Karnataka Government ಅಧಿಕಾರಿಗಳಿಗೆ ಮಹತ್ವದ ಸುತ್ತೋಲೆ ಹೊರಡಿಸಿದ ಕರ್ನಾಟಕ ಸರ್ಕಾರ

By Suvarna News  |  First Published Jan 18, 2022, 7:55 PM IST

* ಸರ್ಕಾರಿ ಅಧಿಕಾರಿಗಳಿಗೆ ಮಹತ್ವದ ಸೂಚನೆ ಕೊಟ್ಟ ಕರ್ನಾಟಕ ಸರ್ಕಾರ
* ಶೇ.50ರಷ್ಟು ಹಾಜರಾತಿಗೆ ಅವಕಾಶ ಮುಂದುವರಿಕೆ
* ಕೋವಿಡ್ ನಿರ್ವಹಣಾ ಕರ್ತವ್ಯದಿಂದ ವಿಕಲಚೇತನರು ಮತ್ತು ಗರ್ಭಿಣಿ ಯರಿಗೆ ವಿನಾಯಿತಿ


ಬೆಂಗಳೂರು, (ಜ.18): ಕರ್ನಾಟಕದಲ್ಲಿ(Karnataka) ಕೊರೋನಾ ಸೋಂಕು(Coronavirus) ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಇದರಿಂದ ಪಾಸಿಟಿವಿಟಿ ರೇಟ್ ಶೇ.20 ದಾಟಿದೆ.

ಈ ಹಿನ್ನೆಲೆಯಲ್ಲಿ ಸರ್ಕಾರಿ ಅಧಿಕಾರಿಗಳು ಕಚೇರಿಗಳಿಗೆ ಹಾಜರಾಗುವ ಹಾಗೂ ವಿನಾಯಿತಿ ಪಡೆಯುವ ಕುರಿತಂತೆ ಕರ್ನಾಟಕ ಸರ್ಕಾರ(Karnataka Government) ಸುತ್ತೋಲೆ ಹೊರಡಿಸಿದೆ.

Tap to resize

Latest Videos

undefined

Weekend-Night Curfew ವೀಕೆಂಡ್‌, ನೈಟ್‍ ಕರ್ಫ್ಯೂ ಸಂಬಂಧ ಅಶ್ವತ್ಥ್ ನಾರಾಯಣ ಭೇಟಿಯಾದ ಹೋಟೆಲ್ ಮಾಲೀಕರ ಸಂಘ

ಸಚಿವಾಲಯ ಅಧಿಕಾರಿಗಳು ಜನವರಿ 30ರವರೆಗೆ ಶೇಕಡಾ 50ರಷ್ಟು ಹಾಜರಾತಿಗೆ ಅವಕಾಶ ಮುಂದುವರಿಸಿ ರಾಜ್ಯ ಸರ್ಕಾರ ಆದೇಶಿಸಿದ್ದು, ಸಚಿವಾಲಯದಲ್ಲಿ ಅತ್ಯಗತ್ಯ ಸೇವೆಗಳನ್ನು ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ವರ್ಗದ ಅಧಿಕಾರಿ ಹಾಗೂ ಸಿಬ್ಬಂದಿ ಒದಗಿಸುತ್ತಿರುವ ಎಂದಿನಂತೆ ಕರ್ತವ್ಯಕ್ಕೆ ಹಾಜರಾಗತಕ್ಕದ್ದು ಎಂದು ತಿಳಿಸಿದೆ.

 ಇನ್ನುಳಿದ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರೂಪ್ - ಎ ವೃಂದದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕಚೇರಿಗೆ ಹಾಜರಾಗತಕ್ಕದ್ದು ಮತ್ತು ಗ್ರೂಪ್ ಬಿ, ಸಿ ಮತ್ತು ಡಿ ವೃಂದದ ಅಧಿಕಾರಿ ಮತ್ತು ಸಿಬ್ಬಂದಿ ಶೇಕಡಾ 50ರಂತೆ ರೊಟೇಷನ್ ಆಧಾರದ ಮೇಲೆ ಕರ್ತವ್ಯಕ್ಕೆ ಹಾಜರಾಗಬೇಕೆಂದು ಸುತ್ತೋಲೆಯಲ್ಲಿ ಹೇಳಿದೆ.

 ಹಾಜರಾತಿಯಿಂದ ವಿನಾಯಿತಿ ನೀಡಲ್ಪಟ್ಟವರು ಇಲಾಖೆಯ ಕಾರ್ಯದರ್ಶಿಯವರು ಅಥವಾ ಇಲಾಖಾ ಮುಖ್ಯಸ್ಥರು ಇಚ್ಛಿಸಿದಲ್ಲಿ ಅವರು ಬಯಸುವಂತಹ ಅಧಿಕಾರಿ ಹಾಗೂ ನೌಕರರುಗಳು ಯಾವುದೇ ಕಾರಣ ನೀಡದೇ ಕಚೇರಿಗೆ ಹಾಜರಾಗುವುದು. ಕೋವಿಡ್ ಕರ್ತವ್ಯಕ್ಕಾಗಿ ನಿಯೋಜಿಸಿದ್ದ ಅಧಿಕಾರಿ ಹಾಗೂ ನೌಕರರು ತಪ್ಪದೇ ಹಾಜರಾಗಿ ಕರ್ತವ್ಯ ನಿರ್ವಹಿಸತಕ್ಕದ್ದು ಎಂದು ಸ್ಪಷ್ಟಪಡಿಸಿದೆ.

ದೃಷ್ಟಿಹೀನ ಹಾಗೂ ಇತರೆ ದೈಹಿಕ ಅಂಗವೈಕಲ್ಯ ಹೊಂದಿರುವ ಅಧಿಕಾರಿ ಅಥವಾ ಸಿಬ್ಬಂದಿ ಮತ್ತು ಗರ್ಭಿಣಿಯರಿಗೆ ಕೋವಿಡ್ ನಿರ್ವಹಣಾ ಕರ್ತವ್ಯದಿಂದ  ವಿನಾಯಿತಿ ನೀಡಲಾಗಿದೆ. ಈ ಸುತ್ತೋಲೆಯು 30.01.2022 ರವರೆಗೆ ಅಸ್ತಿತ್ವದಲ್ಲಿರುತ್ತದೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ಶುಕ್ರವಾರ ಅಂತಿಮ ನಿರ್ಧಾರ
ವೀಕೆಂಡ್ ಕರ್ಫ್ಯೂ (Weekend Curfew) ಮತ್ತು ನೈಟ್ ಕರ್ಫ್ಯೂ (Night Curfew) ತೆರವುಗೊಳಿಸುವಂತೆ ಹಲವರು ಮನವಿ ಮಾಡುತ್ತಿದ್ದಾರೆ. ಅಲ್ಲದೇ ಕರ್ಫ್ಯೂಗಳ ಬಗ್ಗೆ ತಜ್ಞರಲ್ಲೇ ಭಿನ್ನಾಭಿಪ್ರಾಯವಿದೆ ಎಂದು ಮೇಲ್ನೋಟಕ್ಕೆ ಗೋಚರವಾಗುತ್ತಿದೆ. ತಜ್ಞರ ದ್ವಂದ ಅಭಿಪ್ರಾಯಗಳ ಹಿನ್ನೆಲೆ, ಶುಕ್ರವಾರ ಈ ಬಗ್ಗೆ ಅಂತಿಮ ನಿರ್ಧಾರ ಹೊರಬೀಳಲಿದೆ. ತಜ್ಞರು ಶುಕ್ರವಾರ ನೀಡುವ ವರದಿ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ.

ತಜ್ಞರ ಸಮಿತಿಯ ಕೆಲ ತಜ್ಞರು ನೈಟ್ ಕರ್ಫ್ಯೂ ಹಾಗೂ ವಿಕೇಂಡ್ ಕರ್ಫ್ಯೂ ಅವಶ್ಯಕತೆ ಇಲ್ಲ. ಆಸ್ಪತ್ರೆಗೆ ದಾಖಲಾಗುವ ಸೋಂಕಿತರ ಪ್ರಮಾಣ ಕಡಿಮೆಯಿದೆ. ಪ್ರತಿಯೊಂದು ಮನೆಯಲ್ಲೂ ಶೀತ, ತಲೆನೋವು, ಜ್ವರ ಇರುವ ರೋಗಗಳು ಇದ್ದಾರೆ. ಹೀಗಾಗಿ ಕರ್ಫ್ಯೂ ಮಾಡುವ ಅಗತ್ಯವಿಲ್ಲ ಅಂತ ಹೇಳುತ್ತಿದ್ದಾರೆ. ಇನ್ನೂ ಕೆಲ ತಜ್ಞರು ವಿಕೇಂಡ್ ಕರ್ಫ್ಯೂ ಜೊತೆ ಜೊತೆಗೆ ಹತ್ತು ದಿನ ಲಾಕ್​ಡೌನ್ ಮಾಡಬೇಕು ಅಂತ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಫೆಬ್ರವರಿಯಲ್ಲಿ ಕೊರೊನಾ ಭಾರೀ ತೀವ್ರ ಸ್ವರೂಪ ಪಡೆಯಲಿದ್ದು, ಕಠಿಣ ರೂಲ್ಸ್ ಬೇಕು ಅಂತ ಮತ್ತೊಂದು ತಜ್ಞರ ತಂಡ ತಿಳಿಸಿದೆ. ಹೀಗಾಗಿ ಶುಕ್ರವಾರ ಈ ಬಗ್ಗೆ ಚರ್ಚೆ ನಡೆಸಿ ಕರ್ಫ್ಯೂ ಬಗ್ಗೆ ನಿರ್ಧರಿಸಲಾಗುತ್ತದೆ.

click me!