
ಬೆಂಗಳೂರು, (ಅ.08): ಕರ್ನಾಟಕದಲ್ಲಿ ಜಾರಿಯಲ್ಲಿರುವ ಕೋವಿಡ್ ಮಾರ್ಗಸೂಚಿಯನ್ನು (Covid Guidelines) ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಆದೇಶಿದೆ.
ಕೋವಿಡ್ ಮಾರ್ಗಸೂಚಿಯನ್ನ ಅಕ್ಟೋಬರ್ 25ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಇಂದು (ಅ.08) ಆದೇಶ ಹೊರಡಿಸಿದೆ.
ಕೋವಿಡ್ ಬಗ್ಗೆ ಇನ್ನೂ 3 ತಿಂಗಳು ಎಚ್ಚರ
ಕಣ್ಗಾವಲು, ನಿಯಂತ್ರಣ ಮತ್ತು ಜಾಗರೂಕತೆ ಮಾರ್ಗಸೂಚಿಗಳಿಗೆ(Guidelines) ಸಂಬಂಧಿಸಿದಂತೆ ಹೊರಡಿಸಿರುವ ಆದೇಶವನ್ನು ಅ.25ರ ಬೆಳಗ್ಗೆ 6 ಗಂಟೆವರೆಗೆ ಮುಂದುವರೆಸಿ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಆದೇಶಿಸಿದ್ದಾರೆ.
ಇನ್ನು ಕೇರಳ (Kerala) ಹಾಗೂ ಮಹಾರಾಷ್ಟ್ರದ ಗಡಿದ ಜಿಲ್ಲೆಗಳ ಚೆಕ್ ಪೋಸ್ಟ್ ಗಳಲ್ಲಿ ಹೆಚ್ಚಿನ ಕಣ್ಗಾವಲು ಇರಿಸುವುದನ್ನು ಮುಂದುವರೆಸಬೇಕೆಂದು ಬಿಬಿಎಂಪಿ ಆಯಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಕರ್ನಾಟಕದಲ್ಲಿ (Karnataka) ಕೊರೋನಾ ಎರಡನೇ ಅಲೆ ಭಾರೀ ಇಳಿಕೆಯಾಗಿದೆ. ಆದ್ರೆ, ಸೋಂಕು ನಿಯಂತ್ರಣಕ್ಕೆ ಇನ್ನೂ ಮೂರು ತಿಂಗಳ ಕಾಲ ನಿರ್ಣಾಯಕವಾಗಿದೆ ಎಂದಿರುವ ಕೇಂದ್ರ ಸರ್ಕಾರ (Union Governament) ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ.
ಮುಂದಿನ ಹಬ್ಬ (Festivals) ಮತ್ತು ಮದುವೆ Marraige) ಸಮಾರಂಭಗಳ ಮುಖಾಂತರ ಕೊರೋನಾ ವೈರಸ್ (Coroanvrus) ಮತ್ತೆ ಉದಯವಾಗಬಹುದು ಎಂದು ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಹೆಚ್ಚು ಜನಸಂದಣಿ ಇರುವ ಪ್ರದೇಶಗಳಿಂದ ದೂರ ಇರುವಂತೆ ಮತ್ತು ಮನೆಯಲ್ಲೇ ಆಚರಿಸುವಂತೆ ತಿಳಿಸಿದೆ.
ಕೇಂದ್ರ ಸರ್ಕಾರದ ಈ ಒಂದು ಸೂಚನೆ ಮೇರೆಗೆ ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಜಾರಿಯಲ್ಲಿರುವ ಕೋವಿಡ್ ಮಾರ್ಗಸೂಚಿಯನ್ನು ವಿಸ್ತರಿಸಿದೆ.
ಕೊರೋನಾ ವೈರಸ್‌ನ 2ನೇ ಅಲೆ ಇನ್ನೂ ಮುಕ್ತಾಯವಾಗಿಲ್ಲ. ಜನರು ಅನಗತ್ಯ ಪ್ರವಾಸ, ಪ್ರಯಾಣ ಮತ್ತು ಹೆಚ್ಚು ಜನ ಇರುವ ಪ್ರದೇಶಗಳಿಗೆ ಹೋಗದೇ ಮನೆಯಲ್ಲೇ ಇರಬೇಕು ಎಂದು ಕೇಂದ್ರ ಆರೋಗ್ಯ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ