ಕರ್ನಾಟಕದ 'ಶಕ್ತಿ ಯೋಜನೆ' ಅಧಿಕೃತ ಆರಂಭ: ಮಹಿಳೆಯರಿಗೆ ಬಸ್‌ನಲ್ಲಿ ಫ್ರೀ ಟಿಕೆಟ್‌ ಶುರು

Published : Jun 11, 2023, 12:43 PM ISTUpdated : Jun 11, 2023, 12:47 PM IST
ಕರ್ನಾಟಕದ 'ಶಕ್ತಿ ಯೋಜನೆ' ಅಧಿಕೃತ ಆರಂಭ: ಮಹಿಳೆಯರಿಗೆ ಬಸ್‌ನಲ್ಲಿ ಫ್ರೀ ಟಿಕೆಟ್‌ ಶುರು

ಸಾರಾಂಶ

ರಾಜ್ಯ ಕಾಂಗ್ರೆಸ್‌ ಸರ್ಕಾರದ ಮೊದಲ ಗ್ಯಾರಂಟಿಯಾದ ಉಚಿತ ಬಸ್‌ ಪ್ರಯಾಣದ ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಚಾಲನೆ ನೀಡಿದರು.

ಬೆಂಗಳೂರು (ಜೂ.11): ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿಗಳನ್ನು ಘೋಷಣೆ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್​ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯ ಮಹಿಳೆಯರಿಗೆ ಉಚಿತ ಬಸ್​ ಪ್ರಯಾಣ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಅಧಿಕೃತ ಚಾಲನೆ ನೀಡಿದರು.

ಬೆಂಗಳೂರಿನ ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​  ಶಕ್ತಿ ಯೋಜನೆಗೆ ಚಾಲನೆ ನೀಡಿದರು. ನಂತರ ಶಕ್ತಿ ಯೋಜನೆಯ ಲಾಂಚನ ಮತ್ತು ಸ್ಮಾರ್ಟ್ ಕಾರ್ಡ್ ಮಾದರಿಯನ್ನು ಬಿಡುಗಡೆ ಮಾಡಿದರು. ಇದೇ ವೇಳೆ ಸಾಂಕೇತಿಕವಾಗಿ ಕೆಲವು ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಿದರು. ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಎಲ್ಲಾ ಮಹಿಳೆಯರು (ವಿದ್ಯಾರ್ಥಿನಿಯರು ಸೇರಿದಂತೆ) ಮತ್ತು ಲೈಂಗಿಕ ಅಲ್ಪಸಂಖ್ಯಾತರು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿಯ ನಗರ, ಸಾಮಾನ್ಯ ಮತ್ತು ವೇಗದೂತ ಸಾರಿಗೆಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅಧಿಕೃತ ಚಾಲನೆ ನೀಡಲಾಗಿದೆ. 

ಇನ್ನು ಈ ಕಾರ್ಯಕ್ರಮದಲ್ಲಿ ಡಿಸಿಎಂ ಡಿ. ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಸಚಿವರಾದ ಕೆ. ಜೆ. ಜಾರ್ಜ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಸಕರಾದ ರಿಜ್ವಾನ್ ಅರ್ಷದ್, ಗೋವಿಂದರಾಜ್, ಬಿ ಕೆ ಹರಿಪಸ್ರಾದ್, ಯು. ಬಿ. ವೆಂಕಟೇಶ್, ನಾಗರಾಜ್ ಯಾದವ್ ಹಾಗೂ ಎ. ಸಿ. ವೆಂಕಟೇಶ ಉಪಸ್ಥಿತರಿದ್ದರು.

ಬಸ್ಸಿನಲ್ಲಿ ಶೋಭಾ ಕರಂದ್ಲಾಜೆಗೂ ಫ್ರೀ ಎಂದ ಕಾಂಗ್ರೆಸ್‌ಗೆ ಕೇಂದ್ರ ಸಚಿವೆ ತರಾಟೆ

  • ಶಕ್ತಿ ಯೋಜನೆಗೆ ಕೆಲವು ಷರತ್ತುಗಳು ಅನ್ವಯ: 
  • ಕರ್ನಾಟದಲ್ಲಿ ಮಾತ್ರ ಪ್ರಯಾಣಿಸಲು ಅವಕಾಶ (ಅಂತರ ರಾಜ್ಯ ಸಾರಿಗೆ ಬಸ್‌ಗಳನ್ನು ಹೊರತುಪಡಿಸಿ)
  • ಸಾರಿಗೆ ಇಲಾಖೆಯ ರಾಜಹಂಸ, ನಾನ್ ಎ.ಸಿ. ಸ್ಲೀಪರ್ ಹಾಗೂ ವಜ್ರ, ವಾಯುವಜ್ರ, ಐರಾವತ, ಐರಾವತ ಕ್ಲಬ್ ಕ್ಲಾಸ್, ಐರಾವತ ಗೋಲ್ಡ್ ಕ್ಲಾಸ್, ಅಂಬಾರಿ, ಅಂಬಾರಿ ಡ್ರೀಮ್ ಕ್ಲಾಸ್, ಅಂಬಾರಿ ಉತ್ಸವ್, ಫ್ಲೈ ಬಸ್, ಇವಿ ಪವರ್ ಪ್ಲಸ್ (ಎ.ಸಿ. ಬಸ್‌ಗಳು) ಬಸ್​ಗಳಿಗೆ ಶಕ್ತಿ ಯೋಜನೆ ಅನ್ವಯಿಸುವುದಿಲ್ಲ.
  • ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್ಸುಗಳನ್ನು ಹೊರತುಪಡಿಸಿ, ಕೆಎಸ್‌ಆರ್‌ಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ, ಕೆಕೆಆರ್‌ಟಿಸಿ ನಿಗಮಗಳ ಎಲ್ಲ ಬಸ್‌ಗಳಲ್ಲಿ ಶೇ.50 ಆಸನಗಳನ್ನು ಪುರುಷರಿಗೆ ಕಾಯ್ದಿರಿಸಲಾಗಿದೆ. 
  • ಶಕ್ತಿ ಯೋಜನೆಯಡಿ ನಾಲ್ಕು ಸಾರಿಗೆ ಸಂಸ್ಥೆಗಳಿಗೆ ತಗಲುವ ವೆಚ್ಚವನ್ನು ಸರ್ಕಾರದಿಂದ ಶೂನ್ಯ ಟಿಕೆಟ್/ಶಕ್ತಿ ಸ್ಮಾರ್ಟ್ ಕಾರ್ಡ್ ದತ್ತಾಂಶ ಆಧರಿಸಿ ಭರಿಸಲಾಗುವುದು. 
  • ಸೇವಾ ಸಿಂಧು ಮೂಲಕ ಅರ್ಜಿಗಳನ್ನು ಪಡೆದು, ಶಕ್ತಿ ಸ್ಮಾರ್ಟ್ ಕಾರ್ಡ್‌ ವಿತರಿಸುವ ಪ್ರಕ್ರಿಯೆ 3 ಮೂರು ತಿಂಗಳೊಳಗಾಗಿ ಪೂರ್ಣಗೊಳಿಸಲಾಗುತ್ತದೆ. 
  • ಶಕ್ತಿ ಸ್ಮಾರ್ಟ್ ಕಾರ್ಡ್‌ ವಿತರಿಸುವವರೆಗೆ ಭಾರತ ಸರ್ಕಾರ/ಕರ್ನಾಟಕ ಸರ್ಕಾರದ ಇಲಾಖೆ/ಸರ್ಕಾರಿ ಸ್ವಾಮ್ಯದ ಕಚೇರಿಗಳಿಂದ ವಿತರಿಸಿರುವ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ತೋರಿಸುವುದು ಕಡ್ಡಾಯವಾಗಿದೆ. 

ಜೂ.11ರಿಂದ ಬಸ್‌ಗಳಲ್ಲಿ ಉಚಿತ ಪ್ರಯಾಣ: ಮಹಿಳೆಯರ ಅನುಮಾನಕ್ಕೆ ಕ್ಲಾರಿಟಿ ನೀಡಿದ ಸಚಿವರು!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡ್ರಗ್ಸ್‌ ಆರ್ಭಟಕ್ಕೆ ಮದ್ಯ ಮಾರಾಟವೇ ಕುಸಿತ!
ಟೈಗರ್‌ ಜಿಂದಾ ಹೈ, ಕಿಂಗ್‌ ಈಸ್ ಅಲೈವ್‌: ಸಿಎಂ ಬಗ್ಗೆ ಸಚಿವ ಬೈರತಿ ಸುರೇಶ್ ಗುಣಗಾನ