
ಬೆಂಗಳೂರು (ಜೂ.5): ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಮಹಿಳೆಯರಿಗೆ ಉಚಿತ ಬಸ್ ಸಂಚಾರದ ಶಕ್ತಿ ಯೋಜನೆಗೆ ರಾಜ್ಯ ಸರಕಾರ ಮಾರ್ಗಸೂಚಿ ಪ್ರಕಟಿಸಿದೆ. 6 ಕಂಡೀಷನ್ ಹಾಕಿ ಈ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯದೊಳಗೆ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶ ಇದ್ದು, ಐಷಾರಾಮಿ ಬಸ್ ಗಳಲ್ಲಿ ಉಚಿತ ಪ್ರಯಾಣ ಇಲ್ಲ. ಬಿಎಂಟಿಸಿ ಬಸ್ಸುಗಳಲ್ಲಿ ಮಾತ್ರ ಪುರುಷರಿಗೆ ಶೇ. 50 ಮೀಸಲು ಆಸನ ಇಲ್ಲ. ಉಳಿದ ಎಲ್ಲಾ ನಿಗಮಗಳ ಬಸ್ಸುಗಳಲ್ಲಿ ಪುರುಷರಿಗೆ ಶೇ. 50 ಮೀಸಲು ಇಡಲು ಆದೇಶ ಹೊರಡಿಸಿದ್ದು, ಪುರುಷರಿಗೆ ಆಸನ ಮೀಸಲಿಟ್ಟಿರುವುದು ದೇಶದಲ್ಲೇ ಮೊದಲಾಗಿದೆ. ಇನ್ನು ಮಹಿಳೆಯರ ಉಚಿತ ಪ್ರಯಾಣಕ್ಕೆ ಮೂರು ತಿಂಗಳ ಅವಧಿಯೊಳಗೆ ಸ್ಮಾರ್ಟ್ ಕಾರ್ಡ್ ನೀಡಲು ತಿರ್ಮಾನ ತೆಗೆದುಕೊಳ್ಳಲಾಗಿದೆ. ಸ್ಮಾರ್ಟ್ ಕಾರ್ಡ್ ನೀಡುವ ತನಕ ಆಧಾರ ಕಾರ್ಡ್ ಸಹಿತ ಕೇಂದ್ರ ಸರ್ಕಾರ ವಿತರಿಸಿರುವ ಗುರುತಿನ ಕಾರ್ಡ್ ತೋರಿಸಿ ಪ್ರಯಾಣ ಮಾಡಬಹುದು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಉಚಿತ ಪ್ರಯಾಣಕ್ಕೆ 6 ಕಂಡೀಷನ್ ಹಾಕಿ ಯೋಜನೆಯ ಆದೇಶ ಹೊರಡಿಸಿದ ಸರ್ಕಾರ:
.ಪಂಚ ಗ್ಯಾರಂಟಿಗಳಿಗೆ ಮುಹೂರ್ತ ಫಿಕ್ಸ್ : ಎಲ್ಲಾ ಯೋಜನೆಗಳಿಗೆ ಒಂದೇ ಕಡೆ ಅರ್ಜಿ ಸಲ್ಲಿಸಬಹುದಾ..?
ರಾಜ್ಯದ ಎಲ್ಲಾ ಮಹಿಳಾ ಪ್ರಯಾಣಿಕರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಒದಗಿಸುವ ಶಕ್ತಿ ಯೋಜನೆ"ಯನ್ನು ಜಾರಿಗೊಳಿಸಲು ಆಡಳಿತಾತ್ಮಕ ಅನುಮೋದನೆಯನ್ನು ಸರಕಾರ ನೀಡಿದೆ. 'ಶಕ್ತಿ ಯೋಜನೆ"ಯಡಿ ರಾಜ್ಯದ ಎಲ್ಲಾ ಮಹಿಳೆಯರು ನಾಲ್ಕು ಸಾರಿಗೆ ಸಂಸ್ಥೆಗಳ ಸಾಮಾನ್ಯ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಸೌಲಭ್ಯ ಒದಗಿಸಲು ತಾತ್ವಿಕ ಅನುಮೋದನೆ ನೀಡಿ ಆದೇಶ ಹೊರಡಿಸಿದೆ. ಅದರಂತೆ ಈ ಕೆಳಗಿನ ನಾಲ್ಕು ಬಸ್‌ಗಳಲ್ಲಿ ಪ್ರಯಾಣಿಸಬಹುದು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕ.ರಾ.ರ.ಸಾ.ನಿಗಮ),
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬೆಂ.ಮ.ಸಾ.ಸಂಸ್ಥೆ),
ವಾಯುವ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ವಾ.ಕ.ರ.ಸಾ.ಸಂಸ್ಥೆ)
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ (ಕ.ಕ.ರ.ಸಾ.ನಿಗಮ)
Congress guarantee: 11ರಿಂದ ಬಸ್‌ಗಳಲ್ಲಿ ಮಹಿಳೆಯರಿಗೆ ಪ್ರಯಾಣ ಫ್ರೀ; ಆದ್ರೂ ಸಿಗುತ್ತೆ ಟಿಕೆಟ್!
ಇದಕ್ಕೂ ಮುನ್ನ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಜೂನ್ 11 ರಿಂದ ಉಚಿತ ಪ್ರಯಾಣಕ್ಕೆ ಚಾಲನೆ ನೀಡಲಿದ್ದೇವೆ. ವಿಧಾನಸೌಧದ ಮುಂಭಾಗದಲ್ಲೇ ಈ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತೇವೆ. ಸಾರಿಗೆ ಇಲಾಖೆಯ ನಿವೃತ್ತ ನೌಕರರಿಗೆ ಉಚಿತ ಬಸ್ ಪಾಸ್ ವಿಚಾರದ ಬಗ್ಗೆ ಬೇಡಿಕೆಯಿದೆ ಈ ಬಗ್ಗೆ ಮಾತಾಡುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ