ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಗುಡ್‌ನ್ಯೂಸ್ ಕೊಟ್ಟ ಸರ್ಕಾರ, ಗೌರವಧನ 2000 ಏರಿಸಿ ಆದೇಶ

Published : May 16, 2025, 12:05 PM IST
ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಗುಡ್‌ನ್ಯೂಸ್ ಕೊಟ್ಟ ಸರ್ಕಾರ, ಗೌರವಧನ 2000 ಏರಿಸಿ ಆದೇಶ

ಸಾರಾಂಶ

ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರು ಮತ್ತು ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರಿಗೊಂದು ಖುಷಿಯ ಸುದ್ದಿ. ಅತಿಥಿ ಶಿಕ್ಷಕರು, ಉಪನ್ಯಾಸಕರ ಮಾಸಿಕ ಗೌರವಧನವನ್ನು ತಲಾ ₹2000 ಹೆಚ್ಚಿಸಿ ಸರ್ಕಾರ ಆದೇಶಿಸಿದೆ. ಇದು 2025-26ನೇ ಸಾಲಿನಲ್ಲಿ ನೇಮಕಗೊಳ್ಳುವ ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಅನ್ವಯಿಸಲಿದೆ.

ಬೆಂಗಳೂರು  (ಮೇ.16): ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರು ಮತ್ತು ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರಿಗೊಂದು ಖುಷಿಯ ಸುದ್ದಿ. ಅತಿಥಿ ಶಿಕ್ಷಕರು, ಉಪನ್ಯಾಸಕರ ಮಾಸಿಕ ಗೌರವಧನವನ್ನು ತಲಾ ₹2000 ಹೆಚ್ಚಿಸಿ ಸರ್ಕಾರ ಆದೇಶಿಸಿದೆ. ಇದು 2025-26ನೇ ಸಾಲಿನಲ್ಲಿ ನೇಮಕಗೊಳ್ಳುವ ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಅನ್ವಯಿಸಲಿದೆ.

2025ನೇ ಸಾಲಿನ ಬಜೆಟ್‌ನಲ್ಲಿ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವಧನವನ್ನು ₹2000 ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದರು. ಅದರಂತೆ ಈಗ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಗುರುವಾರ ಗೌರವಧನ ಹೆಚ್ಚಿಸಿ ಆದೇಶ ಮಾಡಿದೆ.

ಈ ಆದೇಶಾನುಸಾರ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಮಾಸಿಕ ಗೌರವಧನ ತಲಾ ₹2000 ಏರಿಕೆಯಾಗಲಿದೆ. ಇದರಿಂದ ಕಳೆದ ಸಾಲಿನಲ್ಲಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ಇದ್ದ ಮಾಸಿಕ ಗೌರವಧನವನ್ನು ₹10 ಸಾವಿರದಿಂದ ₹12 ಸಾವಿರಕ್ಕೆ ಹೆಚ್ಚಳವಾಗಲಿದೆ. ಪ್ರೌಢ ಶಾಲಾ ಅತಿಥಿ ಶಿಕ್ಷಕರಿಗೆ ಈಗಿರುವ ₹10,500 ಗೌರವಧನ ₹12,500ಕ್ಕೆ ಏರಿಕೆಯಾಗಲಿದೆ. ಅದೇ ರೀತಿ ಸರ್ಕಾರಿ ಪಿಯು ಕಾಲೇಜು ಅತಿಥಿ ಉಪನ್ಯಾಸಕರಿಗೆ ಈವರೆಗೆ ₹12 ಸಾವಿರ ಗೌರವಧನ ನೀಡಲಾಗುತ್ತಿತ್ತು. ಇನ್ನು ಮುಂದೆ ಅದು ₹14 ಸಾವಿರಕ್ಕೆ ಏರಿಕೆಯಾಗಲಿದೆ.

ಇದನ್ನೂ ಓದಿ: ಗ್ರೇಟರ್‌ ಬೆಂಗಳೂರು ಅಡಿ 3 ಪಾಲಿಕೆ ರಚನೆ : ಸಿಎಂ ಸಿದ್ದರಾಮಯ್ಯ

ಈ ಹಿಂದೆ 2022ರ ಜೂನ್‌ನಲ್ಲಿ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವಧನ ಹೆಚ್ಚಿಸಲಾಗಿತ್ತು. ನಂತರ 2023ರಲ್ಲೂ ಗೌರವಧನ ಹೆಚ್ಚಿಸಲು ಶಿಕ್ಷಣ ಇಲಾಖೆ ಆಯುಕ್ತರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಆದರೆ, ಸರ್ಕಾರ ಪರಿಗಣಿಸಿರಲಿಲ್ಲ. ಇದೀಗ ಎರಡು ವರ್ಷಗಳ ಬಳಿಕ ಗೌರವಧನ ಹೆಚ್ಚಳ ಮಾಡಿದೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ
ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!