ಬೆಂಗಳೂರಿನ ಅಂತಾರಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೇವಲ 10 ರೂ.ಗೆ ಊಟ ನೀಡುವುದಕ್ಕಾಗಿ ಸರ್ಕಾರದಿಂದ ವಿಶೇಷ ಕ್ಯಾಂಟೀನ್ ಆರಂಭಿಸಲಾಗುತ್ತಿದೆ.
ಬೆಂಗಳೂರು (ಡಿ.23): ರಾಜ್ಯದ ರಾಜಧಾನಿ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಂದು ಟೀ, ಕಾಫಿ ಕುಡಿಯಲು 200 ರೂ.ನಿಂದ 500 ರೂ. ಕೊಡಬೇಕು. ಒಂದು ತಿಂಡಿ ಮಾಡಲು 500 ರೂ.ಗಳಿಂದ 1,000 ರೂ. ಕೊಡಬೇಕು ಎಂದು ಕೊರಗುವ ಜನರಿಗೆ ಈಗ ಸಿಹಿಸುದ್ದಿ ಸಿಗುತ್ತಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೇವಲ 10 ರೂ.ಗೆ ಉಟವನ್ನು ನೀಡಲು ಸರ್ಕಾರದಿಂದಲೇ ಬಡವರ ಹೋಟೆಲ್ ಎಂದೇ ಕರೆಯಲಾಗುವ ಇಂದಿರಾ ಕ್ಯಾಂಟೀನ್ ಆರಂಭಿಸಲು ಸರ್ಕಾರ ಸಚಿವ ಸಂಪುಟದ ಸಭೆಯನ್ನು ನಿರ್ಣಯ ಕೈಗೊಂಡಿದೆ.
ಈಗಾಗಲೇ ಬೆಂಗಳೂರಿನಲ್ಲಿ 175ಕ್ಕೂ ಅಧಿಕ ಇಂದಿರಾ ಕ್ಯಾಂಟೀನ್‌ಗಳು ಕಾರ್ಯ ನಿರ್ವಹಿಸುತ್ತಿವೆ. ಜೊತೆಗೆ ರಾಜ್ಯಾದ್ಯಂತ ಎಲ್ಲ ನಗರ, ಪಟ್ಟಣ ಪ್ರದೇಶಗಳಲ್ಲಿಯೂ ಇಂದಿರಾ ಕ್ಯಾಂಟೀನ್‌ಗಳಲ್ಲಿ ಕೇವಲ 5 ರೂ.ಗೆ ತಿಂಡಿ ಹಾಗೂ 10 ರೂ.ಗೆ ಊಟವನ್ನು ಸರಬರಾಜು ಮಾಡಲಾಗುತ್ತಿದೆ. ಇನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ಇಂದಿರಾ ಕ್ಯಾಂಟೀನ್‌ನಲ್ಲಿ ಗುಣಮಟ್ಟದ ಊಟ ಸರಬರಾಜು ಮಾಡುತ್ತಿಲ್ಲವೆಂದು ಅವುಗಳನ್ನು ಮುಚ್ಚಲು ಚಿಂತನೆ ಮಾಡಲಾಗಿತ್ತು. ಆದರೆ, ಈಗ ಪುನಃ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿರಾ ಕ್ಯಾಂಟೀನ್‌ನ ಊಟ ಹಾಗೂ ತಿಂಡಿಯ ಮೆನುವನ್ನು ಬದಲಾವಣೆ ಮಾಡಿದ್ದಾರೆ. ಈಗ ರಾಗಿ ಮುದ್ದೆ, ಮಂಗಳೂರು ಬನ್ಸ್ ಸೇರಿ ವಿವಿಧ ಊಟವನ್ನು ನೀಡಲಾಗುತ್ತಿದೆ.
undefined
ಇಂದಿರಾ ಕ್ಯಾಂಟೀನ್ ಹೊಸ ಮೆನು ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ: ರಾಗಿಮುದ್ದೆ, ಮಂಗಳೂರು ಬನ್ಸ್ ಸೇರ್ಪಡೆ!
ಈಗ ಮತ್ತೊಂದು ಸರ್ಕಾರದ ಇಂದಿರಾ ಕ್ಯಾಂಟೀನ್ ಊಟವನ್ನು ದುಬಾರಿ ಆಹಾರ ಮಾರಾಟ ಮಾಡುವ ಸ್ಥಳಗಳಲ್ಲಿಯೂ ಆರಂಭಿಸಬೇಕು ಎನ್ನುವ ಉದ್ದೇಶವನ್ನು ಹೊಂದಿದೆ. ಆದ್ದರಿಂದ ಜನಸಾಮಾನ್ಯರು, ಮಧ್ಯಮ ವರ್ಗದವರು, ಉದ್ಯಮಿಗಳು ಹಾಗೂ ಐಷಾರಾಮಿ ಜೀವನ ಮಾಡುವವರು ಸೇರಿದಂತೆ, ರಾಜ್ಯ ಹೊರ ರಾಜ್ಯ, ವಿದೇಶಗಳಿಂದ ಬಂದು ಹೋಗುವ ತಾಣವಾದ ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೂ ಇಂದಿರಾ ಕ್ಯಾಂಟೀನ್ ಆರಂಭಿಸಲು ಸರ್ಕಾರ ನಿರ್ಣಯ ಕೈಗೊಂಡಿದೆ. ಇನ್ನು ವಿಮಾನ ನಿಲ್ದಾಣದಲ್ಲಿ ಪ್ರತಿಯೊಂದಿ ಆಹಾರ ಪದಾರ್ಥಕ್ಕೂ ನೂರಾರು ರೂ. ಖರ್ಚು ಮಾಡಲಾಗದೇ ಹಸಿವಿನಿಂದ ಬಳಲುವ ಕಾರ್ಮಿಕರು, ಸಾಮಾನ್ಯ ವರ್ಗದವರಿಗೆ ಈ ಕ್ಯಾಂಟೀನ್ ಮೂಲಕ 5 ರೂ. ತಿಂಡಿ ಹಾಗೂ 10 ರೂ.ಗೆ ಊಟವನ್ನು ಕೊಡಲು ಸರ್ಕಾರ ಮುಂದಾಗಿದೆ.
ಶಿಘ್ರವಾಗಿ, ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭ ಮಾಡಲಾಗುತ್ತಿದೆ. ಈ ಬಗ್ಗೆ ಸ್ವತಃ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಮಿಕರಿಗೆ, ವಾಹನ ಚಾಲಕರಿಗೆ ಹಾಗೂ ಸುತ್ತಲಿನ ಜನರಿಗೆ ರಿಯಾಯಿತಿ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವ ಉದ್ದೇಶದೊಂದಿಗೆ ವಿಮಾನ ನಿಲ್ದಾಣದ ವಾಹನ ಪಾರ್ಕಿಂಗ್ ಪ್ರದೇಶದಲ್ಲಿ ಗುರುತಿಸಲಾದ ಸ್ಥಳದಲ್ಲಿ ನೂತನವಾಗಿ 2 ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ' ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಬೆಂಗಳೂರು ಏರ್‌ಪೋರ್ಟ್: ತಮಿಳು ಅಯಾನ್ ಸಿನಿಮಾ ರೀತಿ ಕೊಕೇನ್ ಮಾತ್ರೆಗಳನ್ನು ನುಂಗಿಬಂದ ಡ್ರಗ್ಸ್ ಪೆಡ್ಲರ್!
ಬದಲಾದ ಇಂದಿರಾ ಕ್ಯಾಂಟೀನ್ ಮೆನು (Newly Changed Indira Canteen Menu):
ಮಧ್ಯಾಹ್ನದ ಊಟ (10 ರೂ. ದರ) ಮೆನು:
ಅನ್ನ, ತರಕಾರಿ ಸಾಂಬಾರ್ ಮತ್ತು ಖೀರು
ಅನ್ನ, ತಕರಾರಿ ಸಾಂಬಾರ್, ರಾಯಿತಾ
ಅನ್ನ, ತಕಕಾರಿ ಸಾಂಬಾರ್, ಮೊಸರನ್ನ
ರಾಗಿಮುದ್ದೆ, ಸೊಪ್ಪಿನ ಸಾರು, ಖೀರು
ಚಪಾತಿ, ಸಾಗು, ಖೀರು