
ಬೆಂಗಳೂರು, [ಅ.28]: 2019-20ನೇ ಸಾಲಿನಲ್ಲಿ ಮುಂಗಾರು ಮಳೆ ಕೊರತೆ ಎದುರಿಸಿದ ರಾಜ್ಯದ 49 ತಾಲೂಕುಗಳನ್ನ ಬರ ಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಗಿದೆ.
ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ವರದಿ ಆಧಾರದ ಮೇರೆಗೆ ರಾಜ್ಯ ಸರ್ಕಾರ ಇಂದು [ಸೋಮವಾರ] ಅಧಿಕೃತವಾಗಿ ಘೋಷಣೆ ಮಾಡಿದೆ.
2019-20ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 18 ಜಿಲ್ಲೆಗಳ 49 ತಾಲೂಕುಗಳು ಮಳೆ ಕೊರತೆ ಹಾಗೂ ಅಂತರ್ಜಲ ಕುಸಿತ ಎದುರಿಸುತ್ತಿವೆ ಎಂದು ತಿಳಿಸಿದೆ.
ಮುಂದಿನ 6 ತಿಂಗಳ ಅವಧಿವರೆಗೆ ಅಥವಾ ಮುಂದಿನ ಸರ್ಕಾರದ ಆದೇಶದವರೆಗೆ ಬರಪೀಡಿತ ತಾಲೂಕುಗಳೆಂದು ಸರ್ಕಾರ ಘೋಷಿಸಿದೆ.
ಆನೇಕಲ್, ಬೆಂಗಳೂರು ಉತ್ತರ, ಪೂರ್ವ, ದೇವನಹಳ್ಳಿ, ನೆಲಮಂಗಲ, ದೊಡ್ಡಬಳ್ಳಾಪುರ, ಕನಕಪುರ, ರಾಮನಗರ, ಬಂಗಾರಪೇಟೆ, ಕೋಲಾರ, ಮಾಲೂರು, ಮುಳಬಾಗಿಲು, ಶ್ರೀನಿವಾಸಪುರ, ಬಾಗೇಪಲ್ಲಿ, ಚಿಂತಾಮಣಿ, ಗುಡಿಬಂಡೆ, ಗುಬ್ಬಿ, ಕೊರಟಗೆರೆ, ಕುಣಿಗಲ್, ಮಧುಗಿರಿ, ಪಾವಗಡ, ತುರುವೇಕೆರೆ, ತುಮಕೂರು, ಚಳ್ಳೇಕೆರೆ, ಚಿತ್ರದುರ್ಗ, ಮೊಳಕಾಲ್ಮೂರು, ಜಗಳೂರು, ಕೊಳ್ಳೇಗಾಲ, ಬಳ್ಳಾರಿ, ಹೊಸಪೇಟೆ, ಸಂಡೂರು, ಸಿರುಗುಪ್ಪ, ಗಂಗಾವತಿ, ಮಾನ್ವಿ, ರಾಯಚೂರು, ಸಿಂಧನೂರು ಹಾಗೂ ಚಿಂಚೋಳಿ ತಾಲೂಕುಗಳು ಬರ ಪೀಡಿತ ಎಂದು ಸರ್ಕಾರ ಘೋಷಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ