* ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನ ಅಂತ್ಯ
* ಹತ್ತು ದಿನ ನಡೆದ ಅಧಿವೇಶನ
* ವಿಧಾನ ಪರಿಷತ್ತಿನಲ್ಲಿ ಮಂಡನೆಯಾಗದ ಮತಾಂತರ ಮಸೂದೆ
ಬೆಳಗಾವಿ, (ಡಿ.24): ಸುಮಾರು 10ದಿನಗಳಿಂದ ನಡೆದ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನ (Belagavi Winter Session) ಇಂದಿಗೆ(ಶುಕ್ರವಾರ) ಮುಕ್ತಾಯವಾಗಿದೆ.
ಪ್ರಮುಖವಾಗಿ ವಿಧಾನಸಭೆ ಅಧಿವೇಶನದಲ್ಲಿ ಕಾಂಗ್ರೆಸ್ ತೀವ್ರ ವಿರೋಧದ ನಡುವೆಯೇ ಮತಾಂತರ ನಿಷೇಧ ಕಾಯ್ದೆಯನ್ನು (Anti Conversion Bill) ಮಂಡಿಸಲಾಗಿದ್ದು, ಅದು ಅಂಗೀಕಾರ ಆಗಿದೆ ಕೂಡ. ಆದ್ರೆ, ಅದು ವಿಧಾನರಿಷತ್ ಮಂಡನೆ ಆಗಿಲ್ಲ.
Asianet Suvarna Special: ಮತಾಂತರ ನಿಷೇಧ ಕಾಯ್ದೆ ನಿಜವಾದ ಸೃಷ್ಟಿಕರ್ತ ಯಾರು..?
undefined
ಹೌದು... ವಿಪಕ್ಷ ಕಾಂಗ್ರೆಸ್ ಒತ್ತಡಕ್ಕೆ ಮಣಿದ ರಾಜ್ಯ ಬಿಜೆಪಿ ಸರ್ಕಾರ ಮತಾಂತರ ನಿಷೇಧ ಮಸೂದೆಯನ್ನು ಸದ್ಯಕ್ಕೆ ಹಿಂತೆಗೆದುಕೊಂಡು, ಮುಂದಿನ ಅಧಿವೇಶನದಲ್ಲಿ ಮಂಡಿಸಲು ನಿರ್ಧರಿಸಿದೆ.
ಮತಾಂತರ ನಿಷೇಧ ವಿಧೇಯಕ ವಿಧಾನ ಪರಿಷತ್ನಲ್ಲಿ ಮಂಡನೆ ಆಗಿಲ್ಲ. ವಿರೋಧ ಪಕ್ಷಗಳ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಹಿಂದೂ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ ಮಂಡನೆ ಮಾಡಿಲ್ಲ. ಆಡಳಿತ ಹಾಗೂ ಪ್ರತಿಪಕ್ಷ ನಾಯಕರ ಸಂಧಾನ ಸಭೆಯಲ್ಲಿ ಮುಂದಿನ ಅಧಿವೇಶನದಲ್ಲಿ ಬಿಲ್ ಮಂಡನೆ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು ಕೊನೆದಿನವಾದ ಇಂದು (ಡಿ.24) ಪರಿಷತ್ನಲ್ಲಿ ಕಾಂಗ್ರೆಸ್ ಸದಸ್ಯರು ಮೊದಲೇ ಹಾಜರಿದ್ದರೂ ಆಡಳಿತ ಪಕ್ಷ ಸದಸ್ಯರು 1 ಗಂಟೆ ತಡವಾಗಿ ಬಂದರು. ಹೀಗಾಗಿ, ವಿಧಾನಸಭೆಯಲ್ಲಿ ಬಿಲ್ ಮಂಡನೆಯಾದ ರೀತಿ ಬಗ್ಗೆ ಆಕ್ಷೇಪ ಕೂಡ ವ್ಯಕ್ತವಾಯಿತು.
ಏಕಾಏಕಿ ಬಿಲ್ ತಂದರೆ ಚರ್ಚೆ ಸಾಧ್ಯವಿಲ್ಲ ಎಂದು ಗಲಾಟೆ ನಡೆಯಿತು. ಚರ್ಚೆಗೆ ಸಮಯ ಬೇಕು ಎಂದು ಪ್ರತಿಪಕ್ಷಗಳು ಪಟ್ಟು ಹಿಡಿದವು. ಬೆಳಗ್ಗೆಯಿಂದ ಏಕೆ ಬಿಲ್ ಮಂಡಿಸಿಲ್ಲ. ನಿಮ್ಮ ಸಂಖ್ಯೆ ಕಡಿಮೆ ಇರುವ ಹಿನ್ನೆಲೆ ಸಮಯ ವ್ಯರ್ಥ ಮಾಡಲಾಗಿದೆ. ಸಮಯ ವ್ಯರ್ಥ ಮಾಡಿದ್ದೀರಿ ಎಂದು ಪ್ರತಿಪಕ್ಷ ಆರೋಪ ಮಾಡಿತ್ತು. ಏಕಾಏಕಿ ಬಿಲ್ ಮಂಡನೆಗೆ ಅವಕಾಶ ನೀಡಲ್ಲವೆಂದು ಗಲಾಟೆ ಕೇಳಿಬಂತು. ಕೆಲಕಾಲ ರಣರಂಗವಾಗಿದ್ದ ವಿಧಾನ ಪರಿಷತ್ ಕಲಾಪದ ಹಿನ್ನೆಲೆ ಸಭಾಪತಿ ಕೊಠಡಿಯಲ್ಲಿ ನಾಯಕರ ಸಂಧಾನ ಸಭೆ ನಡೆಸಲಾಯಿತು. ಆಡಳಿತ ಹಾಗೂ ಪ್ರತಿಪಕ್ಷ ನಾಯಕರ ಸಂಧಾನ ಸಭೆಯಲ್ಲಿ ಮುಂದಿನ ಅಧಿವೇಶನದಲ್ಲಿ ಬಿಲ್ ಮಂಡನೆ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು.
ಮುಂದಿನ ಅಧಿವೇಶನದಲ್ಲಿ ತೆಗೆದುಕೊಳ್ಳುತ್ತೇವೆ
ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡಿಸುತ್ತೇವೆ ಎಂದು ಸರ್ಕಾರದ ಪರವಾಗಿ ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ ಉತ್ತರ ನೀಡಿದ್ದಾರೆ. ಮತಾಂತರ ನಿಷೇಧ ವಿಧೇಯಕ ಮಂಡಿಸದ ಸರ್ಕಾರ, ಮುಂದಿನ ಅಧಿವೇಶನದಲ್ಲಿ ತೆಗೆದುಕೊಳ್ಳುತ್ತೇವೆ ಎಂದು ಪೂಜಾರಿ ಹೇಳಿದ್ದಾರೆ.
ಇದಕ್ಕೂ ಮೊದಲು ಪರಿಷತ್ ಕಲಾಪಕ್ಕೆ ಕೆಲಕಾಲ ಬ್ರೇಕ್ ನೀಡಿರುವ ಸಭಾಪತಿ, ಕಾಂಗ್ರೆಸ್ ಸದಸ್ಯರ ಜತೆ ಸಭೆ ನಡೆಸಿದ್ದರು. ಸದನ ನಾಯಕರು, ವಿಪಕ್ಷಗಳ ನಾಯಕರ ಜತೆ ಹೊರಟ್ಟಿ ಸಭೆ ನಡೆಸಿದ್ದಾರೆ. ನಾನು ತಿಳಿದು ತಿಳಿದು ನಾನು ಕಾಲಹರಣ ಮಾಡಿಲ್ಲ. ಬಿಜೆಪಿ ನಾಯಕರೇ ಕಾಲಾವಕಾಶಕ್ಕೆ ಮನವಿ ಮಾಡಿದ್ರು. ಇದರ ಬಗ್ಗೆ ನಿಮ್ಮ ಜೊತೆ ಚರ್ಚಿಸಿದ್ದೇವೆ ಅಂದರು. ಹೀಗಾಗಿ ನಾನು ಕಾಲಾವಕಾಶ ಕೊಟ್ಟಿದ್ದೆ ಎಂದು ಬಸವರಾಜ ಹೊರಟ್ಟಿ ಹೇಳಿದ್ದರು. ಇದೀಗ ವಿಧಾನ ಪರಿಷತ್ ಕಲಾಪವನ್ನ ಅನಿರ್ದಿಷ್ಟಾವಧಿಗೆ ಮುಂದೂಡಿ ಉಪಸಭಾಪತಿ ಪ್ರಾಣೇಶ್ ಆದೇಶಿಸಿದ್ದಾರೆ.