ಸರ್ಕಾರಿ ಗುತ್ತಿಗೆ ನೌಕರರಿಗೂ ಹೆರಿಗೆ ರಜೆ ಸೌಲಭ್ಯ ವಿಸ್ತರಣೆ

Published : Jun 24, 2022, 05:00 AM IST
ಸರ್ಕಾರಿ ಗುತ್ತಿಗೆ ನೌಕರರಿಗೂ ಹೆರಿಗೆ ರಜೆ ಸೌಲಭ್ಯ ವಿಸ್ತರಣೆ

ಸಾರಾಂಶ

ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಮತ್ತು ಅಂಗ ಸಂಸ್ಥೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಮಾತೃತ್ವ (ಹೆರಿಗೆ) ರಜೆ ಸೌಲಭ್ಯವನ್ನು ವಿಸ್ತರಿಸಿ ಸರ್ಕಾರ ಆದೇಶಿಸಿದೆ.

ಬೆಂಗಳೂರು (ಜೂ.24): ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಮತ್ತು ಅಂಗ ಸಂಸ್ಥೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಮಾತೃತ್ವ (ಹೆರಿಗೆ) ರಜೆ ಸೌಲಭ್ಯವನ್ನು ವಿಸ್ತರಿಸಿ ಸರ್ಕಾರ ಆದೇಶಿಸಿದೆ. ಈವರೆಗೆ ಸರ್ಕಾರಿ ನೌಕರಿಯಲ್ಲಿರುವ ಮಹಿಳೆಯರಿಗೆ ಇದ್ದ ಹೆರಿಗೆ ರಜೆಯ ಸೌಲಭ್ಯವನ್ನು ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುವ ಮಹಿಳಾ ನೌಕರರಿಗೆ ವಿಸ್ತರಿಸಲಾಗಿದೆ. ಏಪ್ರಿಲ್‌ನಿಂದ ಪೂರ್ವಾನ್ವಯವಾಗುವ ರೀತಿ ಜಾರಿಗೆ ಬರುವಂತೆ ಆದೇಶಿಸಲಾಗಿದೆ. 

ಮಾತೃತ್ವ ರಜೆಯನ್ನು ರಜೆಯ ಪ್ರಾರಂಭದ ದಿನಾಂಕದಿಂದ ಗರಿಷ್ಠ 180 ದಿನಗಳವರೆಗೆ ಮಂಜೂರು ಮಾಡಬಹುದಾಗಿದೆ.  ಗರ್ಭಸ್ರಾವ ಅಥವಾ ಗರ್ಭಪಾತದಿಂದ ಗರ್ಭಧಾರಣೆ ಪರ್ಯಾವಸಾನಗೊಂಡ ಸಂದರ್ಭದಲ್ಲಿ ಮಾತೃತ್ವ ರಜೆಯು ಆರು ವಾರಗಳನ್ನು ಮೀರಬಾರದು. ಇಂತಹ ರಜೆಗಾಗಿ ಸಲ್ಲಿಸಿದ ಅರ್ಜಿಯು ನೋಂದಾಯಿತ ವೃತ್ತಿನಿರತ ವೈದ್ಯರಿಂದ ಪಡೆದ ಪ್ರಮಾಣ ಪತ್ರದಿಂದ ದೃಢೀಕರಿಸಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. 

ತಾಯಿ ಗರ್ಭದಲ್ಲಿಯೇ ರುಂಡ ಕತ್ತರಿಸಿ, ಓಡಿ ಹೋದ ಪಾಕ್ ವೈದ್ಯರು!

ಮಾತೃತ್ವ ರಜೆಯ ಮೇಲೆ ತೆರಳುವ ನೌಕರರು ರಜೆಯ ನಿಕಟಪೂರ್ವದಲ್ಲಿ ಪಡೆಯುತ್ತಿದ್ದ ವೇತನಕ್ಕೆ ಸಮನಾದ ವೇತನವನ್ನು ರಜೆಯ ಅವಧಿಯಲ್ಲಿ ಪಡೆಯಲು ಅರ್ಹರಿರುತ್ತಾರೆ. ಎರಡು ಅಥವಾ ಹೆಚ್ಚು ಮಕ್ಕಳನ್ನು ಹೊಂದಿರುವ ಮಹಿಳಾ ಗುತ್ತಿಗೆ ನೌಕರರಿಗೆ ಈ ಮಾತೃತ್ವ ರಜೆಯನ್ನು ಮಂಜೂರು ಮಾಡತಕ್ಕದ್ದಲ್ಲ.  ಮಾತೃತ್ವ ರಜೆಗಾಗಿ ಸಲ್ಲಿಸುವ ಅರ್ಜಿಯೊಂದಿಗೆ ಸಂಬಂಧಿತ ಗುತ್ತಿಗೆ ಮಹಿಳಾ ನೌಕರರು ಈ ಕುರಿತು ಸ್ವಯಂ-ಘೋಷಣೆಯನ್ನು ಮಾತೃತ್ವ ರಜೆಯನ್ನು ಮಂಜೂರು ಮಾಡುವ ಅಧಿಕಾರಿಗೆ ಸಲ್ಲಿಸಬೇಕು ಎಂದು ತಿಳಿಸಲಾಗಿದೆ. 

ಹೊಸ ತಾಯಂದಿರಿಗೆ ಪ್ರತಿ ತಿಂಗಳು ₹7000, 26 ವಾರಗಳ ಹೆರಿಗೆ ರಜೆ: ಭಾರ್ತಿ ಏರಟೆಲ್‌

ಗುತ್ತಿಗೆ ಅವಧಿಯ ವೇಳೆ ಮಾತೃತ್ವ ರಜೆಯ ಮೇಲೆ ತೆರಳಿದಾಗ ಅವರ ಗುತ್ತಿಗೆ ಅವಧಿ ಮುಕ್ತಾಯವಾದರೆ ಅಲ್ಲಿಯವರೆಗೆ ಮಾತ್ರ ರಜೆ ಸೀಮಿತಗೊಂಡಿರುತ್ತದೆ. ಒಂದು ವೇಳೆ ಗುತ್ತಿಗೆ ಅವಧಿ ವಿಸ್ತರಿಸಿದರೆ ಆಗ ಗರಿಷ್ಠ 180 ದಿನಗಳ ಮಾತೃತ್ವ ರಜೆಯನ್ನು ಪಡೆಯಲು ಅರ್ಹರಿರುತ್ತಾರೆ. ಈ ಸೌಲಭ್ಯವನ್ನು ಏಪ್ರಿಲ್‌ ತಿಂಗಳಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನ್ಯಾಷನಲ್ ಹೆರಾಲ್ಡ್ ಪ್ರಕರಣ ರೀತಿ RSS ವಿರುದ್ಧ ಯಾಕೆ ಕೇಸ್ ಇಲ್ಲ? ಕೇಂದ್ರದ ವಿರುದ್ಧ ಪ್ರಿಯಾಂಕ್ ಪ್ರಶ್ನೆಗಳ ಸುರಿಮಳೆ!
ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿಗೆ ಡಿಜಿ ಐಜಿಪಿ ಡಾ ಸಲೀಂ ಖಡಕ್ ಎಚ್ಚರಿಕೆ