Breaking: ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು!

Published : Feb 07, 2025, 01:18 PM ISTUpdated : Feb 07, 2025, 01:21 PM IST
Breaking: ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು!

ಸಾರಾಂಶ

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಕಡಿವಾಣ ಹಾಕಲು ಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರು ತಣ್ಣೀರೆರಚಿದ್ದಾರೆ. ಹಲವು ಸ್ಪಷ್ಟನೆಗಳನ್ನು ಕೇಳಿ ರಾಜ್ಯಪಾಲರು ಸುಗ್ರೀವಾಜ್ಞೆಯನ್ನು ವಾಪಸ್ ಕಳುಹಿಸಿದ್ದಾರೆ.

ಬೆಂಗಳೂರು (ಫೆ.07): ರಾಜ್ಯದಲ್ಲಿ ಪ್ರತಿನಿತ್ಯ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದಾಗಿ ಗ್ರಾಮೀಣ ಜನರು ಸಾವಿಗೆ ಶರಣಾಗುತ್ತಿರುವ ಬೆನ್ನಲ್ಲಿಯೇ ರಾಜ್ಯ ಸರ್ಕಾರದಿಂದ ಇದಕ್ಕೆ ಕಡಿವಾಣ ಹಾಕುವುದಕ್ಕೆ ಸುಗ್ರೀವಾಜ್ಞೆಯನ್ನು ಹೊರಡಿಸಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಆದರೆಮ ಇದೀಗ ರಾಜ್ಯಪಾಲರು ಹಲವು ಸ್ಪಷ್ಟನೆಯನ್ನು ಕೇಳಿ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ಅಂಕಿತವನ್ನು ಹಾಕದೇ ವಾಪಸ್ ಕಳುಹಿಸಿದ್ದಾರೆ.

'ಸರ್ಕಾರದ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರು ತಣ್ಣೀರೆರಚಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಸುಗ್ರೀವಾಜ್ಞೆಗೆ ಅಂಕಿತ ಹಾಕದೇ ವಾಪಸ್ ಕಳುಹಿಸಿದ್ದಾರೆ. ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕಲು ಮುಂದಾಗಿತ್ತು. ಇದೀಗ ರಾಜ್ಯಪಾಲರು ಹಲವು ಸ್ಪಷ್ಟನೆ ಕೇಳಿ ಸುಗ್ರೀವಾಜ್ಞೆ ವಾಪಸ್ ಕಳಿಸಿದ್ದಾರೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಗೆ ರಾಜಭವನದ ಮಾಹಿತಿ ಲಭ್ಯವಾಗಿದೆ. ರಾಜ್ಯಪಾಲರಿಂದ ಹಲವು ಸ್ಪಷ್ಟನೆ ಕೇಳಿ ಸರ್ಕಾರಕ್ಕೆ ಸುಗ್ರೀವಾಜ್ಞೆ ವಾಪಸ್ ಕಳಿಸಲಾಗಿದ್ದು, ಎಲ್ಲ ಸ್ಪಷ್ಟನೆಯನ್ನು ಕೊಟ್ಟ ನಂತರ ರಾಜ್ಯಪಾಲರು ಅಂಕಿತ ಹಾಕಲಿದ್ದಾರೆಯೇ ಎಂಬುದನ್ನು ಕಾದುನೊಡಬೇಕಿದೆ. 

ಸುಗ್ರೀವಾಜ್ಞೆಯಲ್ಲಿ ಸಾಲ ಪಡೆದವರ ರಕ್ಷಣೆಗೆ ಮಾತ್ರವೇ ಹರಿಸಿದೆ. ಸಹಜ ನ್ಯಾಯದ ಅಡಿಯಲ್ಲಿ ಸಾಲ‌ ಕೊಟ್ಟವರಿಗೆ ರಕ್ಷಣೆ ಕಾಣಿಸುತ್ತಿಲ್ಲ. ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ. ಮೈಕ್ರೋಫೈನಾನ್ಸ್ ಸಂಸ್ಥೆಗಳು 3 ಲಕ್ಷ ರೂ.ಗಿಂತ ಜಾಸ್ತಿ ಸಾಲ ಕೊಡುವುದಿಲ್ಲ. ನೀವು 5 ಲಕ್ಷ ದಂಡ‌ ಹೇಗೆ ಹಾಕುತ್ತೀರಾ? ಎಂದು ಪ್ರಶ್ನೆ ಮಾಡಿದ್ದಾರೆ. ಸಾಲ ಪಡೆಯುವವನ ಬಳಿ ಏನೂ ದಾಖಲೆ ತಗೆದುಕೊಳ್ಳಬಾರದು ಎಂದು ಹೇಳಿದ್ದೀರಾ? ಆದರೆ, ಇದು ಸರ್ಕಾರಿ ಸಂಸ್ಥೆಗಳ ಸಾಲದ ವೇಳೆ ಅನುಸರಿಸಬೇಕಾದ ಪರಿಸ್ಥಿತಿ ಎದುರಾಗಬಹುದು ಎಂದು ರಾಜ್ಯಪಾಲರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಮೈಕ್ರೋಫೈನಾನ್ಸ್‌ ವಿರುದ್ಧದ ಸುಗ್ರೀವಾಜ್ಞೆ ಸದ್ಯಕ್ಕೆ ಮುಂದಕ್ಕೆ: ಬಲಿಷ್ಠ ಕಾಯ್ದೆ ಜಾರಿ ಹೊಣೆ ಸಿಎಂಗೆ ವಹಿಸಲು ನಿರ್ಧಾರ

ಇನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಶಿಕ್ಷೆ ಪ್ರಮಾಣ 10 ವರ್ಷ ವಿಧಿಸಲಾಗಿದೆ. ಈ ಶಿಕ್ಷೆ ಪ್ರಮಾಣದಲ್ಲಿ ಯಾವುದೇ ಲಾಜಿಕ್ ಇಲ್ಲ. ಪ್ರಾಮಾಣಿಕವಾಗಿ ಸಾಲ‌ ಕೊಟ್ಟವರಿಗೂ ಇದು ಎಫೆಕ್ಟ್ ಆಗಲಿದೆ. ಪ್ರಾಮಾಣಿಕವಾಗಿ ಸಾಲ ಮರುಪಾವತಿ ಮಾಡುವವರಿಗೂ ಸಮಸ್ಯೆ ಆಗಲಿದೆ. ಬಜೆಟ್ ಅಧಿವೇಶನದ ಹತ್ತಿರವಾಗ್ತಿರುವಾಗ ಸದನದಲ್ಲಿ ಸಾದಕಬಾಧಕ ಚರ್ಚಿಸಿ. ಈಗ ಇರುವ ಕಾನೂನುಗಳಲ್ಲೇ ಪೊಲೀಸರು ಸರಿಯಾದ ಕ್ರಮ‌ಕೈಗೊಳ್ಳುತ್ತಿಲ್ಲ. ಪೊಲೀಸರು ಸರಿಯಾದ ಕ್ರಮಕೈಗೊಳ್ಳದೇ ಇರೋದಕ್ಕೆ ಮತ್ತೊಂದು ಕಾನೂನಿನ ಅಗತ್ಯತೆ ಕಾಣುತ್ತಿಲ್ಲ ಎಂದು ರಾಜ್ಯಪಾಲರು ಸುಗ್ರೀವಾಜ್ಞೆ ವಾಪಸ್ ಕಳಿಹಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ