ಹಬ್ಬಕ್ಕೆ ಗುಡ್ ನ್ಯೂಸ್, ಸರ್ಕಾರಿ ನೌಕರರಿಗೆ ಶೇ.4 ರಷ್ಟು DA ಹೆಚ್ಚಳಕ್ಕೆ ಅನುಮೋದನೆ!
ಮೂಲ ವೇತನಕ್ಕೆ ಮಾತ್ರ ಅನ್ವಯ: ತುಟ್ಟಿಭತ್ಯೆಯ ಉದ್ದೇಶಕ್ಕಾಗಿ 'ಮೂಲ ವೇತನ" ಎಂದರೆ ಸರ್ಕಾರಿ ನೌಕರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ, (ಅ)- ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಬಡ್ತಿ, (ಆ)- 2018ರ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳ ನಿಯಮ 3(ಸಿ) ಯನ್ನು ಓದಿಕೊಂಡು 7ನೇ ನಿಯಮದ (3)ನೇ ಉಪನಿಯಮದ ಮೇರೆಗೆ ಅವನಿಗೆ ನೀಡಲಾದ ವ್ಯಯಕ್ತಿಕ ವೇತನ ಯಾವುದಾದರೂ ಇದ್ದರೆ ಆ ವೈಯಕ್ತಿಕ ವೇತನ, (ಇ)- ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ಇದ್ದಲ್ಲಿ, ಅವುಗಳು ಸೇರುತ್ತವೆ. ಮುಖ್ಯವಾಗಿ ಮೂಲ ವೇತನಕ್ಕೆ ಮೇಲೆ ಸೂಚಿಸಿರುವುದನ್ನು ಹೊರತುಪಡಿಸಿ, ಇತರ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ.
ಕರ್ನಾಟಕ ಸರ್ಕಾರಿ ನೌಕರರಿಗೆ ಶೇ.4 ತುಟ್ಟಿಭತ್ಯೆ ಹೆಚ್ಚಳ: ಜನವರಿಯಿಂದ ಪೂರ್ವಾನ್ವಯ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ