
ಬೆಂಗಳೂರು, (ಜೂನ್.20): ಕೊರೋನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ರಾಜ್ಯ ಸರ್ಕಾರದ ಸಪ್ತಪದಿ ಸಾಮೂಹಿಕ ವಿವಾಹಕ್ಕಾಗಿ ಈಗ ಮತ್ತೆ ಅರ್ಜಿ ಆಹ್ವಾನಿಸಲಾಗಿದೆ.
ಜುಲೈ 23, 26 ಮತ್ತು 29 ರಂದು ರಂದು ಸಾಮೂಹಿಕ ಮದುವೆ ನಡೆಯಲಿದೆ. ಅಲ್ಲದೇ ಆಗಸ್ಟ್ 6,10, 14 ಮತ್ತು 17 ತಾರೀಖಿನಂದು ಸಹ ಸಾಮೂಹಿಕ ವಿವಾಹವನ್ನು ಆಯೋಜಿಸಲಾಗಿದ್ದ, ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆ ಇಂದು (ಶನಿವಾರ) ಅಧಿಕೃತ ಆದೇಶವನ್ನು ಹೊರಡಿಸಿದೆ.
110 ದೇಗುಲಗಳಲ್ಲಿ ಸಾಮೂಹಿಕ ವಿವಾಹ : ಚಿನ್ನ, ಸೀರೆ ಉಡುಗೊರೆ
ಕೊರೋನಾ ಭೀತಿ ಹಿನ್ನೆಲೆಯಲ್ಲಿ ಎಪ್ರಿಲ್ , ಮೇ ತಿಂಗಳಲ್ಲಿ ನಡೆಯಬೇಕಿದ್ದ ಸಾಮೂಹಿಕ ವಿವಾಹ ಮುಂದೂಡಲಗಿತ್ತು. ಈಗಾಗಲೇ ನೊಂದಣಿ ಮಾಡಿಕೊಂಡಿರುವ ಜೋಡಿಗಳಿಗೆ ಜುಲೈ ತಿಂಗಳಲ್ಲಿ ಕಂಕಣಬಲ ಕೂಡಿ ಬಂದಿದೆ.
ವಧು-ವರರಿಗೆ 55,000ರೂ.
ಮುಜರಾಯಿ ಇಲಾಖೆಯಿಂದ ನಡೆಯುವ ಸಾಮೂಹಿಕ ವಿವಾಹದಲ್ಲಿ ಪಾಲ್ಗೊಳ್ಳುವ ವಧುವಿಗೆ 8 ಗ್ರಾಂ ಚಿನ್ನದ ಮಾಂಗಲ್ಯ ಸೇರಿ, ವಧು-ವರರಿಗೆ ವಿವಾಹಕ್ಕೆ ಅಗತ್ಯವಿರುವ ವಸ್ತುಗಳ ಖರೀದಿಗೆ 55,000 ರೂ.ಗಳನ್ನು ದೇವಾಲಯದಿಂದಲೇ ಭರಿಸಲಾಗುತ್ತದೆ.
ವರನಿಗೆ ಪಂಚೆ-ಶರ್ಟ್ ಹಾಗೂ ಶಲ್ಯ ನೀಡಲಾಗುತ್ತದೆ. ವಧುವಿಗೆ ಧಾರೆ ಸೀರೆ, ಚಿನ್ನದ ತಾಳಿ ಮತ್ತು ಎರಡು ಚಿನ್ನದ ಗುಂಡು ನೀಡಲಾಗುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ