Gruha Jyothi- ಕಾಂಗ್ರೆಸ್‌ನ ಉಚಿತ ವಿದ್ಯುತ್‌ ಜುಲೈನಿಂದ ಜಾರಿ: ಗೃಹಜ್ಯೋತಿಗೆ 10 ಷರತ್ತುಗಳು ಅನ್ವಯ

Published : Jun 05, 2023, 05:49 PM ISTUpdated : Jun 05, 2023, 05:52 PM IST
Gruha Jyothi- ಕಾಂಗ್ರೆಸ್‌ನ ಉಚಿತ ವಿದ್ಯುತ್‌ ಜುಲೈನಿಂದ ಜಾರಿ: ಗೃಹಜ್ಯೋತಿಗೆ 10 ಷರತ್ತುಗಳು ಅನ್ವಯ

ಸಾರಾಂಶ

ಕರ್ನಾಟಕ ಕಾಂಗ್ರೆಸ್‌ ಸರ್ಕಾರ 200 ಯುನಿಟ್‌ ಉಚಿತ ವಿದ್ಯುತ್‌ ನೀಡುವ ಗೃಹಜ್ಯೋತಿ ಯೋಜನೆಯನ್ನು ಜುಲೈ ತಿಂಗಳಿಂದ ಜಾರಿಗೊಳಿಸಲಾಗುತ್ತಿದ್ದು, 10 ಷರತ್ತುಗಳನ್ನು ವಿಧಿಸಿದೆ. 

ಬೆಂಗಳೂರು (ಜೂ.05): ರಾಜ್ಯ ವಿಧಾನಸಭಾ ಚುನಾವಣೆಯ ವೇಳೆ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ 200 ಯುನಿಟ್‌ ಉಚಿತ ವಿದ್ಯುತ್‌ ನೀಡುವ ಗೃಹಜ್ಯೋತಿ ಯೋಜನೆಯನ್ನು ಜುಲೈ ತಿಂಗಳಿಂದ ಜಾರಿಗೊಳಿಸಲಾಗುತ್ತಿದ್ದು, ಅದಕ್ಕೆ 10 ಷರತ್ತುಗಳನ್ನು ಒಡ್ಡಿದೆ. ಈ ಷರತ್ತುಗಳನ್ನು ಪೂರೈಸಿದವರಿಗೆ 200 ಯೂನಿಟ್‌ ವಿದ್ಯುತ್‌ ಉಚಿತವಾಗಿ ಲಭ್ಯವಾಗಲಿದೆ.

ಗೃಹ ಜ್ಯೋತಿ" ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್‌ಗಳವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ (ಆರ್ಥಿಕ ವರ್ಷ 2022-23ರ ಬಳಕೆಯ ಆಧಾರದನ್ವಯ) ಯೂನಿಟ್‌ಗಳ ಮೇಲೆ ಶೇ.10ರಷ್ಟು ಹೆಚ್ಚಿನ ಬಳಕೆಯ ಮಿತಿಯನ್ನು ಅನುಮತಿಸಿ, ಅದಕ್ಕನುಗುಣವಾಗಿ ವಿದ್ಯುತ್ ಬಿಲ್ಲಿನ ಮೊತ್ತವನ್ನು ಉಚಿತವಾಗಿ ಒದಗಿಸಲಾಗುತ್ತಿದೆ. ಹಾಗೂ 200 ಯೂನಿಟ್‌ಗಳ ಬಳಕೆಯನ್ನು ಮೀರಿದ ಗ್ರಾಹಕರು ಪೂರ್ಣ ವಿದ್ಯುತ್ ಬಿಲ್ಲನ್ನು ಪಾವತಿಸಲು ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದೆ.

ಉಚಿತ ವಿದ್ಯುತ್‌ ಪಡೆಯಲು ಬೇಕಾದ ಷರತ್ತುಗಳು: 
1. ಈ ಯೋಜನೆಯು ಗೃಹ ಬಳಕೆಯ ವಿದ್ಯುತ್‌ ಸಂಪರ್ಕಗಳಿಗೆ ಮಾತ್ರ ಅನ್ವಯವಾಗುತ್ತದೆ; ವಾಣಿಜ್ಯ ಉದ್ದೇಶಗಳಿಗೆ ವಿದ್ಯುತ್ ಉಪಯೋಗಿಸಿದಲ್ಲಿ ಅನ್ವಯವಾಗುವುದಿಲ್ಲ. 
2. ಪ್ರತಿ ತಿಂಗಳ ಮಿಟರ್ ರೀಡಿಂಗ್ ಮಾಡಿದಾಗ, ಒಟ್ಟು ವಿದ್ಯುತ್ ಬಳಕೆಯ ಪ್ರಮಾಣಕ್ಕೆ ಬಿಲ್ಲನ್ನು ನಮೂದಿಸುವುದು.
3. ಗೃಹ ವಿದ್ಯುತ್‌ ಬಳಕೆದಾರನ ಅರ್ಹ ಮೊತ್ತವನ್ನು ಬಿಲ್‌ನಲ್ಲಿ ಕಡಿತಗೊಳಿಸಿ, ಉಳಿದ ಮೊತ್ತವನ್ನು ಗ್ರಾಹಕರಿಗೆ net bill ನೀಡುವುದು ಹಾಗೂ ಗ್ರಾಹಕರು net bill ನ್ನು ಪಾವತಿಸುವುದು. 
4. ಅರ್ಹ ಯೂನಿಟ್ / ಮೊತ್ತಕ್ಕಿಂತ ಒಳಗೆ ಬಿಲ್ ಆಗಿದ್ದಲ್ಲಿ ಅಂತಹ ಗ್ರಾಹಕರಿಗೆ ಶೂನ್ಯ ಬಿಲ್ಲನ್ನು ನೀಡಲಾಗುವುದು.
5. ಈ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವುದು.
6. ಪ್ರತಿ ಫಲಾನುಭವಿಯು ತನ್ನ Customer ID / Account ID ಅನ್ನು ಆಧಾರ್‌ಗೆ ಕಡ್ಡಾಯವಾಗಿ ಜೋಡಣೆ ಮಾಡುವುದು.
7. ಪ್ರಸ್ತುತ ಚಾಲ್ತಿಯಲ್ಲಿರುವ ಭಾಗ್ಯ ಜ್ಯೋತಿ/ ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ ಜ್ಯೋತಿ ಯೋಜನೆಯ ಫಲಾನುಭವಿ ಗ್ರಾಹಕರುಗಳನ್ನು ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಸೇರ್ಪಡಿಸುವುದು.
8. ದಿನಾಂಕ 30.06.2023ರ ಅಂತ್ಯಕ್ಕೆ (ಜೂನ್ 2023ರ ಮಾಹೆಯಲ್ಲಿ ಬಳಸಿದ ವಿದ್ಯುತ್‌ ಪ್ರಮಾಣಕ್ಕೆ ಜುಲೈ 2023ರಲ್ಲಿ ವಿತರಿಸಿದ ಬಿಲ್ಲಿನ ಮೊತ್ತ ಒಳಗೊಂಡಂತೆ) ಬಾಕಿ ಇರುವ ವಿದ್ಯುತ್ ಶುಲ್ಕದ ಬಾಕಿ ಮೊತ್ತವನ್ನು 3 ತಿಂಗಳೊಳಗೆ ಪಾವತಿಸತಕ್ಕದ್ದು, ಬಾಕಿ ಮೊತ್ತವನ್ನು ನಿಗದಿತ ಅವಧಿಯೊಳಗೆ ಪಾವತಿಸದಿದ್ದಲ್ಲಿ ಅಂತಹ ಗ್ರಾಹಕರ ವಿದ್ಯುತ್‌ ಸ್ಥಾವರಗಳ ಸಂಪರ್ಕವನ್ನು ಕಡಿತಗೊಳಿಸಲಾಗುವುದು. 
9. ಗೃಹ ವಿದ್ಯುತ್‌ ಗ್ರಾಹಕರ ಸ್ಥಾವರಗಳಿಗೆ ಮಾಪಕವನ್ನು ಅಳವಡಿಸುವುದು ಹಾಗೂ ಮಾಪಕ ಓದುವುದು ಕಡ್ಡಾಯವಾಗಿರುತ್ತದೆ.
10. ಗೃಹ ವಿದ್ಯುತ್ ಬಳಕೆದಾರರ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಸ್ಥಾವರಗಳಿದ್ದಲ್ಲಿ, ಒಂದು ಸ್ಥಾವರಕ್ಕೆ ಮಾತ್ರ ಈ ಯೋಜನೆಯಡಿಯ ಸೌಲಭ್ಯಕ್ಕೆ ಅರ್ಹರಾಗುವರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಉಡುಪಿ: ಧರ್ಮ-ಸಂವಿಧಾನ ಬೇರೆಯಲ್ಲ:-ಪವನ್ ಕಲ್ಯಾಣ ಬಣ್ಣನೆ
ಪಬ್ಬಲ್ಲಿ ಮೊಬೈಲ್‌ ತರಲುಹೋದ ಕನ್ನಡಿಗ ಬಲಿ, ಗೋವಾ ಪಬ್ ದುರಂತಕ್ಕೆ ಕಾರಣವೇನು?