101 ಬರಪೀಡಿತ ತಾಲೂಕು ರೈತರಿಗೆ ಸರ್ಕಾರದಿಂದ ಗುಡ್‌ನ್ಯೂಸ್: 5 ವರ್ಷದವರೆಗೆ ರೈತರ ಸಾಲ ವಸೂಲಿಗೆ ಬ್ರೇಕ್‌!

Kannadaprabha News   | Kannada Prabha
Published : Sep 17, 2026, 06:15 AM IST
Karnataka Farmers Good News

ಸಾರಾಂಶ

ತೀವ್ರ ಬರದಿಂದ ಕಂಗೆಟ್ಟಿರುವ ರಾಜ್ಯದ 101 ತಾಲೂಕುಗಳ ರೈತರ ನೆರವಿಗೆ ಸರ್ಕಾರ ಧಾವಿಸಿದೆ. ಕೃಷಿ ಸಾಲಗಳ ಬಲವಂತದ ವಸೂಲಾತಿಗೆ ಬ್ರೇಕ್ ಹಾಕಲಾಗಿದ್ದು, ಮರುಪಾವತಿಗೆ 60 ತಿಂಗಳವರೆಗೆ ಕಾಲಾವಕಾಶ ನೀಡಲಾಗಿದೆ.

ಬೆಂಗಳೂರು (ಸೆ.17): ತೀವ್ರ ಬರದಿಂದ ಕಂಗೆಟ್ಟಿರುವ ರಾಜ್ಯದ ರೈತರ ನೆರವಿಗೆ ರಾಜ್ಯ ಸರ್ಕಾರ ಧಾವಿಸಿದೆ. ರಾಜ್ಯದ ಬರಪೀಡಿತ ತಾಲೂಕುಗಳ ರೈತರಿಂದ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಬಲವಂತ ವಸೂಲಾತಿಗೆ ಬ್ರೇಕ್‌ ಹಾಕಲಾಗಿದೆ. ಸಾಲ ಮರುಪಾವತಿಸಲು ರೈತರಿಗೆ 60 ತಿಂಗಳವರೆಗೆ ಅವಧಿ ನೀಡಲಾಗಿದೆ.

ಬರಪೀಡಿತ 101 ತಾಲೂಕಿನ ರೈತರಿಗೆ ಅನ್ವಯ

ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ನೇತೃತ್ವದಲ್ಲಿ ನಡೆದ ಬ್ಯಾಂಕರ್‌ಗಳ ರಾಜ್ಯ ಮಟ್ಟದ ಸಮಿತಿ (ಎಸ್‌ಎಲ್‌ಬಿಸಿ) ಸಭೆಯಲ್ಲಿ ಬರ ಪೀಡಿತ ತಾಲೂಕುಗಳ ರೈತರ ನೆರವಿಗಾಗಿ ಕೆಲ ಪರಿಹಾರ ಯೋಜನೆಗಳನ್ನು ಘೋಷಿಸಲಾಯಿತು.

ರಾಜ್ಯದ 24 ಜಿಲ್ಲೆಗಳ ಒಟ್ಟು 101 ತಾಲೂಕುಗಳು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಅದರಲ್ಲಿ 89 ತಾಲೂಕುಗಳು ತೀವ್ರ ಬರ ಪೀಡಿತ ಹಾಗೂ 12 ತಾಲೂಕುಗಳನ್ನು ಸಾಧಾರಣ ಬರಪೀಡಿತ ಎಂದು ವರ್ಗೀಕರಿಸಲಾಗಿದೆ.

ಸಾಲ ಮರುಪಾವತಿ ಅವಧಿ 60 ತಿಂಗಳು ವಿಸ್ತರಣೆ

ಸಾಮಾನ್ಯವಾಗಿ ಕಿಸಾನ್‌ ಕ್ರೆಡಿಟ್‌ ಕಾರ್ಡ್‌, ಕೃಷಿ ಸಾಲಗಳು, ಹೈನುಗಾರಿಕೆ, ರೇಷ್ಮೆ ಹಾಗೂ ಮೀನುಗಾರಿಕೆ ಸೇರಿ ಇತರ ಕೃಷಿ ಸಂಬಂಧಿತ ಸಾಲಗಳಿಗೆ 12 ತಿಂಗಳ ತಾತ್ಕಾಲಿಕ ತಡೆ ನೀಡಲಾಗುತ್ತದೆ. ಸಾಧಾರಣ ಬರ ಪೀಡಿತ ತಾಲೂಕುಗಳಲ್ಲಿ ಸಾಲ ಮರುಪಾವತಿ ಅವಧಿಯನ್ನು 36 ತಿಂಗಳಿಗೆ ಹಾಗೂ ತೀವ್ರ ಬರಪೀಡಿತ ತಾಲೂಕುಗಳಲ್ಲಿ 60 ತಿಂಗಳಿಗೆ ವಿಸ್ತರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ವಿವರ ಪುಟ 7

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸೆ.18ರಂದು ಕರಾವಳಿಯಲ್ಲಿ ಸಚಿವ ಸಂಪುಟ ಸಭೆ ಹಿನ್ನೆಲೆ, ಮಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಸಂಚಾರ ಬದಲಾವಣೆ, ಎಲ್ಲೆಲ್ಲಿ?
ಅನೇಕಲ್‌: ಸರ್ವರ್ ಸಮಸ್ಯೆ, ಅನ್ನಭಾಗ್ಯ ಅಕ್ಕಿಗಾಗಿ ಪರದಾಟ, ಕಿಮೀಗಟ್ಟಲೇ ಸರತಿ ಸಾಲು, ವ್ಯವಸ್ಥೆ ವಿರುದ್ಧ ಜನಾಕ್ರೋಶ