ಸಭೆಯಲ್ಲಿ ಮಹತ್ವದ ತೀರ್ಮಾನ:ಉ.ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕನಸು ನನಸು

By Ramesh BFirst Published Sep 20, 2022, 11:40 AM IST
Highlights

ಉತ್ತರಕನ್ನಡ ಜಿಲ್ಲೆಗೊಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕೆನ್ನುವ ಬಹು ವರ್ಷಗಳ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು, ಇಂದಿನ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಂಡಿದೆ.

ಬೆಂಗಳೂರು/ ಕಾರವಾರ, (ಸೆಪ್ಟೆಂಬರ್ 15): ಉತ್ತರನ್ನಡ ಜಿಲ್ಲೆಯ ಬಹುವರ್ಷದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಕನಸು ನನಸಾಗುವ ಸಮಯ ಕೂಡಿಬಂದಿದೆ.

ಹೌದು...ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ಬೇಕೆನ್ನುವ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು, ಆಸ್ಪತ್ರೆ ನಿರ್ಮಾಣಕ್ಕೆ ಒಪ್ಪಿಗೆ ಸೂಚಿಸಿದೆ ಎಂದು ತಿಳಿದುಬಂದಿದೆ. ಇಂದು(ಮಂಗಳವಾರ) ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆಸ್ಪತ್ರೆ ನಿರ್ಮಾಣದ ಬಗ್ಗೆ ತೀರ್ಮಾನಿಸಲಾಗಿದೆ. ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಬಿಜೆಪಿ ಶಾಸಕಿ ರೂಪಾಲಿ ಆಯ್ಕೆ  ಮಾಹಿತಿ ನೀಡಿದ್ದಾರೆ.

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸಿಎಂ ತಾತ್ವಿಕ ಒಪ್ಪಿಗೆ:ಉ.ಕನ್ನಡದ ಬಹುದಿನಗಳ ಬೇಡಿಕೆ ಈಡೇರಲಿದ್ಯಾ?

ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ವಿಚಾರವಾಗಿ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ನಿವಾಸದಲ್ಲಿ ನಡೆದ ಸಭೆಯಲ್ಲಿ  ಸಚಿವ ಶಿವರಾಮ್ ಹೆಬ್ಬಾರ್, ರೂಪಾಲಿ ನಾಯ್ಕ್ ಸೇರಿದಂತೆ ಜಿಲ್ಲೆಯ ಶಾಸಕರು ಹಾಗೂ  ಜಿಲ್ಲಾ ಉಸ್ತುವಾರಿ ಕೋಟಾ ಶ್ರೀನಿವಾಸ್ ಪೂಜಾರಿ ಸಹ ಭಾಗಿಯಾಗಿದ್ರು.ಇನ್ನು ಸಭೆ ಬಳಿಕೆ ಯಾರೆಲ್ಲಾ ಏನೆಲ್ಲಾ ಹೇಳಿದ್ದಾರೆ ಎನ್ನುವುದು ಈ ಕೆಳಗಿನಮತಿದೆ ನೋಡಿ.

ರೂಪಾಲಿ ನಾಯ್ಕ್ ಹೇಳಿಕೆ
ಈಗಿರುವ ಮೆಡಿಕಲ್ ಕಾಲೇಜು ಮೇಲ್ದರ್ಜೆಗೆ ಏರಿಸಲು ಸರ್ಕಾರ ಒಪ್ಪಿಗೆ ಸೂಚಿಸಿದೆ.ತಾತ್ಕಾಲಿಕವಾಗಿ ಮೆಡಿಕಲ್ ಕಾಲೇಜು 
ಬಳಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವ ಬಗ್ಗೆ ತೀರ್ಮಾನಿಸಲಾಗಿದೆ. ಭರವಸೆ ಅಲ್ಲ. ಒಪ್ಪಿಗೆ ನೀಡಿದ್ದಾರೆ ಎಂದು ಶಾಸಕಿ ರೂಪಾಲಿ ನಾಯ್ಕ್ ಸ್ಪಷ್ಟಪಡಿಸಿದರು.

ಸುಧಾಕರ್ ಅವರು ಸೆಷೆನ್ ಬಳಿಕ ಒಂದು ದಿನ ಉತ್ತರ ಕನ್ನಡ ಆಸ್ಪತ್ರೆ ಸಲುವಾಗಿ ಭೇಟಿ ನೀಡಲಿದ್ದಾರೆ ಜನರು ಇಲ್ಲಿ ತನಕ ಶಾಂತವಾಗಿರಬೇಕು. ತಾಳಿದವನು ಬಾಳಿಯಾನು‌ ಎನ್ನುವಂತೆ ಈಗ ಆಸ್ಪತ್ರೆ ಆಗುತ್ತದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಜಾಗ ನಿಗದಿ ಆಗಿಲ್ಲ. ಜಾಗ ಇನ್ನೂ ಫೈನಲ್ ಮಾಡಬೇಕಿದೆ ಎಂದು ತಿಳಿಸಿದರು.

ಸಚಿವ ಸುಧಾಕರ್ ಹೇಳಿದ್ದೇನು?
ಉತ್ತರ ಕನ್ನಡ ಜಿಲ್ಲೆಗೆ ಉತ್ಕೃಷ್ಟ ಸೇವೆ ಸಿಗಬೇಕು. ಸಿಬ್ಬಂದಿ ಕೊರತೆ ವೈದ್ಯರ ಕೊರತೆ ತುಂಬಿಸುವ ಕೆಲಸ ಆಗಬೇಕು ಆಸ್ಪತ್ರೆ ಮೇಲ್ದರ್ಜೆಗೆ ಏರಿಸುವ ಕೆಲಸ ಆಗಬೇಕು. ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸೇವೆ ಕೇಳಿದ್ದಾರೆ. ಕುಮಟಾ ಭೌಗೋಳಿಕವಾಗಿ ಮಧ್ಯೆ ಇದೆ. ಕುಮಟಾದಲ್ಲಿ ಆಸ್ಪತ್ರೆ ಮಾಡಲು ಸಲಹೆ ಬಂದಿದೆ ಎಂದರು.

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಮುಖ್ಯಮಂತ್ರಿಗಳು ತಾತ್ವಿಕವಾಗಿ ಒಪ್ಪಿಗೆ ಕೊಟ್ಟಿದ್ದಾರೆ. ಉತ್ತರ ಕನ್ನಡಕ್ಕೆ ಆಸ್ಪತ್ರೆ ಆಗಲಿದೆ.ಫೈಲ್ ಆರ್ಥಿಕ ಇಲಾಖೆಗೆ ಹೋಗಿದೆ. ಮಾನ್ಯ ಮುಖ್ಯಮಂತ್ರಿಗಳ ಬಳಿ ಆರ್ಥಿಕ ಇಲಾಖೆ ಇದೆ‌. ಸೆಷನ್ ಆದ ಕೂಡಲೆ ಉತ್ತರ ಕನ್ನಡ ಭೇಟಿ ಮಾಡುತ್ತೇನೆ ಎಂದು ಹೇಳಿದರು.

ಕೋಟಾ ಶ್ರೀನಿವಾಸ್ ಪ್ರತಿಕ್ರಿಯೆ 
ಇನ್ನು ಸಭೆ ಬಳಿಕ  ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಪ್ರತಿಕ್ರಿಯಿಸಿ,  ಈಗಿರುವ ಮೆಡಿಕಲ್ ಕಾಲೇಜು ಉನ್ನತ ದರ್ಜೆಗೆ ಏರಿಸೋದು. ಕುಮಟಾ ತಾಲೂಕಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡುವ ಬಗ್ಗೆ ಸಚಿವರು ಬಹುತೇಕ ಒಪ್ಪಿಗೆ ನೀಡಿದ್ದಾರೆ. ಸೆಷನ್ ಮುಗಿದ ಒಂದು ವಾರದ ಒಳಗೆ ಭೇಟಿ ನೀಡ್ತಾರೆ. ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡ್ತಾರೆ ಎಂದು ಮಾಹಿತಿ ನೀಡಿದರು.

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸ್ಥಳ ವೀಕ್ಷಣೆ
ಅತ್ತ ಆಸ್ಪತ್ರೆ ನಿರ್ಮಾಣಕ್ಕೆ ಸಭೆಯಲ್ಲಿ ಮಹತ್ವದ ತೀರ್ಮಾನ ಆಗುತ್ತಿದ್ದಂತೆಯೇ ಇತ್ತ ಕುಮಾಟಾದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು  ಅಧಿಕಾರಿಗಳ ಜತೆ ಸ್ಥಳ ವೀಕ್ಷಣೆ ಮಾಡಿದರು.

ಸ್ಥಳ ವೀಕ್ಷಣೆಯ ಬಳಿಕ ಕುಮಟಾ ಸಹಾಯಕ ಆಯುಕ್ತರ ಕಚೇರಿಯಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಬಳಿಕ ಅಂತಿಮ ವರದಿಯನ್ನು ಜಿಲ್ಲಾಡಳಿತ ಸರಕಾರಕ್ಕೆ ಸಲ್ಲಿಸಲಿದೆ. 

ಕೆ.ಎಸ್.‌ಹೆಗ್ಡೆ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು, ಕುಮಟಾ ಸಹಾಯಕ ಆಯುಕ್ತರು ಹಾಗೂ ಇತರ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ.

click me!