ಕಾಮಗಾರಿಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ನೀಡುವ ಕುರಿತು ವರದಿಗಳ ಹಿನ್ನೆಲೆಯಲ್ಲಿ ಸರ್ಕಾರ ಸ್ಪಷ್ಟನೆ ನೀಡಿದೆ. ಮೀಸಲಾತಿ ಬೇಡಿಕೆ ಬಂದಿರುವುದು ನಿಜವಾದರೂ, ಪ್ರಸ್ತುತ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ತಿಳಿಸಿದೆ.
ಬೆಂಗಳೂರು: ಕಾಮಗಾರಿಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ನೀಡುವ ಕುರಿತ ಸುದ್ದಿಗೆ ಸರ್ಕಾರದಿಂದ ಸ್ಪಷ್ಟನೆ ನೀಡಿದೆ. ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆ ಸರ್ಕಾರದ ಮುಂದೆ ಎಂಬ ವರದಿ ಕೆಲ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಮೀಸಲಾತಿ ನೀಡಬೇಕೆಂಬ ಬೇಡಿಕೆ ಬಂದಿರುವುದು ನಿಜ. ಆದರೆ ಈ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಸರ್ಕಾರದ ಕಾಮಗಾರಿಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇ.4ರಷ್ಟು ಮೀಸಲಾತಿ ನೀಡಬೇಕೆಂಬ ಪ್ರಸ್ತಾವನೆಯನ್ನು ಅಲ್ಪಸಂಖ್ಯಾತ ಕಲ್ಯಾಣ ಸಲ್ಲಿಕೆ ಮಾಡಿದೆ ಎಂದು ವರದಿಯಾಗಿದೆ. ಒಂದು ವೇಳೆ ಮೀಸಲಾತಿ ನೀಡಲು ಮುಂದಾದ್ರೆ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮಕ್ಕೆ ತಿದ್ದುಪಡಿ ತರಬೇಕಾಗುತ್ತದೆ.
ಈಗಾಗಲೇ ಎಸ್‌ಸಿ ಎಸ್‌ಟಿ ಸಮುದಾಯಕ್ಕೆ ಗುತ್ತಿಗೆಯಲ್ಲಿ ಸರ್ಕಾರ ಮೀಸಲಾತಿ ನೀಡಿದೆ. ಎಸ್‌ಸಿ ಎಸ್‌ಟಿ ಸಮುದಾಯಕ್ಕೆ 24% ಗುತ್ತಿಗೆ ಮೀಸಲಾತಿ ನೀಡಲಾಗಿದೆ. OBC ಸಮುದಾಯಕ್ಕೆ 4%, 2A ಅಡಿ 15% ಗುತ್ತಿಗೆಯಲ್ಲಿ ಮೀಸಲಾತಿ ನೀಡಲಾಗಿದೆ. ಒಟ್ಟು ಸರ್ಕಾರದ ಕಾಮಗಾರಿಗಳಲ್ಲಿ 43% ಮೀಸಲಾತಿ ನೀಡಲಾಗಿದೆ. ಇದೀಗ ಮುಸ್ಲಿಂ ಸಮುದಾಯಕ್ಕೂ ಸರ್ಕಾರದ ಕಾಮಗಾರಿಗಳಲ್ಲಿ ಶೇ. 4 ರಷ್ಟು ಮೀಸಲಾತಿ ನೀಡುವ ಕುರಿತು ಪ್ರಸ್ತಾವನೆ ನೀಡುವ ಕುರಿತು ಪ್ರಸ್ತಾವನೆ ಸಲ್ಲಿಕೆಯಾಗಿದೆ.
ಇದನ್ನೂ ಓದಿ: 20-20 ಬಳಿಕ ಯಡಿಯೂರಪ್ಪಗೆ ಅಧಿಕಾರ ನೀಡಲು ನಿರ್ಧರಸಿದ್ದೆ: ಕುಮಾರಸ್ವಾಮಿ
ಈ ಸಂಬಂಧ ಸಿಎಂ ಸಿದ್ದರಾಮಯ್ಯಯವರಿಗೆ ಮುಸ್ಲಿಂ ಸಮುದಾಯ ಸಚಿವರು, ಶಾಸಕರ ನಿಯೋಗದಿಂದ ಸಿಎಂಗೆ ಮನವಿ ಸಲ್ಲಿಕೆ ಮಾಡಿದ್ದಾರೆ ಎನ್ನಲಾಗಿದೆ. ಸಚಿವರಾದ ಜಮೀರ್ ಅಹ್ಮದ್ ಖಾನ್, ರಹೀಂ ಖಾನ್, ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ತನ್ವೀರ್ ಸೇಠ, ಅಬ್ದುಲ್ ಜಬ್ಬಾರ್, ಎನ್ ಎ ಹ್ಯಾರಿಸ್, ರಿಜ್ವಾನ್ ಅರ್ಷದ, ಆಸೀಪ್ ಸೇಠ, ಖನೀಜಾ ಫಾತಿಮಾ, ಇಕ್ಬಾಲ್ ಹುಸೇನ್, ಬಲ್ಕೀಶ್ ಬಾನು ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಆದ್ರೆ ಸರ್ಕಾರದ ಮುಂದೆ ಯಾವುದೇ ಮೀಸಲಾತಿ ನೀಡುವ ಪ್ರಸ್ತಾವನೆ ಇಲ್ಲ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ.
ಇದನ್ನೂ ಓದಿ: ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಗಾಯಗೊಂಡ ಕೇಸ್: ಬೆಸ್ಕಾಂ ಅಧಿಕಾರಿಗಳ ವಿರುದ್ಧ ಹೈಕೋರ್ಟ್ ಚಾಟಿ