
ಬೆಂಗಳೂರು (ಫೆ.5): ರಾಜ್ಯ ಸರ್ಕಾರಿ ಪ್ರಥಮ ದರ್ಜೆ, ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಕಾಲೇಜುಗಳು ಮತ್ತು ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದಲ್ಲಿ(ಯುವಿಸಿಇ) ಖಾಲಿ ಇರುವ ಒಟ್ಟು 2000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಅನುಮತಿ ನೀಡಿದೆ.
ಪ್ರಥಮ ದರ್ಜೆ ಕಾಲೇಜುಗಳಲ್ಲಿನ 825 ಸಹಾಯಕ ಪ್ರಾಧ್ಯಾಪಕ ಹುದ್ದೆ, ಪಾಲಿಟೆಕ್ನಿಕ್‌ಗಳಲ್ಲಿನ 941 ಉಪನ್ಯಾಸಕರ ಹುದ್ದೆ, ಎಂಜಿನಿಯರಿಂಗ್ ಕಾಲೇಜುಗಳಿಗೆ 186 ಸಹಾಯಕ ಪ್ರಾಧ್ಯಾಪಕ ಹುದ್ದೆ ಮತ್ತು ಯುವಿಸಿಇಯ 47 ಬೋಧಕ ಹುದ್ದೆಗಳು ಸೇರಿ ಪ್ರಸಕ್ತ ಸಾಲನ ಬಜೆಟ್‌ನಲ್ಲಿ ಘೋಷಿಸಿರುವಂತೆ ಒಟ್ಟು 2000 ಹುದ್ದೆಗಳ ಭರ್ತಿಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತರು ಉನ್ನತ ಶಿಕ್ಷಣ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದರು. ಇದಕ್ಕೆ ಆರ್ಥಿಕ ಇಲಾಖೆಯ ಸಲಹೆಗಳನ್ವಯ ನೇಮಕಾತಿಗೆ ಷರತ್ತು ಬದ್ಧ ಅನುಮತಿ ನೀಡಿ ಇಲಾಖೆಯ ಉಪ ಕಾರ್ಯದರ್ಶಿ ಬುಧವಾರ ಆದೇಶ ಮಾಡಿದ್ದಾರೆ.
ಈ ಹುದ್ದೆಗಳನ್ನು ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ಅಗತ್ಯ ವಿದ್ಯಾರ್ಹತೆ, ನೇಮಕಾತಿ ವಿಧಾನದಂತೆ ನೇರ ನೇಮಮಾತಿ ಮೂಲಕ ಭರ್ತಿ ಮಾಡಬೇಕು. ಕಲ್ಯಾಣ ಕರ್ನಾಟಕ ವೃಂದಕ್ಕೆ ಮೀಸಲಿರಿಸಿರುವ ಹುದ್ದೆಗಳನ್ನು ನಿಯಮಾನುಸಾರ ವರ್ಗೀಕರಿಸಿ ನೇಮಕಾತಿಗೆ ಕ್ರಮ ವಹಿಸಬೇಕು. ಯುವಿಸಿಇಯ 47 ಹುದ್ದೆಗಳ ಭರ್ತಿಗೆ ಮುನ್ನ ವಿವಿಯಲ್ಲಿ ಖಾಲಿ ಇರುವ 72 ಹುದ್ದೆಗಳ ಬಗ್ಗೆ ಪೂರ್ಣ ಮಾಹಿತಿ ಮತ್ತು ಅಗತ್ಯ ದಾಖಲೆಗಳನ್ನು ಸರ್ಕಾರಕ್ಕೆ ಸಲ್ಲಿಸಬೇಕು. ನಂತರ ಸರ್ಕಾರದ ಅನುಮೋದನೆ ಪಡೆದು ಸದರಿ ಹುದ್ದೆಗಳ ಭರ್ತಿ ಮಾಡಬೇಕೆಂದು ಷರತ್ತು ವಿಧಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ