* ರಾಜ್ಯದ ಪ್ರಯಾಣಿಕ ವಾಹನ ಮಾಲೀಕರಿಗೆ ಗುಡ್‌ನ್ಯೂಸ್
* ಜೂನ್ ತಿಂಗಳ ಮೋಟಾರು ವಾಹನ ತೆರಿಗೆಯ ಶೇ 50ರಷ್ಟು ವಿನಾಯಿತಿ ಘೋಷಿಸಿದ ರಾಜ್ಯ ಸರ್ಕಾರ
* ಕೊವಿಡ್ 2ನೇ ಅಲೆಯ ಹಿನ್ನೆಲೆಯಲ್ಲಿ ವಿನಾಯಿತಿ ನೀಡಿ
ಬೆಂಗಳೂರು, (ಜೂನ್.23): ಜೂನ್ 2021ರ ತಿಂಗಳಿನ ಮೋಟಾರು ವಾಹನಗಳ ಮೇಲಿನ ತೆರಿಗೆಯಲ್ಲಿ ರಾಜ್ಯ ಸರ್ಕಾರ ಶೇ.50ರಷ್ಟು ವಿನಾಯ್ತಿ ನೀಡಿದೆ.
ಹೌದು..ಕೊವಿಡ್ 2ನೇ ಅಲೆಯಲ್ಲಿ ಲಾಕ್‌ಡೌನ್ ಪರಿಣಾಮ ರಾಜ್ಯದಲ್ಲಿ ನೋಂದಾಯಿಸಿರುವ ಎಲ್ಲಾ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಮಾತ್ರ ಅನ್ವಯಿಸುವಂತೆ 2021ರ ಜೂನ್ ತಿಂಗಳ ಮೋಟಾರು ವಾಹನ ತೆರಿಗೆಯ ಶೇಕಡ 50ರಷ್ಟು ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಎಲೆಕ್ಟ್ರಿಕ್ ಕಾರ್ ಖರೀದಿಗೆ 1.50 ಲಕ್ಷ ರೂ.ವರೆಗೆ ಸಬ್ಸಿಡಿ, ನೋಂದಣಿ ಫ್ರೀ!
ಈ ಬಗ್ಗೆ ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಪ್ರಕರಣೆ ಹೊರಡಿಸಿದ್ದು, ಕೋವಿಡ್ 2ನೇ ಅಲೆಯ ಹಿನ್ನೆಲೆಯಲ್ಲಿ, ಪ್ರಯಾಣಿಕ ವಾಹನ ಸಂಚಾರಕ್ಕೆ ನಿರ್ಬಂಧಗಳನ್ನು ವಿಧಿಸಿ ಆದೇಶಿಸಿರುವುದರಿಂದ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿಲಾಗಿದೆ ಎಂದಿದ್ದಾರೆ.
ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957 ರ ಕಲಂ 16(1) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯದಲ್ಲಿ ನೊಂದಾಯಿಸಿರುವ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಎಲ್ಲಾ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಮಾತ್ರ ಅನ್ವಯಿಸುವಂತೆ ಜೂನ್ 2021ರ ಮಾಹೆಗೆ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯ ಶೇಕಡ 50 ರಷ್ಟಕ್ಕೆ ವಿನಾಯಿತಿ ನೀಡಿ ಆದೇಶಿಸಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.