ಲಿವರ್‌ಪೂಲ್ ವಿಶ್ವವಿದ್ಯಾಲಯದೊಂದಿಗೆ ಒಪ್ಪಂದ ಮಾಡಿಕೊಂಡ ಕರ್ನಾಟಕ ಸರ್ಕಾರ

Published : Feb 07, 2025, 01:46 PM ISTUpdated : Feb 07, 2025, 01:47 PM IST
ಲಿವರ್‌ಪೂಲ್ ವಿಶ್ವವಿದ್ಯಾಲಯದೊಂದಿಗೆ ಒಪ್ಪಂದ ಮಾಡಿಕೊಂಡ ಕರ್ನಾಟಕ ಸರ್ಕಾರ

ಸಾರಾಂಶ

ಶಿಕ್ಷಣ ಮತ್ತು ಸಂಶೋಧನೆಯಲ್ಲಿ ಹೆಚ್ಚಿನ ಸಹಭಾಗಿತ್ವವನ್ನು ಉತ್ತೇಜಿಸುವ ಸಲುವಾಗಿ ಕರ್ನಾಟಕ ಸರ್ಕಾರ ಮತ್ತು ಲಿವರ್‌ಪೂಲ್ ವಿಶ್ವವಿದ್ಯಾಲಯವು ಒಂದು ಒಪ್ಪಂದಕ್ಕೆ ಸಹಿ ಹಾಕಿದೆ. ಈ ಒಪ್ಪಂದವು ಆವಿಷ್ಕಾರ ಕಾರ್ಯಕ್ರಮಗಳು ಮತ್ತು ಶಿಕ್ಷಣ ಸಹಕಾರವನ್ನು ಬಲಪಡಿಸುವ ಗುರಿಯನ್ನು ಹೊಂದಿದೆ.

ಬೆಂಗಳೂರು (ಫೆ.07): ಶಿಕ್ಷಣ ಹಾಗೂ ಸಂಶೋಧನೆಗೆ ಸಂಬಂಧಿಸಿದಂತೆ ಹೆಚ್ಚಿನ ಸಹಭಾಗಿತ್ವ ಉತ್ತೇಜಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮತ್ತು ಲಿವರ್ ಪೂಲ್ ವಿಶ್ವವಿದ್ಯಾಲಯಗಳು ಮಹತ್ವದ ಒಡಂಬಡಿಕೆಗೆ ಶುಕ್ರವಾರ ಸಹಿ ಹಾಕಿದವು.9

ಮುಖ್ಯಮಂತ್ರಿ ಸಿದ್ದರಾಮಯ್ಯ, ಭಾರಿ ಮತ್ತು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ಒಡಂಬಡಿಕೆ ಏರ್ಪಟ್ಟಿತು. ಬ್ರಿಟಿಷ್ ಡೆಪ್ಯುಟಿ ಹೈಕಮಿಷನ್ ನ ಬ್ರಿಟಿಷ್ ಕೌನ್ಸಿಲ್ ವಿಭಾಗದ ನಿರ್ದೇಶಕ ಜನಕ ಪುಷ್ಪನಾಥನ್, ಮಿಷನ್ ನ ಉಪ ಮುಖ್ಯಸ್ಥ ಜೇಮ್ಸ್ ಗೋಡ್ಬರ್, ಲಿವರ್ ಪೂಲ್ ವಿ.ವಿ.ಯ ಕುಲಪತಿ ಪ್ರೊ.ಟಿಮ್ ಜೋನ್ಸ್, ಮತ್ತು ಸಮ-ಕುಲಪತಿ ಪ್ರೊ.ತಾರಿಕ್ ಅಲಿ ಅವರು ಅಂಕಿತಕ್ಕೆ ಸಹಿ ಹಾಕಿದರು.

ಆವಿಷ್ಕಾರ ಕಾರ್ಯಕ್ರಮಗಳು ಹಾಗೂ ಶಿಕ್ಷಣ ಸಹಕಾರಕ್ಕೆ ಸಂಬಂಧಿಸಿದ ಸಹಭಾಗಿತ್ವವನ್ನು ಸದೃಢಗೊಳಿಸುವ ಜೊತೆಗೆ, ಅದನ್ನು ಉನ್ನತ ಸ್ತರಕ್ಕೆ ಕೊಂಡೊಯ್ಯಲು ಜಂಟಿ ಕಾರ್ಯತಂಡ ರಚಿಸುವ ಗುರಿಯನ್ನು ಕೂಡ ಒಡಂಬಡಿಕೆ ಹೊಂದಿದೆ. ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಉನ್ನತ ಶಿಕ್ಷಣ ಪರಿಷತ್ ನ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಕೆ.ಜಿ.ಚಂದ್ರಶೇಖರ ಸೇರಿದಂತೆ ಇತರರು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವರುಣಾ ಜನತೆಯ ಋಣ ತೀರಿಸಲು ಸಾಧ್ಯವಿಲ್ಲ, ಆದರೂ ಶ್ರಮಿಸುವೆ: ಯತೀಂದ್ರ ಸಿದ್ದರಾಮಯ್ಯ
ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ