ಎರಡನೇ ಅಲೆ ಆತಂಕ : ಕೊರೋನಾ ನಿರ್ವಹಣೆಗೆ ಮುಂದಾದ ಸರ್ಕಾರ

Suvarna News   | Asianet News
Published : Mar 17, 2021, 03:19 PM IST
ಎರಡನೇ ಅಲೆ ಆತಂಕ : ಕೊರೋನಾ ನಿರ್ವಹಣೆಗೆ ಮುಂದಾದ ಸರ್ಕಾರ

ಸಾರಾಂಶ

ರಾಜ್ಯದಲ್ಲಿ ಕೊರೋನಾ ಮಹಾಮಾರಿ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಖಾಸಗಿ ಆಸ್ಪತ್ರೆಗಳ ಸಹಭಾಗಿತ್ವದಲ್ಲಿ ಪ್ರಕರಣ ನಿರ್ವಹಣೆಗೆ ಮುಂದಾಗಿದೆ. 

ಬೆಂಗಳೂರು (ಮಾ.17):  ರಾಜ್ಯದಲ್ಲಿ ಕೊರೋನಾ ಮಹಾಮಾರಿ ಮತ್ತೊಮ್ಮೆ ಹೆಚ್ಚಾಗಿದ್ದು ಎರಡನೇ ಅಲೆ ನಿರ್ವಹಣೆಗೆ ಆರೋಗ್ಯ ಇಲಾಖೆ ಮುಂದಾಗಿದೆ. 
ಖಾಸಗಿ ಸಹಭಾಗಿತ್ವದಲ್ಲಿ ಕೊರೋನಾ ನಿರ್ವಹಣೆಗೆ ಕ್ರಮ ಕೈಗೊಳ್ಳಲು ಸಭೆ ನಡೆಸಲು ಆರೋಗ್ಯ ಸಚಿವರು ಮುಂದಾಗಿದ್ದಾರೆ. 

FHAK ಮತ್ತು PHANA ಜೊತೆ ಆರೋಗ್ಯ ಸಚಿವ ಸುಧಾಕರ್ ವರ್ಚುವಲ್ ಸಭೆ ನಡೆಸಲಿದ್ದಾರೆ. (FHAK - FEDARETION OF HOSPITAL ASSOCIATION KARNATAKA)(PHANA - PRIVATE HOSPITAL AND NURSING ASSOCIATION)

ಸಭೆ ಬಳಿಕ ಖಾಸಗಿ ಸಹಭಾಗಿತ್ವದಲ್ಲಿ ಆಸ್ಪತ್ರೆಯಲ್ಲಿ ಬೆಡ್ ನಿಗದಿ ಕುರಿತು ಅಧಿಕೃತ ಘೋಷಣೆ ಮಾಡಲಿದ್ದಾರೆ. 

ಕರ್ನಾಟಕದಲ್ಲಿ ಮತ್ತೆ ಕೊರೋನಾ ಆತಂಕ: 24 ಗಂಟೆಗಳಲ್ಲಿ ಸಾವಿರ ಗಡಿದಾಟಿದ ಸೋಂಕಿತರ ಸಂಖ್ಯೆ .

ಹಂತ ಹಂತವಾಗಿ ಬೆಡ್ ಗಳನ್ನ ಪಡೆದುಕೊಳ್ಳಿ ಎಂದು  ಖಾಸಗಿ ಆಸ್ಪತ್ರೆಗಳು ಮನವಿ ಮಾಡಿದ್ದು,  ಮೊದಲು ಮೆಡಿಕಲ್ ಕಾಲೇಜುಗಳಲ್ಲಿ ಬೆಡ್ ಗಳನ್ನ ಪಡೆದುಕೊಳ್ಳಿ ಎಂದಿವೆ.

 ಕಾರ್ಪೊರೇಟ್ ಆಸ್ಪತ್ರೆಗಳಲ್ಲಿ ಬೆಡ್ ಪಡೆದುಕೊಳ್ಳಿ. ಬಳಿಕ 100 ಬೆಡ್ ಆಸ್ಪತ್ರೆಗಳು, ನಂತರ 50 ಬೆಡ್ ಆಸ್ಪತ್ರೆಗಳಿಗೆ ಬನ್ನಿ.  ಒಂದೇ ಬಾರಿ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಪಡೆಯುವುದು ಬೇಡ ಎಂದು ಖಾಸಗಿ ಆಸ್ಪತ್ರೆಗಳು ಮನವಿ  ಮಾಡಿವೆ. ಹೀಗಾಗಿ ಸರ್ಕಾರ ಯಾವ ನಿರ್ಧಾರ ಕೈಗೊಳ್ಳುತ್ತೆ ಕಾದು ನೋಡಬೇಕಿದೆ.

ಸಭೆ ಬಳಿಕ ಕೋವಿಡ್ ರೋಗಿಗಳಿಗೆ ಆಸಪತ್ರೆಗಳಲ್ಲಿ ಬೆಡ್ ಬಗ್ಗೆ ಆರೋಗ್ಯ ಸಚಿವ ಸುಧಾಕರ್ ಅಧಿಕೃತ ಘೋಷಣೆ ಮಾಡಲಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ