NHM ಗುತ್ತಿಗೆ ನೌಕರರ ಬಹುದಿನದ ಬೇಡಿಕೆ ಈಡೇರಿಸಿದ ರಾಜ್ಯ ಸರ್ಕಾರ, ಶೇ.15 ರಷ್ಟು ವೇತನ ಹೆಚ್ಚಳ

Published : Mar 04, 2023, 04:58 PM IST
NHM ಗುತ್ತಿಗೆ ನೌಕರರ ಬಹುದಿನದ ಬೇಡಿಕೆ ಈಡೇರಿಸಿದ ರಾಜ್ಯ ಸರ್ಕಾರ, ಶೇ.15 ರಷ್ಟು ವೇತನ ಹೆಚ್ಚಳ

ಸಾರಾಂಶ

ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ  ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ NHM ಗುತ್ತಿಗೆ ನೌಕರರ ವೇತನ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು (ಮಾ.4): ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ  ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ NHM ಗುತ್ತಿಗೆ ನೌಕರರ ವೇತನ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಗರಿಷ್ಟ ಶೇ15 ರಷ್ಟು ವೇತನ ಹೆಚ್ಚಳ  ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು ಈ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಇಲಾಖೆ ಸಚಿವ ಡಾ| ಕೆ  ಸುಧಾಕರ್ ಟ್ವೀಟ್ ಸ್ಪಷ್ಟನೆ ನೀಡಿದ್ದಾರೆ.

'ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ನೌಕರರಿಗೆ ಶೇ.15ರಷ್ಟು ವೇತನ ಹೆಚ್ಚಿಸಿ ನಮ್ಮ ಸರ್ಕಾರ ಆದೇಶ ಮಾಡಿದ್ದು, NHM ಗುತ್ತಿಗೆ ನೌಕರರ ಬಹುದಿನದ ಬೇಡಿಕೆ ಈಡೇರಿಸಲಾಗಿದೆ' ಎಂದು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಬಹಿರಂಗಪಡಿಸಿದ್ದಾರೆ.

ಶೇ.17ರಷ್ಟು ವೇತನ ಹೆಚ್ಚಳ ಮಾಡಿ ಸರಕಾರ ಅಧಿಕೃತ ಆದೇಶ, ಮುಷ್ಕರ ವಾಪಸ್

ಪಿ.ಎನ್.ಶ್ರೀನಿವಾಸಾಚಾರಿ ಸಮಿತಿಯ ಶಿಫಾರಸ್ಸಿನನ್ವಯ ವೇತನ ಹೆಚ್ಚಳವಾಗಿದ್ದು. ತಮ್ಮ ಟ್ವೀಟ್ ನಲ್ಲಿ ಸಿಎಂ ಬೊಮ್ಮಾಯಿಗೆ ಸಚಿವ ಸುಧಾಕರ್ ಧನ್ಯವಾದ ಹೇಳಿದ್ದಾರೆ ಜೊತೆಗೆ ಸಂಬಳ ಹೆಚ್ಚಳ ಮಾಡಿದ ಬೊಮ್ಮಾಯಿ ಅವರಿಗೆ ನೌಕರರ ಪರವಾಗಿ ಕೃತಜ್ಞತೆ ಎಂದಿದ್ದಾರೆ.

ಶೇ.17ರಷ್ಟು ವೇತನ ಹೆಚ್ಚಳ ಆದೇಶಕ್ಕೆ ಒಪ್ಪಿದ್ದೇವೆ ಸಮಾಧಾನವಿಲ್ಲ, 3 ತಿಂಗಳು ಕಾಯ್ತೆವೆ ಎಂದ ನೌಕರರು

ವೇತನ ಹೆಚ್ಚಳದ ಆದೇಶ ಎಪ್ರಿಲ್ 1ರಿಂದ ಜಾರಿಗೆ ಬರುವಂತೆ ಸರ್ಕಾರ ಆದೇಶ ಹೊರಡಿಸಿದ್ದು ಬಹು ದಿನಗಳ ಬೇಡಿಕೆ ಈಡೇರಿಸಿದಂತಾಗಿದೆ. ಇನ್ನು ಎಷ್ಟು ವರ್ಷಗಳ ಅನುಭವ ಇದೆ ಎನ್ನುವ ಆಧಾರದ ಮೇಲೂ ವೇತನ ಹೆಚ್ಚಳದ ವಿಂಗಡಣೆ ಮಾಡಲಾಗಿದೆ. 3 ರಿಂದ 5 ವರ್ಷ ಸೇವೆ ಸಲ್ಲಿಸಿರುವವರಿಗೆ ಶೇ. 5ರಷ್ಟು, 5 ರಿಂದ 10 ವರ್ಷ ಸೇವೆ ಸಲ್ಲಿಸಿರುವರಿಗೆ ಶೇ.10  ಮತ್ತು 10 ವರ್ಷಕ್ಕಿಂತ ಹೆಚ್ಚಿನ ಸೇವೆ ಸಲ್ಲಿಸಿದವರಿಗೆ ಶೇ.15 ರಷ್ಟು ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮತ್ತು ಬೆಳಗಾವಿ ವಿಭಜನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ
ದೇವರ ದರ್ಶನ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ಬಸ್ ಮಂಡ್ಯ ಬಳಿ ಪಲ್ಟಿ, 8 ಮಂದಿಗೆ ಗಾಯ