ರಸಗೊಬ್ಬರ ಮಾರಾಟ ವೇಳೆ ನಿಯಮ ಮೀರಿದರೆ ಹುಷಾರ್‌: ರಾಜ್ಯ ಸರ್ಕಾರ

Kannadaprabha News   | Kannada Prabha
Published : Aug 03, 2025, 05:26 AM IST
urea

ಸಾರಾಂಶ

ರಾಜ್ಯದಲ್ಲಿ ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದಲ್ಲಿ ನಿಯಮಗಳ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೃಷಿ ಇಲಾಖೆ ಎಚ್ಚರಿಸಿದೆ.

  ಬೆಂಗಳೂರು :  ರಾಜ್ಯದಲ್ಲಿ ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದಲ್ಲಿ ನಿಯಮಗಳ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೃಷಿ ಇಲಾಖೆ ಎಚ್ಚರಿಸಿದೆ.  

ಇಲಾಖೆಯ ವಿಚಕ್ಷಣ ದಳ ಹಲವೆಡೆ ದಾಳಿ ನಡೆಸಿ 5.29 ಲಕ್ಷ ರು. ಮೌಲ್ಯದ ಅನಧಿಕೃತ ರಸಗೊಬ್ಬರ ಮತ್ತು ಕೀಟನಾಶಕ ವಶಪಡಿಸಿಕೊಂಡಿದ್ದು, ಮಾರಾಟಗಾರರ ಲೈಸೆನ್ಸ್‌ಗಳನ್ನು ಅಮಾನತಿನಲ್ಲಿ ಇಡಲಾಗಿದೆ. ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದವರು, ಕೆಲ ಸಗಟು ಮಾರಾಟಗಾರರು ತಮಗೆ ಹಂಚಿಕೆಯಾದ ಗೊಬ್ಬರವನ್ನು ಬೇರೆ ಜಿಲ್ಲೆಗಳಿಗೆ ಮಾರಾಟ ಮಾಡಿದ್ದು, ಇವರ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ ಎಂದು ಇಲಾಖೆ ತಿಳಿಸಿದೆ.

ರಸಗೊಬ್ಬರ ಕಾಳಸಂತೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯವಾದ ರಸಗೊಬ್ಬರ ಸರಬರಾಜು ಮಾಡದೆ ಅನ್ಯಾಯ ಎಸಗಿದೆ. ಈ ಸಂದರ್ಭದಲ್ಲಿ ಕಾಳಸಂತೆಕೋರರು ತಲೆ ಎತ್ತದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಅಸಹಾಕಾರದ ನಡುವೆಯೂ ರಾಜ್ಯದ ರೈತರಿಗೆ ಅನಾನುಕೂಲ ಆಗದಂತೆ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಈ ನಡುವೆ ರಸಗೊಬ್ಬರದ ಕೃತಕ ಅಭಾವ ಸೃಷ್ಟಿಸಿ ದುರ್ಲಾಭ ಮಾಡಿಕೊಳ್ಳಲು ಕಾಳಸಂತೆಕೋರರು ಪ್ರಯತ್ನಿಸುತ್ತಿರುವ ದೂರುಗಳು ಬಂದಿವೆ. ಈ ಬಗ್ಗೆ ತೀವ್ರ ನಿಗಾ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸಚಿವರು ಮತ್ತು ಶಾಸಕರ ಜೊತೆ ಸಭೆ ನಡೆಸುತ್ತಿದ್ದ ಸಿದ್ದರಾಮಯ್ಯ ಅವರು ಸಭೆ ನಡುವೆಯೇ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ದೂರವಾಣಿ ಮೂಲಕ ಮಾತನಾಡಿ ಸ್ಪಷ್ಟ ಸೂಚನೆ ನೀಡಿದರು ಎಂದು ತಿಳಿದುಬಂದಿದೆ. ಜಿಲ್ಲೆ ಮತ್ತು ತಾಲೂಕು, ಹೋಬಳಿ ಎಲ್ಲೂ ರಸಗೊಬ್ಬರಕ್ಕೆ ಕೃತಕ ಅಭಾವ ಸೃಷ್ಠಿಯಾಗಬಾರದು. ಈ ರೀತಿ ಅಭಾವ ಸೃಷ್ಟಿಸುತ್ತಿರುವವರ ಬಗ್ಗೆ ತೀವ್ರ ನಿಗಾ ಇಟ್ಡು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

'ರಸ್ತೆ-ಚರಂಡಿ ನಿರ್ಮಾಣದಿಂದ ಬಡವರು ಉದ್ದಾರ ಆಗ್ತಾರಾ?' ಗ್ಯಾರಂಟಿ ಸ್ಕೀಂ ಟೀಕೆಗೆ ಗೃಹಸಚಿವ ಪರಂ ತಿರುಗೇಟು!
ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ, ದಾವಣಗೆರೆ ವ್ಯಾಪ್ತಿಯ ಶಾಲೆಗಳಿಗೆ ನಾಳೆ ರಜೆ