
ಬೆಂಗಳೂರು, [ಮಾ.09]: ಮಾರಕ ಕೊರೋನಾ ಭೀತಿಯ ಹಿನ್ನೆಲೆ ಬೆಂಗಳೂರು ವ್ಯಾಪ್ತಿಯಲ್ಲಿ LKGಯಿಂದ ಹಿಡಿದು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
"
ಇಂದು [ಸೋಮವಾರ] ರಜೆ ಘೋಷಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಾಳೆ ಅಂದ್ರೆ ಮಂಗಳವಾರದಿಂದ ಆದೇಶ ಅನ್ವಯವಾಗಲಿದ್ದು, ಮುಂದಿನ ಆದೇಶದವರರೆಗೂ ಶಾಲೆಗಳಿಗೆ ರಜೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಮಾರ್ಚ್ 9 ರಿಂದ ಬೆಂಗಳೂರಿನ ಪ್ರಿ -ಸ್ಕೂಲ್‌ಗಳಿಗೆ ರಜೆ
ಇನ್ನು ಈ ಬಗ್ಗೆ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಟ್ವೀಟ್ ಮೂಲಕ ಖಚಿತಪಡಿಸಿದ್ದು, ರಾಜ್ಯದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಿದಂತೆ ಬಿಬಿಎಂಪಿ, ಬೆಂಗಳೂರುನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಎಲ್ಲಾ ಪ್ರಾಥಮಿಕ ಶಾಲೆಗಳಿಗೆ ಮುಂದಿನ ಆದೇಶದವರೆಗೆ ರಜೆ ಘೋಷಿಸಲಾಗಿದೆ ಎಂದು ಸುರೇಶ್ ಕುಮಾರ್ ಅವರು ಟ್ವೀಟ್ ಮಾಡಿ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಮೊದಲ ಕೊರೋನಾ ಕೇಸ್ ಪತ್ತೆ: ಎಚ್ಚರವಾಗಿರಿ..!
ಈ ಮೊದಲು ಕೇವಲ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಹಾಗೂ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಪೂರ್ವ ಪ್ರಾಥಮಿಕ ಶಾಲೆ (ನರ್ಸರಿ, ಎಲ್‌ಕೆಜಿ, ಯುಕೆಜಿ) ಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿತ್ತು.
ಆದ್ರೆ, ಇದೀಗ LKGಯಿಂದ 5ನೇ ತರಗತಿವರಗಿನ ಶಾಲೆಗಳಿಗೆ ರಜೆ ಘೋಷಿಸೊಲಾಗಿದೆ.
News In 100 Seconds: ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ