Breaking News: ರಾಜ್ಯದ ಜಲಾಶಯಗಳಿಗೆ ಬಿಗಿ ಭದ್ರತೆ ಒದಗಿಸಲು ರಾಜ್ಯ ಸರ್ಕಾರದಿಂದ ತುರ್ತು ಆದೇಶ!

Published : May 07, 2025, 11:51 PM ISTUpdated : May 07, 2025, 11:55 PM IST
Breaking News: ರಾಜ್ಯದ ಜಲಾಶಯಗಳಿಗೆ ಬಿಗಿ ಭದ್ರತೆ ಒದಗಿಸಲು ರಾಜ್ಯ ಸರ್ಕಾರದಿಂದ ತುರ್ತು ಆದೇಶ!

ಸಾರಾಂಶ

ಭಾರತ ಮತ್ತು ಪಾಕಿಸ್ತಾನದ ನಡುವಿನ ಗಡಿ ಉದ್ವಿಗ್ನತೆ ಹಾಗೂ  ಯುದ್ಧ ಸಂಘರ್ಷದ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಅಣೆಕಟ್ಟುಗಳು ಮತ್ತು ಜಲಾಶಯಗಳಿಗೆ ಬಿಗಿ ಭದ್ರತೆ ಒದಗಿಸಲು ತುರ್ತು ಆದೇಶ ಹೊರಡಿಸಿದೆ.  ರಾಷ್ಟ್ರದಲ್ಲಿ ನಡೆಯುತ್ತಿರುವ ಪ್ರಸ್ತುತ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ, ರಾಜ್ಯದ ಜಲ ಸಂಪನ್ಮೂಲಗಳ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ.

ಬೆಂಗಳೂರು (ಮೇ.7): ಭಾರತ ಮತ್ತು ಪಾಕಿಸ್ತಾನದ ನಡುವಿನ ಗಡಿ ಉದ್ವಿಗ್ನತೆ ಹಾಗೂ  ಯುದ್ಧ ಸಂಘರ್ಷದ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಅಣೆಕಟ್ಟುಗಳು ಮತ್ತು ಜಲಾಶಯಗಳಿಗೆ ಬಿಗಿ ಭದ್ರತೆ ಒದಗಿಸಲು ತುರ್ತು ಆದೇಶ ಹೊರಡಿಸಿದೆ.  ರಾಷ್ಟ್ರದಲ್ಲಿ ನಡೆಯುತ್ತಿರುವ ಪ್ರಸ್ತುತ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ, ರಾಜ್ಯದ ಜಲ ಸಂಪನ್ಮೂಲಗಳ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ.

ರಾಜ್ಯ ಪೊಲೀಸ್ ಇಲಾಖೆಯ ಸಮನ್ವಯದೊಂದಿಗೆ, ಎಲ್ಲಾ ಅಣೆಕಟ್ಟುಗಳಿಗೆ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ತಕ್ಷಣ ನೇಮಿಸಲು ಆದೇಶಿಸಲಾಗಿದೆ. ರಾಜ್ಯದ ಜಲಾಶಯಗಳು, ವಿಶೇಷವಾಗಿ ಕಾವೇರಿ, ಕೃಷ್ಣ, ತುಂಗಭದ್ರಾ ಸೇರಿದಂತೆ ಪ್ರಮುಖ ಅಣೆಕಟ್ಟುಗಳಿಗೆ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಪಟ್ಟ ಯೋಜನಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಒಂದೇ ಏರ್‌ಸ್ಟ್ರೈಕ್‌ಗೆ ಸ್ವರ್ಗ ಸೇರಿದ ನೂರಾರು ಉಗ್ರರು; ಭಾರತಕ್ಕೆ ಸವಾಲು ಹಾಕಿದ ಪಾಕ್‌ ವಿರುದ್ಧ ಮತ್ತೆ ಗುಡುಗಿದ ಶಾ!

ಸರ್ಕಾರದ ಆದೇಶದ ಪ್ರಮುಖ ಅಂಶಗಳು:

  • ರಾಜ್ಯದ ಎಲ್ಲಾ ಅಣೆಕಟ್ಟುಗಳಿಗೆ ತಕ್ಷಣವೇ ಹೆಚ್ಚಿನ ಸಂಖ್ಯೆಯ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸುವುದು. 
  • ರಾಜ್ಯ ಪೊಲೀಸ್ ಇಲಾಖೆಯೊಂದಿಗೆ ಸಮನ್ವಯದಲ್ಲಿ 24/7 ಗಸ್ತು ಮತ್ತು ಕಣ್ಗಾವಲು ವ್ಯವಸ್ಥೆ. 
  • ತಮ್ಮ ನಿಗಮ ಮತ್ತು ವಲಯ ವ್ಯಾಪ್ತಿಯ ಅಣೆಕಟ್ಟುಗಳ ಸುರಕ್ಷತೆಗೆ ಸಂಬಂಧಪಟ್ಟ ಅಧಿಕಾರಿಗಳು ನೇರ ಹೊಣೆಗಾರರಾಗಿರುತ್ತಾರೆ.
  • ಭದ್ರತೆಯಲ್ಲಿ ಯಾವುದೇ ಚ್ಯುತಿಯಾದಲ್ಲಿ, ಸಂಬಂಧಪಟ್ಟ ಯೋಜನಾಧಿಕಾರಿ ಅಥವಾ ಅಣೆಕಟ್ಟು ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ.

ರಾಜ್ಯದ ಜಲ ಸಂಪನ್ಮೂಲ ಇಲಾಖೆಯ ಸಚಿವರು ಪ್ರಸ್ತುತ ರಾಷ್ಟ್ರೀಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ರಾಜ್ಯದ ಜಲಾಶಯಗಳ ಸುರಕ್ಷತೆಗೆ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಎಲ್ಲಾ ಅಣೆಕಟ್ಟುಗಳಿಗೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು, ಎಂದು ಹೇಳಿದ್ದಾರೆ.

ಈ ಆದೇಶವು ತಕ್ಷಣದಿಂದ ಜಾರಿಗೆ ಬಂದಿದ್ದು, ರಾಜ್ಯದ ಎಲ್ಲಾ ಜಿಲ್ಲಾಡಳಿತಗಳಿಗೆ ತಮ್ಮ ವ್ಯಾಪ್ತಿಯ ಅಣೆಕಟ್ಟುಗಳ ಸುರಕ್ಷತೆಯನ್ನು ಖಾತರಿಪಡಿಸಲು ಸೂಚಿಸಲಾಗಿದೆ. 

ಇಂದು ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (ಕೆಡಿಪಿ) ಸಭೆಯಲ್ಲಿ, ಸರ್ಕಾರದ ಮುಖ್ಯ ಕಾರ್ಯದರ್ಶಿಯವರು, ರಾಷ್ಟ್ರದ ಪ್ರಸ್ತುತ ಭದ್ರತಾ ಸ್ಥಿತಿಗತಿಯನ್ನು ಗಮನದಲ್ಲಿಟ್ಟುಕೊಂಡು, ರಾಜ್ಯದ ಎಲ್ಲಾ ಅಣೆಕಟ್ಟುಗಳು ಮತ್ತು ಜಲಾಶಯಗಳಿಗೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲು ಈ ಕೆಳಗಿನ ಅಧಿಕಾರಿಗಳಿಗೆ ತುರ್ತು ಸೂಚನೆ ನೀಡಿದ್ದಾರ

ಇದನ್ನೂ ಓದಿ: ಆಪರೇಷನ್ ಸಿಂಧೂರ್ ಎಫೆಕ್ಟ್: 11 ಏರ್ಪೋರ್ಟ್‌ಗಳೂ ಬಂದ್‌, ವಿಮಾನಗಳ ಹಾರಾಟ ರದ್ದು

ನಿರ್ದೇಶನವನ್ನು ಪಾಲಿಸಬೇಕಾದ ಅಧಿಕಾರಿಗಳು:

1.ವ್ಯವಸ್ಥಾಪಕ ನಿರ್ದೇಶಕರು, ಕಾವೇರಿ ನೀರಾವರಿ ನಿಗಮ ನಿಯಮಿತ, ಬೆಂಗಳೂರು

2.ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ನೀರಾವರಿ ನಿಗಮ ನಿಯಮಿತ, ಬೆಂಗಳೂರು

3.ವ್ಯವಸ್ಥಾಪಕ ನಿರ್ದೇಶಕರು, ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ, ಬೆಂಗಳೂರು

4.ವ್ಯವಸ್ಥಾಪಕ ನಿರ್ದೇಶಕರು, ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ, 
ಬೆಂಗಳೂರು

5.ಮುಖ್ಯ ಇಂಜಿನಿಯರ್, ನೀರಾವರಿ (ದಕ್ಷಿಣ) ಮೈಸೂರು

6.ಮುಖ್ಯ ಇಂಜಿನಿಯರ್, ಹೇಮಾವತಿ ನಾಲಾ ವಲಯ, ತುಮಕೂರು

7.ಮುಖ್ಯ ಇಂಜಿನಿಯರ್, ಹೇಮಾವತಿ ಯೋಜನೆ,ಗೊರೂರು

8.ಮುಖ್ಯ ಇಂಜಿನಿಯರ್, ನೀರಾವರಿ (ಉತ್ತರ)ಬೆಳಗಾವಿ

9.ಮುಖ್ಯ ಇಂಜಿನಿಯರ್, ತುಂಗಾ ಮೇಲ್ದಂಡೆ ವಲಯ, ಶಿವಮೊಗ್ಗ

10.ಮುಖ್ಯ ಇಂಜಿನಿಯರ್, ಮಲಪ್ರಭಾ ಯೋಜನಾ ವಲಯ, ಧಾರಾವಾಡ

11.ಮುಖ್ಯ ಇಂಜಿನಿಯರ್, ನೀರಾವರಿ ಕೇಂದ್ರ ವಲಯ, ಮುನಿರಾಬಾದ್

12.ಮುಖ್ಯ ಇಂಜಿನಿಯರ್, ನೀರಾವರಿ ಯೋಜನಾ ವಲಯ, ಕಲ್ಬುರ್ಗಿ

13.ಮುಖ್ಯ ಇಂಜಿನಿಯರ್, ಭದ್ರಾ ಮೇಲ್ದಂಡೆ ಯೋಜನಾ,ಚಿತ್ರದುರ್ಗ

14.ಮುಖ್ಯ ಇಂಜಿನಿಯರ್, ಅಣೆಕಟ್ಟು ವಲಯ ಆಲಮಟ್ಟಿ.

15.ಮುಖ್ಯ ಇಂಜಿನಿಯರ್, ಕಾಲುವೆ ವಲಯ-1 ಭೀಮರಾಯನ ಗುಡಿ

16.ಮುಖ್ಯ ಇಂಜಿನಿಯರ್, ಕಾಲುವೆ ವಲಯ-2, ರಾಂಪುರ

17.ಮುಖ್ಯ ಇಂಜಿನಿಯರ್, ಕಾರ್ಯಚರಣೆ ಮತ್ತು ನಿರ್ವಹಣೆ ವಲಯ, ನಾರಾಯಣಪುರ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ, ವಿವಿಐಪಿಗೆ ಐದು ಹೆಲಿಪ್ಯಾಡ್ ವ್ಯವಸ್ಥೆ!
'ರಸ್ತೆ-ಚರಂಡಿ ನಿರ್ಮಾಣದಿಂದ ಬಡವರು ಉದ್ದಾರ ಆಗ್ತಾರಾ?' ಗ್ಯಾರಂಟಿ ಸ್ಕೀಂ ಟೀಕೆಗೆ ಗೃಹಸಚಿವ ಪರಂ ತಿರುಗೇಟು!