ರಾಜ್ಯಾದ್ಯಂತ ಜೂ.27ರಂದು ಕೆಂಪೇಗೌಡ ಜಯಂತಿ: ಮೂವರಿಗೆ ಪ್ರಶಸ್ತಿ ಪ್ರದಾನ

By Sathish Kumar KH  |  First Published Jun 22, 2023, 5:36 PM IST

ರಾಜ್ಯಾದ್ಯಂತ ಜೂನ್‌ 27ರಂದು ತಾಲೂಕು ಮಟ್ಟದಲ್ಲಿ ವಿಜೃಂಭಣೆಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಣೆ ಮಾಡುವ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.


ಬೆಂಗಳೂರು (ಜೂ.22): ರಾಜ್ಯಾದ್ಯಂತ ಜೂನ್‌ 27ರಂದು ತಾಲೂಕು ಮಟ್ಟದಲ್ಲಿ ವಿಜೃಂಭಣೆಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಣೆ ಮಾಡುವ ಬಗ್ಗೆ ರಾಜ್ಯ ಸರ್ಕಾರದಿಂದ ನಿರ್ಧಾರ ಮಾಡಲಾಗಿದೆ. ಜೊತೆಗೆ, ರಾಜ್ಯದ ಮೂವರು ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. 

ರಾಜ್ಯದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಮಾಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಿದ ಸರ್ಕಾರ ಜೂ.27 ರಂದು ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ರಾಜ್ಯಾದ್ಯಂತ ವಿಜೃಂಭಣೆಯಿಂದ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ತಾಲೂಕು ಮಟ್ಟದಲ್ಲಿ ಸರ್ಕಾರದ ವತಿಯಿಂದ ಕೆಂಪೇಗೌಡರ ಜಯಂತಿ ಆಚರಣೆ ಮಾಡುವುದಕ್ಕೆ ನಿರ್ಧರಿಸಲಾಗಿದ್ದು, ಬೆಂಗಳೂರಿನ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ರಾಜ್ಯಮಟ್ಟದ ದೊಡ್ಡ ಕಾರ್ಯಕ್ರಮ ಆಚರಣೆ ಮಾಡಲು ತೀರ್ಮಾನಿಸಲಾಗಿದೆ. 

  • ಕೆಂಪೇಗೌಡ ಜಯಂತಿ ಕುರಿತ ಪೂರ್ವಭಾವಿ ಸಭೆಯ ಪ್ರಮುಖ ನಿರ್ಧಾರಗಳು: 
  • 1) ಕೆಂಪೇಗೌಡ ಜಯಂತಿ ಕಾರ್ಯಕ್ರಮ ಯಾವುದೇ ಜಾತಿ ಧರ್ಮ ಮತ್ತು ಭಾಷೆಗೆ ಸೀಮಿತ ಅಲ್ಲ.
  • 2)ಸಂಸ್ಕೃತಿ ಇಲಾಖೆ ಕಡೆಯಿಂದ ಜೂನ್ 27 ರಂದು ರಾಜ್ಯದ ಎಲ್ಲ ತಾಲೂಕಿನಲ್ಲೂ ರಾಜ್ಯ ಮಟ್ಟದ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಕಡ್ಡಾಯ ಆಚರಣೆಗೆ ಸೂಚನೆ.
  • 3) ಮಾಗಡಿ ಯಲಹಂಕ , ಕೆಂಪಾಂಬುದಿ ಕೆರೆ ಲಾಲ್ ಬಾಗ್ ಸೇರಿದಂತೆ ನಗರದ 5 ಕಡೆಗಳಿಂದ ಜ್ಯೋತಿ ಹಿಡಿದು ವಿಧಾನಸೌಧಕ್ಕೆ ಜಾತ್ರಾ ಮೆರವಣಿಗೆ.
  • 4) ಬೆಳಗ್ಗೆ 9 ಗಂಟೆಗೆ ಆರಂಭವಾಗಲಿರುವ ಮೆರವಣಿಗೆಯನ್ನು ಸಚಿವರು ಉದ್ಘಾಟಿಸಲಿದ್ದಾರೆ.
  • 5) 12 ಗಂಟೆಗೆ ವಿಧಾನಸೌಧದ ಎದುರಿರುವ ಕೆಂಪೇಗೌಡ ಪ್ರತಿಮೆಯ ಬಳಿ ಮೆರವಣಿಗೆ ಆಗಮನ.
  • 6) ಮಧ್ಯಾಹ್ನ 12 ಗಂಟೆಯ ನಂತರ ಬ್ಯಾಂಕ್ವೆಟ್ ಹಾಲ್ ನಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ.
  • 7) ಮೂರು ಜನ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವ.
  • 8) ಬಿಎಲ್ ಶಂಕರ್ ನೇತೃತ್ವದಲ್ಲಿ ಸಾಧಕರ ಆಯ್ಕೆ.
  • 9) ಬೆಂಗಳೂರು ನಗರದಲ್ಲಿ 28 ರಿಂದ 5ರ ವರೆಗೆ ಶಾಸಕರ ಅನುಕೂಲಕ್ಕೆ ತಕ್ಕಂತೆ ಎಲ್ಲ ಬೆಂಗಳೂರಿನ ಎಲ್ಲ ಕ್ಷೇತ್ರದಲ್ಲೂ ಕಾರ್ಯಕ್ರಮ ಕಡ್ಡಾಯ ಆಚರಿಸಬೇಕು.
  • 10) ಜುಲೈ 9ನೇ ತಾರೀಖು ಬಿವಿಎಂಪಿ ವತಿಯಿಂದ ಪ್ರಶಸ್ತಿ ಪ್ರಧಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ
  • 11) ಬಿಬಿಎಂಪಿ ವಾರ್ಡ್ ಮಟ್ಟದ ಪ್ರಶಸ್ತಿಗೆ 198 ಜನ ಸಾಧಕರನ್ನು ಆಯ್ಕೆ ಮಾಡಲಾಗುವುದು . ಸಾಧಕರ ಆಯ್ಕೆಗೆ ಕಮಿಟಿ ರಚನೆ ಮಾಡಲಾಗುವುದು.
  • 12) ಎಲ್ಲ ಜಾತಿ ಧರ್ಮಗಳ ಸಾಧಕರಿಗೂ ಪ್ರಶಸ್ತಿ ನೀಡುವ ಉದ್ದೇಶ.
  • 13) ಕ್ರೀಡೆ ಸಾಹಿತಿ ಸಮಾಜಸೇವೆ ಮಾನದಂಡದ ಅಡಿಯಲ್ಲಿ ಸಾಧಕರ ಆಯ್ಕೆ.
  • 14) ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಾಸನದಲ್ಲೂ ಪ್ರತ್ಯೇಕ ರಾಜ್ಯಮಟ್ಟದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆ ಕಾರ್ಯಕ್ರಮ ಹಾಗೆ ಮುಂದುವರೆಯಲಿದೆ.

Tap to resize

Latest Videos

click me!