ಸಂಡೇ ಲಾಕ್‌ಡೌನ್‌ ಎಲ್ಲಿಂದ ಎಲ್ಲಿವರೆಗೆ? ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

By Suvarna News  |  First Published Jun 28, 2020, 7:16 PM IST

ಸಂಡೇ ಲಾಕ್‌ಡೌನ್ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಎಲ್ಲಿಂದ ಎಲ್ಲಿವರೆಗೆ?  ಎನ್ನುವುದನ್ನು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.


ಬೆಂಗಳೂರು, (ಜೂನ್.28): ಜುಲೈ 5 ಭಾನುವಾರದಿಂದ ಮುಂದಿನ ಆಗಸ್ಟ್ 2 ರವರೆಗೆ ಎಲ್ಲ ಭಾನುವಾರಗಳಂದು ಸಂಪೂರ್ಣ ಲಾಕ್ ಡೌನ್ ಮಾಡಲು ಸರ್ಕಾರ ತೀರ್ಮಾನಿಸಿದ್ದು, ಇಂದು (ಭಾನುವಾರ) ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅಧಿಕೃತ ಆದೇಶ ಹೊರಡಿಸಿದೆ.

ಅಗತ್ಯ ಸರಕು ಸಾಗಾಣಿಕೆಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಕೊರೋನಾ ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮ ಜಾರಿಗೆ ಮುಂದಾಗಿರುವ ಸರ್ಕಾರ, ಪ್ರತಿ ಭಾನುವಾರ ಲಾಕ್ಡೌನ್ ಜಾರಿಗೆ ಆದೇಶ ಹೊರಡಿಸಿದೆ.

Latest Videos

undefined

ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬರೋರಿಗೆ ರೂಲ್ಸ್ ಬದಲಿಸಿದ ಸರ್ಕಾರ

ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಪರಾರಮರ್ಶಿಸಿ ಕೊರೋನಾ ಸೋಂಕು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಹೆಚ್ಚಿನ ಮುಂಜಾಗ್ರತೆ ಕ್ರಮ ತೆಗೆದುಕೊಳ್ಳುವ ಸಂಬಂಧ ಭಾನುವಾರ ಲಾಕ್ಡೌನ್ ಜಾರಿಗೆ ತೀರ್ಮಾನ ಕೈಗೊಳ್ಳಲಾಗಿದೆ.

ಜುಲೈ 5 ರಿಂದ ಆಗಸ್ಟ್ 2 ರವರೆಗೆ ಎಲ್ಲಾ ಭಾನುವಾರಗಳಂದು ಪೂರ್ಣ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ಅಗತ್ಯ ಸರಕು-ಸೇವೆಗಳಿಗೆ ಅನುಮತಿ ಇರುತ್ತದೆ. ಎಲ್ಲಾ ಸರ್ಕಾರಿ ಇಲಾಖೆ ಕಚೇರಿ ನಿಗಮ ಮಂಡಳಿ ತುರ್ತು ಮತ್ತು ಅಗತ್ಯ ಸೇವೆ ಹೊರತುಪಡಿಸಿದ ಇಲಾಖೆಗಳನ್ನು ಎರಡನೇ ಶನಿವಾರ ಮತ್ತು 4ನೇ ಶನಿವಾರ ಸೇರಿ ಜುಲೈ 10 ರಿಂದ ಎಲ್ಲಾ ಶನಿವಾರ ಆಗಸ್ಟ್ 8 ರವರೆಗೆ ಮುಚ್ಚಲ್ಪಡುತ್ತದೆ.

ಅದೇ ರೀತಿ ರಾಜ್ಯಾದ್ಯಂತ ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅಗತ್ಯ ವಸ್ತು ಸೇವೆ ಹೊರತುಪಡಿಸಿ ಉಳಿದ ವ್ಯಕ್ತಿಗಳ ಓಡಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ  ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

click me!