ಮುರುಘರಾಜೇಂದ್ರ ಖಾಸಗಿ ವಿವಿ ಸ್ಥಾಪನೆಗೆ ಸಂಪುಟ ಅಸ್ತು

By Kannadaprabha NewsFirst Published Sep 16, 2020, 6:51 AM IST
Highlights

ಶ್ರೀ ಮುರುಘ ರಾಜೇಂದ್ರ ಖಾಸಗಿ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. ಈ ಬಗ್ಗೆ ಸಚಿವರು ಅಧಿಕೃತ ಮಾಹಿತಿ ನೀಡಿದ್ದಾರೆ.

ಬೆಂಗಳೂರು (ಸೆ.16): ಶ್ರೀ ಜಗದ್ಗುರು ಮುರುಘರಾಜೇಂದ್ರ ವಿಶ್ವವಿದ್ಯಾಲಯ ವಿಧೇಯಕ ಮತ್ತು ವಿದ್ಯಾಶಿಲ್ಪ ವಿಶ್ವವಿದ್ಯಾಲಯ ವಿಧೇಯಕ 2020ಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.

ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಎರಡು ಖಾಸಗಿ ವಿಶ್ವವಿದ್ಯಾಲಯದ ವಿಧೇಯಕಕ್ಕೆ ಅನುಮೋದನೆ ನೀಡಲಾಗಿದೆ. ಬೆಳಗಾವಿಯ ಬಾಗೇವಾಡಿ ಮತ್ತು ಹಾಲಗಿಮರ್ಡಿ ಗ್ರಾಮಗಳ ಒಟ್ಟು 126.27 ಎಕರೆ ಜಮೀನನ್ನು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.

ಸಂಪುಟ ಸಭೆಗೂ ಮೊದಲು ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಕಾವೇರಿ ನಿವಾಸದಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿದರು. ಇದೇ ವೇಳೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ರಾಘವೇಂದ್ರ ಅವರೂ ಉಪಸ್ಥಿತರಿದ್ದರು.

click me!