
ಬಳ್ಳಾರಿ[ಫೆ.07]: ಕೊನೆಗೂ ಹಂಪಿ ಉತ್ಸವಕ್ಕೆ ಮುಹೂರ್ತ ನಿಗದಿಯಾಗಿದ್ದು, ಮಾ.2 ಮತ್ತು 3ರಂದು ಸರಳವಾಗಿ ಉತ್ಸವ ನಡೆಸಲು ಸರ್ಕಾರ ಮುಂದಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಅವರು ಸರಳವಾಗಿ ಉತ್ಸವ ನಡೆಸುವಂತೆ ಜಿಲ್ಲಾಧಿಕಾರಿ ಡಾ.ರಾಮ್‌ಪ್ರಸಾತ್ ಮನೋಹರ್ ಅವರಿಗೆ ಸೂಚನೆ ನೀಡಿದ್ದು, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಫೆ. 7ರಂದು ಜಿಲ್ಲಾಧಿಕಾರಿಗಳು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಕರೆದಿದ್ದು, ಉತ್ಸವದ ಸಿದ್ಧತೆ ಕುರಿತು ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.
ಅತ್ಯಂತ ಸರಳ ಉತ್ಸವ?:
ಉತ್ಸವಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ 8 ಕೋಟಿ ಪ್ರಸ್ತಾವನೆ ಕಳುಹಿಸಿತ್ತು. ಸರ್ಕಾರ ಇದಕ್ಕೆ ಒಪ್ಪಿಗೆಯನ್ನು ಸಹ ನೀಡಿತ್ತಲ್ಲದೆ, ಮೊದಲ ಹಂತದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ .1.5 ಕೋಟಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ .60 ಲಕ್ಷ ಬಿಡುಗಡೆಗೊಳಿಸಲಾಗಿದೆ. ನಂತರ ಉಳಿದ ಹಣವನ್ನು ಸರ್ಕಾರ ಬಿಡುಗಡೆಗೊಳಿಸಲಿದ್ದು, ಉಳಿದಂತೆ ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ಉತ್ಸವ ನಡೆಸಲು ಸಿದ್ಧತೆ ಕೈಗೊಳ್ಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ