ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

By Sathish Kumar KH  |  First Published Oct 2, 2023, 12:29 PM IST

ಶಿವಮೊಗ್ಗ ಹಾಗೂ ಕೋಲಾರದಲ್ಲಿ ಧಾರ್ಮಿಕ ಸಂಘರ್ಷದ ಘಟನೆಗಳು ನಡೆಯುತ್ತಿವೆ. ಆದರೂ ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ.


ಬೆಂಗಳೂರು (ಅ.02): ರಾಜ್ಯದಲ್ಲಿ ಶಿವಮೊಗ್ಗ ಹಾಗೂ ಕೋಲಾರದಲ್ಲಿ ಧಾರ್ಮಿಕ ಸಂಘರ್ಷದ ಘಟನೆಗಳು ನಡೆಯುತ್ತಿವೆ. ಆದರೂ ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. 

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಪ್ರಕ್ಷುಬ್ಧ ವಾತಾವರಣ ಇರುವ ನಗರವಾಗಿದೆ. ಅಲ್ಲಿ ಹಿಂದೆ ಹಲವಾರು ಘಟನೆ ನಡೆದಿದೆ. ಇಂತ ಧಾರ್ಮಿಕ ಘಟನೆ ನಡೆದಾಗ ಪೊಲೀಸರು ಸೂಕ್ತ ಮುಂಜಾಗ್ರತ ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು. ಶಿವಮೊಗ್ಗದ 3 ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಇಂತ ಘಟನೆ ನಡೆಯುತ್ತದೆ. ಇಂತ ಸ್ಟೇಷನ್‌ಗೆ ವರ್ಗಾವಣೆ ಮಾಡುವಾಗ ಸಮರ್ಥ ಅಧಿಕಾರಿ ಹಾಕಬೇಕು. ಸ್ವಹಿತಾಸಕ್ತಿಗಳಿಗೆ ಬಲಿಯಾಗಿ ಅಧಿಕಾರಿಗಳ ವರ್ಗಾವಣೆ ಮಾಡಿದರೆ, ಅವರು ಕಾನೂನು ಕಾಪಾಡುವ ಬದಲು ಬೇರೆ ಕೆಲಸದಲ್ಲಿಯೇ ಮಗ್ನರಾಗುತ್ತಾರೆ ಎಂದು ಆರೋಪಿಸಿದ್ದಾರೆ.

Tap to resize

Latest Videos

ಶಿವಮೊಗ್ಗದಲ್ಲಿ ಇದೆಲ್ಲ ಏನ್ ಹೊಸದಾಗಿ ಮಾಡ್ತಾರಾ? ಗೃಹ ಸಚಿವ ಪರಮೇಶ್ವರ ಉಡಾಫೆ ಉತ್ತರ!

ಶಿವಮೊಗ್ಗ ನಗರಕಗ್ಕೆ ಸಮರ್ಥರಲ್ಲದ ಅಧಿಕಾರಿಯನ್ನು ನೇಮಕ ಮಾಡಿದ್ದರಿಂದ ಸಮಾಜಘಾತುಕ ಶಕ್ತಿಗಳಿಗೆ ಕುಮ್ಮಕ್ಕು ಸಿಗುತ್ತದೆ. ಇದರ ಮೂಲ ಪ್ರತಿ ಡಿಸ್ಟಿಕ್‌ನಲ್ಲಿ ಕ್ಲಬ್, ರಿಯಲ್ ಎಸ್ಟೇಟ್ ಮಾಫಿಯಾ ಶುರುವಾಗಿದೆ. ಇದನ್ನ ಸಮಗ್ರವಾಗಿ ನಿಭಾಯಿಸಿ, ಶಾಂತಿ ಕಾಪಾಡಬೇಕು. ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಸರ್ಕಾರದಿಂದ ಪೊಲೀಸರಿಗೆ ಒಂದು ಸ್ಪಷ್ಟ ನಿರ್ದೇಶನ ಹೋಗಬೇಕು. ಅಧಿಕಾರಿಳನ್ನು ಯಾವುದೇ ಮುಲಾಜಿಲ್ಲದೆ ಟ್ರಾನ್ಸ್‌ಫರ್ ಮಾಡಿದ್ದರೆ, ಇಂತಹ ಘಟನೆ ನಿಲ್ಲುತ್ತದೆ ಎಂದು ಹೇಳಿದರು.

ಕಾಂಗ್ರೆಸ್‌ನವರ ಮಾತಲ್ಲಿ ಮಾತ್ರ ಗಾಂಧಿ: ಗಾಂಧಿ ಕಂಡ ಕನಸು ಕರ್ನಾಟಕದಲ್ಲಿ ನನಸು ಅಂತ ಸರ್ಕಾರ ಜಾಹೀರಾತು ನೀಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇವರು ಮಾಡುವುದೆಲ್ಲಾ ಗಾಂಧಿ ವಿರೋಧಿ ನೀತಿ. ಸುಳ್ಳು ಹೇಳುವುದರಿಂದ ಗಾಂಧಿ ವಿರೋಧಿ ನೀತಿ ಪ್ರಾರಂಭ ಆಗುತ್ತದೆ. ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುವುದು. ಸಿಕ್ಕಲ್ಲೆಲ್ಲಾ ಮಧ್ಯದಂಗಡಿ ಶುರು ಮಾಡಿದ್ದಾರೆ. ಪ್ರತೀ ಗ್ರಾಮ ಪಂಚಾಯತಿಯಲ್ಲಿ ಮಧ್ಯದಂಗಡಿ ತೆರೆಯುತ್ತಿದ್ದಾರೆ. ಹೇಳಲು ಮಾತ್ರ ಗಾಂಧಿ ಶಾಂತಿ ಮಂತ್ರ, ಮಾಡುವುದೆಲ್ಲಾ ಗಾಂಧಿ ವಿರೋಧಿ ಕೆಲಸಗಳು ಎಂದು ಹೇಳಿದರು.

ಶಿವಮೊಗ್ಗದಲ್ಲಿ ಈದ್‌ ಮಿಲಾದ್‌ ಮೆರವಣಿಗೆ ವೇಳೆ ಕಲ್ಲು ತೂರಾಟ: 144 ಸೆಕ್ಷನ್‌ ಜಾರಿ

ಕ್ಷುಲ್ಲಕ ಕಾರಣದ ಮಾತಿನ ಚಕಮಕಿಯಿಂದ ಕಲ್ಲು ತೂರಾಟ ಆರಂಭ:  ಶಿವಮೊಗ್ಗ ನಗರದ ರಾಗಿಗುಡ್ಡದ ಬಳಿ ಭಾನುವಾರ ಸಂಜೆ ವೇಳೆ ಸಾಗುತ್ತಿದ್ದ ಈದ್‌ ಮಿಲಾದ್‌ ಮೆರವಣಿಗೆ ಗುಂಪಿನ ಮೇಲೆ ಕಲ್ಲು ತೂರಾಟ ಮಾಡಿರುವ ದುರ್ಘಟನೆ ನಡೆದಿದೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥತಿ ನಿಯಂತ್ರಣ ಮಾಡಿದ್ದು, 144 ಸೆಕ್ಷನ್‌ ಜಾರಿ ಮಾಡಲಾಗಿದೆ. ಶಿವಮೊಗ್ಗದಲ್ಲಿ ಬೃಹತ್‌ ಮಟ್ಟದ ಈದ್ ಮಿಲಾದ್‌ ಅಂಗವಾಗಿ ಮೆರವಣಿಗೆಯನ್ನು ಆಯೋಜನೆ ಮಾಡಲಾಗಿತ್ತು. ಈ ವೇಳೆ ರಾಗಿಗುಡ್ಡದಿಂದ ಒಂದು ಮುಸ್ಲಿಂ ಗುಂಪು ಗಾಂಧಿ ಬಜಾರ್ ನಿಂದ ಹೊರಡುವ ಮೆರವಣಿಗೆ ಹೊರಡುವ ಗುಂಪನ್ನು ಸೇರಿಕೊಳ್ಳಲು ಚಿಕ್ಕದಾಗಿ ಮೆರವಣಿಗೆ ಹೋಗಲಾಗುತ್ತೊತ್ತು. ಇನ್ನು ರಾಗಿಗುಡ್ಡದಿಂದ ಮೆರವಣಿಗೆ ಹೊರಟಾಗ ಹಿಂದೂ ದೇಗುಲದ ಬಳಿ ಮೆರವಣಿಗೆ ಹಿಂಬದಿಯ ಯುವಕನ ಜೊತೆ ಮಾತಿನ ಚಕ್ರಮಕಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಉಂಟಾದ ಮಾತಿನ ಚಕಮಕಿ ಕಲ್ಲು ತೂರಾಟಕ್ಕೆ ತಿರುಗಿದೆ.

click me!