
ಬೆಂಗಳೂರು (ಏ.22): ಮಾನವ-ವನ್ಯಜೀವಿ ಸಂಘರ್ಷದಿಂದ ಹಸು, ಎಮ್ಮೆ , ಕೋಣ ಮೃತಪಟ್ಟಲ್ಲಿ ಅವುಗಳ ಮಾಲೀಕರಿಗೆ ನೀಡುವ ಪರಿಹಾರ ಹಣವನ್ನು 75 ಸಾವಿರ ರು.ಗಳಿಗೆ, ಕುರಿ, ಮೇಕೆ ಮೃತಪಟ್ಟಲ್ಲಿ ಪರಿಹಾರ ಮೊತ್ತವನ್ನು 10 ಸಾವಿರ ರು.ಗಳಿಗೆ ಹೆಚ್ಚಿಸಲಾಗಿದೆ ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.
ಈ ಸಂಬಂಧ ಸರ್ಕಾರದಿಂದ ಅಧಿಕೃತ ಆದೇಶವನ್ನೂ ಹೊರಡಿಸಲಾಗಿದೆ. ವನ್ಯಜೀವಿಗಳಿಂದ ಜಾನುವಾರುಗಳ ಹತ್ಯೆಯಾದಲ್ಲಿ ಈವರೆಗೆ 10 ಸಾವಿರ ರು. ಪರಿಹಾರ ನೀಡಲಾಗುತ್ತಿತ್ತು. ಇದನ್ನು ಈಗ 75 ಸಾವಿರ ರು.ಗೆ ಹೆಚ್ಚಿಸಲಾಗಿದೆ. ತಕ್ಷಣಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು 20 ಸಾವಿರ ರು. ಬಿಡುಗಡೆಗೆ ಅವಕಾಶವಿದೆ. ನಂತರ ಸ್ಥಳೀಯ ಪಶು ವೈದ್ಯಾಧಿಕಾರಿಗಳು ಸತ್ತ ಸಾಕು ಪ್ರಾಣಿಯ ಪರಿಶೀಲನೆ ನಡೆಸಿ ಪ್ರಮಾಣ ಪತ್ರ ನೀಡಿದ ನಂತರ ಉಳಿದ ಮೊತ್ತ (ಗರಿಷ್ಠ 75000 ರು. ಮಿತಿಗೆ ಒಳಪಟ್ಟು ) ಪಾವತಿಸಬಹುದಾಗಿದೆ ಎಂದು ಸಚಿವರು ಹೇಳಿದ್ದಾರೆ.
ಕರ್ನಾಟಕ ಬಜೆಟ್; ಗೋ ಹತ್ಯೆ ನಿಷೇಧ ಕಾಯ್ದೆ ನಂತರ ಪ್ರತಿ ಜಿಲ್ಲೆಯಲ್ಲಿ ಗೋಶಾಲೆ
ಇನ್ನು ಕುರಿ, ಮೇಕೆ ಮೃತಪಟ್ಟಲ್ಲಿ ಈವರೆಗೆ 5,000 ರು. ಪರಿಹಾರ ಧನ ನೀಡಲಾಗುತ್ತಿತ್ತು. ಇದನ್ನು 10 ಸಾವಿರ ರು.ಗಳಿಗೆ ಹೆಚ್ಚಿಸಿದ್ದು, ಇದರಿಂದ ರೈತರು ಮತ್ತು ಸಾರ್ವಜನಿಕರಿಗೆ ಬಹಳ ಉಪಯುಕ್ತವಾಗಲಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ