Mekedatu Padayatre: ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಸೇರಿ 30 ಜನರ ವಿರುದ್ಧ ಎಫ್‍ಐಆರ್

By Suvarna NewsFirst Published Jan 10, 2022, 1:06 PM IST
Highlights

ಮೇಕೆದಾಟು ಪಾದಯಾತ್ರೆ ನಡೆಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅದ್ಯಕ್ಷ ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಜಿ. ಪರಮೇಶ್ವರ್ ಸೇರಿದಂತೆ 30 ಜನರ ವಿರುದ್ಧ ರಾಜ್ಯ ಬಿಜೆಪಿ ಸರಕಾರ ಎಫ್‌ಐಆರ್‌ ದಾಖಲಿಸಿದೆ.

ರಾಮನಗರ: ಕಾಂಗ್ರೆಸ್ ಪಕ್ಷದ ವತಿಯಿಂದ ಜ.9ರ ಭಾನುವಾರ ಪ್ರಾರಂಭವಾದ ಮೇಕೆದಾಟು ಅಣೆಕಟ್ಟು ಯೋಜನೆಯ ತ್ವರಿತ ಜಾರಿಗೆ ಆಗ್ರಹಿಸಿ ಪಾದಯಾತ್ರೆ ಪ್ರಾರಂಭವಾದ ಸ್ಥಳ ಸಂಗಮದಲ್ಲಿ ಪಾಲ್ಗೊಂಡಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅದ್ಯಕ್ಷ ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಜಿ. ಪರಮೇಶ್ವರ್ ಸೇರಿದಂತೆ 30 ಜನರ ಮೇಲೆ ರಾಮನಗರ ಪೊಲೀಸರು ಸೋಮವಾರ ಎಫ್‍ಐಆರ್ ದಾಖಲಿಸಿದ್ದಾರೆ.

ಮೇಕೆದಾಟು ಅಣೆಕಟ್ಟು ಯೋಜನೆಯ ತ್ವರಿತ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ರವಿವಾರದಿಂದ ಹಮ್ಮಿಕೊಂಡಿರುವ ಪಾದಯಾತ್ರೆ ವೇಳೆ ವಾರಾಂತ್ಯ ಕರ್ಫ್ಯೂ ಮಾರ್ಗಸೂಚಿ ಉಲ್ಲಂಘಿಸಿದ ಆರೋಪದಲ್ಲಿ  ಈ ಎಫ್‍ಐಆರ್ ದಾಖಲಾಗಿದೆ.

ವೇದಿಕೆ ಕಾರ್ಯಕ್ರಮದಲ್ಲಿ ಆಸೀನರಾಗಿದ್ದವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಸರ್ಕಾರದ ಆದೇಶದಂತೆ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಕನಕಪುರ ತಾಲ್ಲೂಕಿನ ಸಂಗಮ ಪ್ರದೇಶದ ಸುತ್ತಮುತ್ತ ವಾರಾಂತ್ಯದಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಹೇರಿತ್ತು. ಇದನ್ನು ಉಲ್ಲಂಘಿಸಿ, ಜನರನ್ನು ಸೇರಿಸಿ ಪಾದಯಾತ್ರೆ ಮಾಡಿದ ಕಾರಣ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಸಾತನೂರು ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Congress Padayatra: ಕೊರೋನಾ ಯಾರಿಗೂ ಹೇಳಿ, ಕೇಳಿ ಬರುವುದಿಲ್ಲ: ಆನಂದ್‌ ಸಿಂಗ್‌

ಕರ್ನಾಟಕದಲ್ಲಿ ಒಮಿಕ್ರಾನ್ ಹಾಗೂ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸರಕಾರವು ಶುಕ್ರವಾರ ರಾತ್ರಿಯಿಂದ ಸೋಮವಾರ ಮುಂಜಾನೆಯವರೆಗೆ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಿತ್ತು. ವಾರಾಂತ್ಯ ಕರ್ಫ್ಯೂ ನಡುವೆಯೇ ಭಾನುವಾರ ಮೇಕೆದಾಟು ಪಾದಯಾತ್ರೆಗೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಸಮೀಪದ ಸಂಗಮದಲ್ಲಿ ರವಿವಾರ ಚಾಲನೆ ನೀಡಲಾಗಿತ್ತು.

ವೀಕೆಂಡ್ ಕರ್ಫ್ಯೂ ಮಾರ್ಗಸೂಚಿ ಉಲ್ಲಂಘಿಸಿದ ಆರೋಪದಲ್ಲಿ 30 ಮಂದಿಯ ವಿರುದ್ಧ ಐಪಿಸಿ ಸೆಕ್ಷನ್ 141, 143, 290 ಹಾಗೂ 336 ಕಲಂ ಅಡಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಈ ನಡುವೆ ಪಾದಯಾತ್ರೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ದೊಡ್ಡಾಲಹಳ್ಳಿಯಿಂದ ನಡಿಗೆ ಆರಂಭಿಸಲಾಗಿದೆ. ಡಿ.ಕೆ. ಶಿವಕುಮಾರ್ ಅವರ ಸ್ವಗ್ರಾಮವೂ ಆದ ದೊಡ್ಡಾಲಹಳ್ಳಿಯಿಂದ ಕನಕಪುರ ಕಡೆಗೆ ಪಾದಯಾತ್ರಿಗರು ಹೆಜ್ಜೆ ಇಟ್ಟಿದ್ದು, ಕಾಂಗ್ರೆಸ್ ನ‌ ಅನೇಕ ನಾಯಕರು ಸಾಥ್ ನೀಡಿದ್ದಾರೆ. ಈ ದಿನ ಒಟ್ಟು 15 ಕಿ.ಮೀ. ಕ್ರಮಿಸಲಿದ್ದಾರೆ ಎಂದು ತಿಳಿದುಬಂದಿದೆ.

Mekedatu Politics: ಕಾಂಗ್ರೆಸ್‌ ಪಾದಯಾತ್ರೆಯಿಂದ ಮೇಕೆದಾಟು ಇನ್ನಷ್ಟು ಕ್ಲಿಷ್ಟ: ಶೆಟ್ಟರ್‌

ಏನೇ ಬಂದರೂ ಹೋರಾಟ ನಿಲ್ಲಿಸಬೇಡಿ ಎಂದ ಖರ್ಗೆ: ಮೇಕೆದಾಟು ಯೋಜನೆಯ (Mekedatu Project) ಶ್ರೇಯಸ್ಸು ಕಾಂಗ್ರೆಸ್‌ಗೆ (Congress) ಹೋಗಬಾರದು ಎಂಬ ಕಾರಣಕ್ಕೆ ಪಾದಯಾತ್ರೆ ತಡೆಯಲು ಬಿಜೆಪಿ (BJP), ಜೆಡಿಎಸ್‌(JDS) ಪ್ರಯತ್ನಿಸುತ್ತಿವೆ. ಎಷ್ಟೇ ಅಡ್ಡಿ ಉಂಟಾದರೂ ಯಾವುದೇ ಕಾರಣಕ್ಕೂ ಹೋರಾಟ ನಿಲ್ಲಿಸಬೇಡಿ ಎಂದು ರಾಜ್ಯಸಭೆ ವಿರೋಧಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಕರೆ ನೀಡಿದ್ದಾರೆ. ಈ ಯೋಜನೆಯಿಂದ ತಮಿಳುನಾಡು(Tamil Nadu) ಸೇರಿದಂತೆ ಯಾರೊಬ್ಬರಿಗೂ ತೊಂದರೆ ಆಗುವುದಿಲ್ಲ. ಎರಡೂ ರಾಜ್ಯಗಳ ಜನರಿಗೆ ಈ ಯೋಜನೆ ನೆರವಾಗಲಿದೆ. ಹೀಗಾಗಿ ಈ ಯೋಜನೆಗೆ ಯಾವುದೇ ಅಡೆತಡೆ ಎದುರಾಗಬಾರದು ಎಂದಿದ್ದಾರೆ.

ಪಾದಯಾತ್ರೆ (Padayatra) ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯೋಜನೆಯಿಂದ ಬೆಂಗಳೂರಿಗೆ (Bengaluru) ಹಾಗೂ ಸುಮಾರು ಹಳ್ಳಿಗಳಿಗೆ 62 ಟಿಎಂಸಿ ಕುಡಿಯುವ ನೀರು (Drinking Water) ಸಿಗುತ್ತದೆ. ಜತೆಗೆ 400 ಮೆ.ವ್ಯಾ. ವಿದ್ಯುತ್‌ ಉತ್ಪಾದನೆ ಮಾಡಬಹುದು. ಜತೆಗೆ ತಮಿಳುನಾಡಿನ ಪಾಲಿನ ನೀರನ್ನು ಎಲ್ಲಾ ಕಾಲದಲ್ಲೂ ಬಿಡಲು ಸಹ ನೆರವಾಗುತ್ತದೆ. ಇಂತಹ ಉತ್ತಮ ಯೋಜನೆಗೆ ಸಿದ್ದರಾಮಯ್ಯ ಸರ್ಕಾರದಲ್ಲಿ ಎಂ.ಬಿ. ಪಾಟಿಲ್‌ ರೂಪ ಕೊಟ್ಟಿದ್ದರು. ಡಿ.ಕೆ. ಶಿವಕುಮಾರ್‌(DK Shivakumar) ಅವರು ಜಲ ಸಂಪನ್ಮೂಲ ಸಚಿವರಾದಾಗ ಪರಿಷ್ಕೃತ ಡಿಪಿಆರ್‌ನ್ನು ಕೇಂದ್ರಕ್ಕೆ ಕಳುಹಿಸಿದ್ದಾರೆ. ಈ ಯೋಜನೆ ಜಾರಿಯಾದರೆ ಬೆಂಗಳೂರಿನ ನೀರಿನ ಸಮಸ್ಯೆ ನೀಗುತ್ತದೆ ಎಂದಿದ್ದಾರೆ.

click me!