
ಬೆಂಗಳೂರು (ಅ.22): ರಾಜ್ಯ ಸರ್ಕಾರವು ಆಡಳಿತಕ್ಕೆ ಪ್ರಮುಖ ಸರ್ಜರಿ ನಡೆಸಿದ್ದು, ಜಿಲ್ಲಾಧಿಕಾರಿಗಳು ಸೇರಿ ಬರೋಬ್ಬರಿ 17 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ. ನಾಲ್ಕು ಮಂದಿಗೆ ಹಾಲಿ ಜವಾಬ್ದಾರಿಯ ಜತೆಗೆ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ. ಕಂದಾಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್ ಅವರನ್ನು ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ವರ್ಗ ಮಾಡಲಾಗಿದೆ.
ಹೆಚ್ಚುವರಿ ಹೊಣೆ: ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್‌ಕುಮಾರ್ ಅವರಿಗೆ ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ, ಭೂಮಿ, ಯುಪಿಒಆರ್) ಪ್ರಧಾನ ಕಾರ್ಯದರ್ಶಿ ಸ್ಥಾನದ ಹೆಚ್ಚುವರಿ ಜವಾಬ್ದಾರಿ, ಸಾರಿಗೆ ಇಲಾಖೆ ಕಾರ್ಯದರ್ಶಿ ಡಾ.ಎನ್.ವಿ ಪ್ರಸಾದ್ ಅವರಿಗೆ ಕಾರ್ಮಿಕ ಇಲಾಖೆ ಕಾರ್ಯದರ್ಶಿ ಸ್ಥಾನದ ಹೆಚ್ಚುವರಿ ಹೊಣೆಗಾರಿಕೆ, ಬೆಂಗಳೂರು ಜಲಮಂಡಳಿ ಅಧ್ಯಕ್ಷ ಎನ್. ಜಯರಾಂ ಅವರಿಗೆ ಕಂದಾಯ ಇಲಾಖೆ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹುದ್ದೆ ನೀಡಲಾಗಿದೆ.
ದ.ಕ, ಚಾಮರಾಜನಗರ, ಉತ್ತರ ಕನ್ನಡ ಜಿಲ್ಲಾಧಿಕಾರಿಗಳ ವರ್ಗಾವಣೆ
ಜಿಲ್ಲಾಧಿಕಾರಿಗಳು ವರ್ಗ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಡಾ. ಬಗಾದಿ ಗೌತಮ್ ಅವರನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆ ನಿರ್ದೇಶಕರ ಹುದ್ದೆಗೆ, ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಎಂ.ಪಿ. ಮುಲ್ಲೈ ಮುಹಿಲನ್ ಅವರನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಹುದ್ದೆಗೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರನ್ನು ಮೈಸೂರು ಜಿಲ್ಲಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
6 ಮಂದಿಗೆ ಡೀಸಿ ಹುದ್ದೆ: ಹಟ್ಟಿ ಚಿನ್ನದ ಗಣಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಪ್ರಭುಲಿಂಗ ಕವಳಿಕಟ್ಟಿಅವರಿಗೆ ಉತ್ತರ ಕನ್ನಡ ಜಿಲ್ಲಾಧಿಕಾರಿ, ಡಾ.ಎಚ್.ಎನ್. ಗೋಪಾಲಕೃಷ್ಣ ಅವರಿಗೆ ಮಂಡ್ಯ ಜಿಲ್ಲಾಧಿಕಾರಿ, ಜಿ.ಆರ್.ಜೆ. ದಿವ್ಯಾ ಪ್ರಭು ಅವರಿಗೆ ಚಿತ್ರದುರ್ಗ ಜಿಲ್ಲಾಧಿಕಾರಿ, ರಘುನಂದನಮೂರ್ತಿ ಅವರಿಗೆ ಹಾವೇರಿ ಜಿಲ್ಲಾಧಿಕಾರಿ ಹಾಗೂ ಡಿ.ಎಸ್.ರಮೇಶ್ ಅವರಿಗೆ ಚಾಮರಾಜನಗರ ಜಿಲ್ಲಾಧಿಕಾರಿ ಹುದ್ದೆ ನೀಡಿ ವರ್ಗಾಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಿಇಓ ಡಾ. ಕುಮಾರ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ರಜೆ ಇಲ್ಲದೆ ವರ್ಗಾವಣೆಯಿಲ್ಲದೆ ಪೊಲೀಸ್ ಸಿಬ್ಬಂದಿ ಹೈರಾಣು!
ಬಾಕಿ ಅಧಿಕಾರಿಗಳು: ಉಳಿದಂತೆ ಪಿ.ಐ. ಶ್ರೀವಿದ್ಯಾ ಅವರು ಇ- ಆಡಳಿತ ಇಲಾಖೆಯ ಇ- ಆಡಳಿತ ಕೇಂದ್ರದ ಸಿಇಒ ಆಗಿ, ಕೆ.ಎಂ. ಜಾನಕಿ ಅವರು ಸಕಾಲ ಹೆಚ್ಚುವರಿ ಮಿಷನ್ ನಿರ್ದೇಶಕ, ಎಸ್. ಅಶ್ವತಿ ಅವರು ಪಶುಸಂಗೋಪನಾ ಇಲಾಖೆ ಆಯುಕ್ತ ಹುದ್ದೆಗೆ ವರ್ಗಗೊಂಡಿದ್ದಾರೆ. ಎಂ.ಎಸ್. ದಿವಾಕರ ಅವರನ್ನು ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಿಇಒ, ನಳಿನಿ ಅತುಲ್ ಅವರನ್ನು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿ ಅಧ್ಯಕ್ಷರ ಹುದ್ದೆಗೆ, ಭನ್ವಾರ್‌ಸಿಂಗ್ ಮೀನಾ ಅವರನ್ನು ಕೆಪಿಎಸ್ಸಿ ಪರೀಕ್ಷಾ ನಿಯಂತ್ರಕ, ಪ್ರಕಾಶ್ ಜಿ.ಟಿ. ನಿಟ್ಟಾಲಿ ಅವರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ, ಡಾ.ಎಸ್. ಆಕಾಶ್ ಅವರನ್ನು ಕೊಡಗು ಜಿಲ್ಲಾ ಪಂಚಾಯಿತಿ ಸಿಇಓ ಹುದ್ದೆಗಳಿಗೆ ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ