ಪ್ರೈಮರಿ ಶಿಕ್ಷಕರೂ 6, 7ನೇ ತರಗತಿಗೆ ಪಾಠ ಮಾಡಲು ಈಗ ಅರ್ಹರು!

Kannadaprabha News, Ravi Janekal |   | Kannada Prabha
Published : Oct 21, 2025, 06:28 AM IST
Karnataka govt allow primary school teachers to teach class six seven

ಸಾರಾಂಶ

ಶಿಕ್ಷಣ ಇಲಾಖೆಯು 2017ರ ವೃಂದ ಮತ್ತು ನೇಮಕಾತಿ ನಿಯಮಕ್ಕೆ ತಿದ್ದುಪಡಿ ತಂದು, 2016ಕ್ಕಿಂತ ಮೊದಲು ನೇಮಕವಾದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ (ಪಿಎಸ್‌ಟಿ) 6 7ನೇ ತರಗತಿಗಳಿಗೆ ಪಾಠ ಮಾಡಲು ಅವಕಾಶ ಕಲ್ಪಿಸಿ ಅಧಿಸೂಚನೆ ಹೊರಡಿಸಿದೆ. ಈ ಬದಲಾವಣೆಯು ಶಿಕ್ಷಕರ ಸಂಘದ ಬಹುದಿನಗಳ ಹೋರಾಟದ ಫಲ ಸಿಕ್ಕಿದಂತಾಗಿದೆ.

ಬೆಂಗಳೂರು (ಅ.21): ಶಿಕ್ಷಣ ಇಲಾಖೆಯು ವೃಂದ ಮತ್ತು ನೇಮಕಾತಿ ನಿಯಮ–2017ಕ್ಕೆ ತಿದ್ದುಪಡಿ ಮಾಡಿ ಪ್ರಾಥಮಿಕ ಶಾಲಾ ಶಿಕ್ಷಕರಿಗೂ (ಪಿಎಸ್‌ಟಿ) 6 ಮತ್ತು 7ನೇ ತರಗತಿ ಮಕ್ಕಳಿಗೂ ಪಾಠ ಮಾಡಲು ಅವಕಾಶ ಕಲ್ಪಿಸಿ ಅಧಿಸೂಚನೆ ಹೊರಡಿಸಿದೆ.

ಪ್ರೈಮರಿ ಶಿಕ್ಷಕರಿಗೂ 6,7ನೇ ತರಗತಿಗೆ ಪಾಠಕ್ಕೆ ಅರ್ಹತೆ ಏಕೆ?

ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ಕಲ್ಪಿಸಿದೆ. 2017ರಲ್ಲಿ ಶಿಕ್ಷಕರ ವೃಂದ ಮತ್ತು ನೇಮಕಾತಿಗೆ ತಿದ್ದುಪಡಿ ತಂದು 2016ಕ್ಕಿಂತ ಮೊದಲು 1ರಿಂದ 7 ಹಾಗೂ 1ರಿಂದ 8ನೇ ತರಗತಿ ಪಾಠ ಮಾಡಲು ನೇಮಕವಾಗಿದ್ದ ಎಲ್ಲ ಪ್ರಾಥಮಿಕ ಶಾಲಾ ಶಿಕ್ಷಕರನ್ನೂ 1ರಿಂದ 5ನೇ ತರಗತಿ ಮಾತ್ರ ಪಾಠ ಮಾಡಬೇಕೆಂದು ಸೀಮಿತಗೊಳಿಸಾಗಿತ್ತು. ಇದರಿಂದ ಹಲವಾರು ವರ್ಷಗಳಿಂದ ಕರ್ತವ್ಯ ಸಲ್ಲಿಸುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರು, ಇತ್ತೀಚಿಗೆ ಬಂದ ಪದವೀಧರ ಶಿಕ್ಷಕರ ಕೈಕೆಳಗೆ ಕೆಲಸ ಸಲ್ಲಿಸುವಂತಾಗಿತ್ತು. ಹುದ್ದೆಗಳ ಮರುವಿಂಗಡಣೆಯಲ್ಲೂ ಪದವೀಧರ ಶಿಕ್ಷಕರಿಗೆ ಆದ್ಯತೆ ನೀಡಿದ್ದರಿಂದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಹುದ್ದೆಗಳ ಕೊರತೆ ಎದುರಾಗಿತ್ತು.

ಇದರಿಂದ 2016ಕ್ಕೆ ಮೊದಲು ನೇಮಕಗೊಂಡ ಶಿಕ್ಷಕರಿಗೆ ಅನ್ಯಾಯದ ಕೂಗು ಕೇಳಿಬಂದಿತ್ತು. ಈಗ ನಿಯಮಗಳಿಗೆ ಮತ್ತೆ ತಿದ್ದುಪಡಿ ತಂದು ಹೊಸ ಅಧಿಸೂಚನೆ ಈ ಅನ್ಯಾಯ ಸರಿಪಡಿಸುವ ಕೆಲಸ ಸರ್ಕಾರ ಮಾಡುತ್ತಿದೆ. ಅಲ್ಲದೆ, ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರ ಹುದ್ದೆ ಹಾಗೂ ಪ್ರೌಢಶಾಲಾ ಸಹಶಿಕ್ಷಕರ ಹುದ್ದೆಗಳ ಬಡ್ತಿಯಲ್ಲೂ ಪದವೀಧರ ಶಿಕ್ಷಕರಿಗೆ ಹೆಚ್ಚಿನ ಆದ್ಯತೆ ನೀಡಲಾಗಿತ್ತು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ 2017ರಿಂದಲೂ ಹೋರಾಟ

ಅನ್ಯಾಯ ಖಂಡಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ 2017ರಿಂದಲೂ ಹೋರಾಟ ನಡೆಸುತ್ತಾ ಬಂದಿತ್ತು. ಒಂದು ಬಾರಿ ವೇತನ ಬಡ್ತಿ ಹಾಗೂ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿಗೆ ಅವಕಾಶ ಕಲ್ಪಿಸಲು ವೃಂದ ಮತ್ತು ನೇಮಕಾತಿ ನಿಯಮ–2017ಕ್ಕೆ ತಿದ್ದುಪಡಿ ತರಲು ಈಚೆಗೆ ನಡೆದ ಸಂಪುಟ ಸಭೆ ಸಮ್ಮತಿಸಿತ್ತು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Justice for Bongo: ಮಗು ಹುಟ್ಟಿದ್ದಕ್ಕೆ ಸಾಕಿ ಸಲುಹಿದ ಶ್ವಾನ ಕೊಂದ್ರಾ ಪಾಪಿಗಳು? ಸಿಲಿಕಾನ್ ಸಿಟಿಯಲ್ಲಿ 'ಬೋಂಗೋ' ಸಾವಿನ ರೋಚಕ ಕಹಾನಿ!
ಸಿಎಂ ಸಿದ್ದರಾಮಯ್ಯನವರೇ ಮತಿಗೇಡಿಗಳಾಗಿ, ಆದ್ರೆ ಅಧಿಕಾರಕ್ಕಾಗಿ ಲಜ್ಜೆಗೇಡಿಗಳಾಗಬೇಡಿ-ಆರ್. ಅಶೋಕ್ ಟೀಕೆ