Sanskrit University In Karnataka : ನಮ್ಮ ನೆಲದ ತುಳು, ಕೊಡವ ಭಾಷೆಯ ಮೇಲೂ ನಿಮ್ಮ ಮಮತೆ ತೋರಿಸಿ!

By Suvarna NewsFirst Published Jan 18, 2022, 12:49 PM IST
Highlights

ಮಾಗಡಿ ಸಮೀಪ ನೂರಾರು ಎಕರೆಯಲ್ಲಿ ಸಂಸ್ಕೃತ ವಿವಿ ನಿರ್ಮಾಣ
ಇದಕ್ಕಾಗಿ 359 ಕೋಟಿ ರೂಪಾಯಿ ಮೀಸಲಿಟ್ಟ ಕರ್ನಾಟಕ ಸರ್ಕಾರ
ನಿಮ್ಮ ಈ ಮಮತೆಯನ್ನು ತುಳು ಮತ್ತು ಕೊಡವ ಭಾಷೆಗಳ ಮೇಲೂ ತೋರಿಸಿ

ಬೆಂಗಳೂರು (ಜ. 18): ರಾಮನಗರ (Ramanagara) ಜಿಲ್ಲೆಯ ಮಾಗಡಿಯಲ್ಲಿ (Magadi ) ಕರ್ನಾಟಕ ಸರ್ಕಾರ (Karnataka government) ನಿರ್ಮಿಸಲು ಉದ್ದೇಶಿಸಿರುವ ಸಂಸ್ಕೃತ ವಿಶ್ವವಿದ್ಯಾಲಯಕ್ಕೆ (Sanskrit university ) ಕನ್ನಡ ಪರ ಹೋರಾಟಗಾರರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಟ್ವಿಟರ್ ನಲ್ಲೂ ಇದರ ವಿರುದ್ಧವಾಗಿ "ಸೇ ನೋ ಟು ಸಂಸ್ಕೃತ (#SayNoToSanskrit) ಹ್ಯಾಶ್ ಟ್ಯಾಗ್ ಜನಪ್ರಿಯವಾಗಿದೆ. ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ (Congress leader BK hariprasad ), "ಬಿಜೆಪಿ ಸರ್ಕಾರ ರಾಜ್ಯದ ಕೇವಲ 24,821 ಸಂಸ್ಕೃತ ಭಾಷಿಗರ ಮೇಲೆ ತೋರಿಸುತ್ತಿರುವ ಅಗಾಧ ಮಮತೆಯನ್ನ ನಮ್ಮ ರಾಜ್ಯದಲ್ಲಿ ಮೂಲೆಗುಂಪಾಗಿರುವ ತುಳು (Tulu) ಮತ್ತು ಕೊಡವ (Kodava) ಭಾಷೆಗಳ ಮೇಲೆ ತೋರಿಸಲಿ" ಎಂದು ಹೇಳಿದ್ದಾರೆ.

359 ಕೋಟಿ ರೂಪಾಯಿಯ ವೆಚ್ಚದಲ್ಲಿ ನೂರಾರು ಎಕರೆಯ ಜಾಗದಲ್ಲಿ ಸಂಸ್ಕೃತ ವಿವಿ ನಿರ್ಮಾಣ ಮಾಡುವ ಆಸೆಯಲ್ಲಿ ರಾಜ್ಯ ಸರ್ಕಾರವಿದ್ದರೆ, ಇದಕ್ಕೆ ದೊಡ್ಡ ಮಟ್ಟದ ವಿರೋಧಗಳು ಏಳುವ ಲಕ್ಷಣಗಳು ಕಾಣುತ್ತಿವೆ. ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಬಿಕೆ ಹರಿಪ್ರಸಾದ್, 2011 ರ ಜನಗಣತಿಯ ಪ್ರಕಾರ ರಾಜ್ಯದಲ್ಲಿರುವ ಒಟ್ಟು ತುಳುವರ ಸಂಖ್ಯೆ 18,46,427 ಹಾಗೆಯೇ ಕೊಡವ ಭಾಷೆಯನ್ನಾಡುವವರ ಸಂಖ್ಯೆ 1,13,857. ಆದರೆ, ಸಂಸ್ಕೃತ ಭಾಷೆಯನ್ನು ತಮ್ಮ ಮಾತೃಭಾಷೆಯೆಂದು ದಾಖಲಿಸಿದವರ ಸಂಖ್ಯೆ 24,821 ಮಾತ್ರ. ಇಷ್ಟು ಕಡಿಮೆ ಜನಸಂಖ್ಯೆಯ ಮೇಲೆ ಬಿಜೆಪಿ ಸರಕಾರ ತನ್ನ ಅಗಾಧ ಪ್ರೀತಿಯನ್ನು ತೋರಿಸುತ್ತಾ ಬಂದಿದೆ. ಈಗಾಗಲೇ ರಾಜ್ಯದಲ್ಲಿ ಸಂಸ್ಕೃತ ವಿಶ್ವವಿದ್ಯಾಲಯವಿದೆ. ಅದಕ್ಕೆ ಬೇಕಾದಂತಹ ಎಲ್ಲಾ ಸೌಕರ್ಯಗಳನ್ನು ನೀಡಲಾಗಿದೆ. ಆದರೆ, ನಮ್ಮ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ತುಳು ಮತ್ತು ಕೊಡವ ಭಾಷೆಗಳ ಅಭಿವೃದ್ದಿಯತ್ತ ಮಾತ್ರ ದಿವ್ಯ ನಿರ್ಲಕ್ಷವನ್ನು ತೋರಿಸುತ್ತಿದೆ' ಎಂದು ಕಿಡಿಕಾರಿದ್ದಾರೆ. 

ಸಂಸ್ಕೃತಕ್ಕೆ ನೀಡುತ್ತಿರುವಷ್ಟೇ ಮಹತ್ವವನ್ನ ನಮ್ಮ ಕನ್ನಡ, ತುಳು ಹಾಗೂ ಕೊಡವ ಭಾಷೆಗೂ ನೀಡುವ ಮೂಲಕ ಒಂದು ಕಣ್ಣಿಗೆ ಸುಣ್ಣ ಒಂದು ಕಣ್ಣಿಗೆ ಬೆಣ್ಣೆ ಎನ್ನುವ ನೀತಿಯನ್ನು ಬಿಡಬೇಕು. ಹಾಗೆಯೇ ನಮ್ಮ ಭಾಷೆಗಳ ಅಭಿವೃದ್ದಿಗೆ ಪ್ರೋತ್ಸಾಹ ನೀಡಬೇಕು ಎಂದು ಒತ್ತಾಯಿಸಿದರು.
 

There are about 15,95,038 Tulu speakers & about 1,10,508 Kodava speakers in Karnataka.

Their number is undoubtedly humungous in comparison with Sanskrit speakers.
How much has the Government spent on developing these languages? pic.twitter.com/OT2j2n8sOD

— ಗೌತಮ್ ಗಣೇಶ್ ಎಂ ಹೆಚ್ (@gouthamganeshmh)


ತುಳು, ಕೊಡವ ಭಾಷೆಗಳನ್ನು ಅಧಿಕೃತ ಭಾಷೆಗಳನ್ನಾಗಿ ಮಾಡಿ: ರಾಜ್ಯದಲ್ಲಿ ಬಹುತೇಕ ಜನರು ಮಾತನಾಡುವ ತುಳು ಹಾಗೂ ಕೊಡವ ಭಾಷೆಗಳನ್ನು ರಾಜ್ಯ ಸರ್ಕಾರದ ಅಧಿಕೃತ ಭಾಷೆಗಳನ್ನಾಗಿ ಘೋಷಣೆ ಮಾಡಿ ಎಂದು ಬಿಕೆ ಹರಿಪ್ರಸಾದ್ ಆಗ್ರಹಿಸಿದ್ದಾರೆ. :ಭಾಷಾವಾರು ಪ್ರಾಂತ್ಯಗಳ ರಚನೆಯಾದಾಗ ಪ್ರಭಾವೀ ಪ್ರಾದೇಶಿಕ ಭಾಷೆಗಳಿಗೆ ಮಹತ್ವ ಬಂದುವು, ಆದರೆ ಈ ಹಂತದಲ್ಲಿ ಪ್ರಾದೇಶಿಕ ಭಾಷೆಗಳ ಆಶ್ರಯದಲ್ಲಿರುವ, ಆದರೆ ಯಾವುದೇ ರಾಜ್ಯದ ಅಧಿಕೃತ ಭಾಷೆಗಳ್ಲಲದ ಸಣ್ಣ ಭಾಷೆಗಳು ತೀವ್ರ ಉಪೇಕ್ಷೆಗೆ ಒಳಗಾಗಿವೆ. ದೇಶದಲ್ಲಿ ಹಲವಾರು ರಾಜ್ಯಗಳು ತಮ್ಮ ಒಂದಕ್ಕೂ ಹೆಚ್ಚು ಭಾಷೆಗಳನ್ನು ಅಧಿಕೃತವಾಗಿ ಘೋಷಿಸಿಕೊಂಡಿವೆ. ಆದರೆ, ಕರ್ನಾಟಕ ರಾಜ್ಯ ಕನ್ನಡವನ್ನು ಹೊರತುಪಡಿಸಿ ಬೇರೆ ಭಾಷೆಗಳಿಗೆ ಅಧಿಕೃತ ಸ್ಥಾನ ನೀಡಿಲ್ಲ. ಬಹುಜನರು ದಿನನಿತ್ಯ ಉಪಯೋಗಿಸುವ ಕೊಡವ, ತುಳು ಭಾಷೆಗಳನ್ನು ಕರ್ನಾಟಕದ ಅಧಿಕೃತ ಭಾಷೆಗಳೆಂದು ಮಾನ್ಯ ಮಾಡಬಹುದಾಗಿದೆ. ಆದರೆ, ಮಾನ್ಯ ಮಾಡದೇ ಇರುವುದರಿಂದ ಕೇಂದ್ರ ಸರಕಾರ ಸುಲಭವಾಗಿ ನುಣುಚಿಕೊಳ್ಳುತ್ತಿದೆ. ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿರುವ ಭಾಷೆಗಳಾದ ತುಳು ಮತ್ತು ಕೊಡವ ಭಾಷೆಗಳನ್ನು ರಾಜ್ಯ ಸರಕಾರ ಮೊದಲು ತನ್ನ ಅಧಿಕೃತ ಭಾಷೆಗಳೆಂದು ಘೋಷಿಸಬೇಕು" ಎಂದರು.

ED Raid: ಯುಪಿ ಬೆನ್ನಲ್ಲೇ ಪಂಜಾಬ್‌ನಲ್ಲೂ ಇಡಿ ಅಧಿಕಾರಿಗಳ ಬೇಟೆ, ಹತ್ತು ಮಂದಿ ಮೇಲೆ ದಾಳಿ!
ಕರ್ನಾಟಕ ಕಾಂಗ್ರೆಸ್  ವಕ್ತಾರ ಎಎನ್ ನಟರಾಜ್ ಗೌಡ (AN Nataraj Gowda), ಸಂಸ್ಕೃತ ವಿವಿ ಯೂಸ್ ಲೆಸ್. ಕರ್ನಾಟದಲ್ಲಿ ಇದನ್ನು ನಿರ್ಮಾಣ ಮಾಡುವುದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ ನೊಂದಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ಕನ್ನಡ ಪರ ಹೋರಾಟಗಾರರ ಗುಂಪು (Kannada activists), ಸಂಸ್ಕೃತ ಇಲ್ಲಿ ಪ್ರಾದೇಶಿಕ ಭಾಷೆಯಲ್ಲ. ಅದು ಅನ್ಯಭಾಷೆ. ಪ್ರಾದೇಶಿಕ ಭಾಷೆಗಳ ಅಭಿವೃದ್ಧಿಗೆ ಸರ್ಕಾರ ಗಮನ ನೀಡಬೇಕು ಎಂದು ಹೇಳಿದೆ.

click me!