ಬಿಜೆಪಿ ಅವಧಿಯಲ್ಲಿ ಸ್ಥಗಿತಗೊಳಿಸಿದ್ದ 4 ಕೃಷಿ ಡಿಪ್ಲೊಮಾ ಕಾಲೇಜುಗಳು ಪುನಾರಂಭ; ಶೀಘ್ರ ಪ್ರವೇಶ ಆರಂಭ

By Sathish Kumar KH  |  First Published Jul 15, 2024, 6:21 PM IST

ಕಳೆದ ಸರ್ಕಾರದ ಅವಧಿಯಲ್ಲಿ  ತಡೆಹಿಡಿಯಲಾಗಿದ್ದ ವಿವಿಧ ಕೃಷಿ ವಿವಿ ವ್ಯಾಪ್ತಿಯ ನಾಲ್ಕು ಡಿಪ್ಲೊಮಾ ಕಾಲೇಜುಗಳಿಗೆ ಮರು ಅನುಮತಿ  ನೀಡಲಾಗಿದೆ.


ಬೆಂಗಳೂರು (ಜು.15) : ಕಳೆದ ಸರ್ಕಾರದ ಅವಧಿಯಲ್ಲಿ  ತಡೆಹಿಡಿಯಲಾಗಿದ್ದ ವಿವಿಧ ಕೃಷಿ ವಿವಿ ವ್ಯಾಪ್ತಿಯ ನಾಲ್ಕು ಡಿಪ್ಲೊಮಾ ಕಾಲೇಜುಗಳಿಗೆ ಮರು ಅನುಮತಿ  ನೀಡಲಾಗಿದೆ.
ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ವ್ಯಾಪ್ತಿಯ ಮಂಡ್ಯ ವಿ.ಸಿ ಫಾರ್ಮ್, ಶಿವಮೊಗ್ಗ ಕೃಷಿ ವಿ.ವಿ ವ್ಯಾಪ್ತಿಯ ಉಡುಪಿ ಜಿಲ್ಲೆಯ ಬ್ರಹ್ಮಾವರ ಕಾಲೇಜು, ಧಾರವಾಡ ಕೃಷಿ ವಿ.ವಿ ವ್ಯಾಪ್ತಿಯ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕಾಲೇಜು ಮತ್ತು ರಾಯಚೂರು ಕೃಷಿ ವಿ.ವಿ ವ್ಯಾಪ್ತಿಯ ಬೀದರ್ ಕೃಷಿ ಡಿಪ್ಲೊಮಾ ಕಾಲೇಜುಗಳು ಪುನಾರಂಭಕ್ಕೆ ರಾಜ್ಯದ ಸರ್ಕಾರದ ಅನುಮೋದನೆ ನೀಡಿದೆ. 

ಈ ಡಿಪ್ಲೊಮಾ ಕೋರ್ಸ್ ಗಳನ್ನು ಹಿಂದಿನ ಸರ್ಕಾರದ ಅವಧಿಯಲ್ಲಿ  ತಡೆಹಿಡಿಯಲಾಗಿತ್ತು. ಆದರೆ, ಕೃಷಿ ಡಿಪ್ಲೊಮಾ ಕೋರ್ಸ್ ಗಳ ಪುನಾರಂಭಕ್ಕೆ ವಿದ್ಯಾರ್ಥಿಗಳು ಹೆಚ್ಚಿನ  ಬೇಡಿಕೆ ಸಲ್ಲಿಸಿದ  ಹಿನ್ನಲೆಯಲ್ಲಿ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ವಿಶೇಷ ಕಾಳಜಿ  ವಹಿಸಿ  ಈ ನಾಲ್ಕು ಕಾಲೇಜುಗಳಲ್ಲಿ ಪ್ರವೇಶಾತಿ ಪ್ರಾರಂಭಕ್ಕೆ  ಅವಕಾಶ ಒದಗಿಸಿಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಬಂದು ಪ್ರವೇಶ ಪಡೆದು ಕೃಷಿ ಡಿಪ್ಲೊಮೊ ಕೋರ್ಸ್‌ಗಳನ್ನು ಈ ಹಿಂದಿನಂತೆ ಪಡೆದುಕೊಳ್ಳಬಹುದು. 

Latest Videos

undefined

ವಿಜಯಪುರ ಮೊಹರಂ: ನಿಗಿ ನಿಗಿ ಬೆಂಕಿ ಕೆಂಡದ ಮೇಲೆ ಕಂಬಳಿ ಹಾಸಿ ಕುಳಿತ ಭಕ್ತ

ಇನ್ನು ಮಂಡ್ಯ ಜಿಲ್ಲೆಯವರೇ ಆಗಿರುವ ಎನ್. ಚಲುವರಾಯಸ್ವಾಮಿ ಅವರು ತಮ್ಮ ತವರು ಜಿಲ್ಲೆಯ ಮಂಡ್ಯ ವಿ.ಸಿ. ಫಾರಂ ಕೃಷಿ ಕಾಲೇಜು ಡಿಪ್ಲೊಮೊ ಕಾಲೇಜು ಬಂದ್ ಆಗಿದ್ದರಿಂದ ಹೆಚ್ಚು ಮುತುವರಜಿ ವಹಿಸಿದ್ದರು. ಈ ಮೂಲಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ತಡೆ ಹಿಡಿದಿದ್ದ ಎಲ್ಲ ಕೃಷಿ ಡಿಪ್ಲೊಮೊ ಕಾಲೇಜುಗಳಿಗೆ ಮರು ಚಾಲನೆ ನೀಡಲಾಗಿದೆ.

ಬೀದ‌ರ್ ತಾಲ್ಲೂಕಿನ ಜನವಾಡ ಸಮೀಪದ ಕೃಷಿ ಸಂಶೋಧನಾ ಕೇಂದ್ರದ ಆವರಣದಲ್ಲಿ ನಡೆಸಲಾಗುತ್ತಿದ್ದ ಕನ್ನಡ ಕೃಷಿ ಡಿಪ್ಲೊಮಾ ಕೋರ್ಸ್ ಪ್ರಸಕ್ತ ವರ್ಷದಿಂದ ನಿಲ್ಲಿಸಲು ನಿರ್ಧರಿಸಲಾಗಿತ್ತು. ಈ ಭಾಗದ ರೈತರ ಮಕ್ಕಳ ಅನುಕೂಲಕ್ಕಾಗಿ 2012ರಲ್ಲಿ ಸಂಶೋಧನಾ ಕೇಂದ್ರದ ಆವರಣದಲ್ಲಿ ಕೃಷಿ ಡಿಪ್ಲೊಮಾ ಕೋರ್ಸ್ ಆರಂಭಿಸಲಾಗಿತ್ತು. ವಿದ್ಯಾರ್ಥಿಗಳ ಅಧ್ಯಯನಕ್ಕಾಗಿ ಪ್ರತ್ಯೇಕವಾದ ಕಟ್ಟಡ ನಿರ್ಮಿಸಲಾಗಿತ್ತು. ಪ್ರತಿ ವರ್ಷ 50 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುತ್ತಿತ್ತು. ಎಸ್ಸೆಸ್ಸೆಲ್ಸಿ ಪೂರೈಸಿದವರು ನೇರವಾಗಿ ಈ ಕೋರ್ಸ್ ಸೇರಲು ಅವಕಾಶ ಕಲ್ಪಿಸಲಾಗಿತ್ತು. ಕಳೆದ ಒಂದು ದಶಕದಿಂದ ಯಶಸ್ವಿಯಾಗಿ ಕೋರ್ಸ್ ನಡೆಸಿಕೊಂಡು ಬರಲಾಗಿತ್ತು. ಆದರೆ, 2023ರಲ್ಲಿ ಡಿಪ್ಲೊಮಾ ಕೋರ್ಸ್ ಬೋಧನೆಗೆ ಪ್ರತ್ಯೇಕ ಸಿಬ್ಬಂದಿ ಇರಲಿಲ್ಲವೆಂದು ಕೃಷಿ ಡಿಪ್ಲೊಮೊ ಕೋರ್ಸ್‌ ಸ್ಥಗಿತಗೊಳಿಸಲಾಗಿತ್ತು. ಈಗ ಪುನಃ ಕೃಷಿ ಡಿಪ್ಲೊಮೊಗೆ ಅವಕಾಶ ಮಾಡಿಕೊಟ್ಟಿರುವುದು ಸ್ಥಳೀಯ ರೈತರಿಗೆ ಅನುಕೂಲವಾಗಲಿದೆ.

ತರಕಾರಿ ಮಾರುವ ಮಹಿಳೆಯನ್ನು ಕೊಂದ ಮಂಗ; ಕಪಿಚೇಷ್ಟೆಗೆ ಬಲಿಯಾಯ್ತು ಜೀವ

click me!