ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಮಂಜುನಾಥ್ ಸೇವಾವಧಿ ವಿಸ್ತರಿಸಿ ಸರ್ಕಾರ ಆದೇಶ!

Published : Jul 18, 2022, 07:01 PM ISTUpdated : Jul 18, 2022, 07:29 PM IST
ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಮಂಜುನಾಥ್ ಸೇವಾವಧಿ ವಿಸ್ತರಿಸಿ ಸರ್ಕಾರ ಆದೇಶ!

ಸಾರಾಂಶ

ಪ್ರಸಿದ್ಧ ಹೃದ್ರೋಗ ಆಸ್ಪತ್ರೆಗಳಲ್ಲಿ ಒಂದಾದಂತ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್​ ಅವರ ಸೇವಾವಧಿಯನ್ನು ಸರ್ಕಾರ ವಿಸ್ತರಿಸಿದೆ.

ಬೆಂಗಳೂರು, (ಜುಲೈ.18):  ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಮಂಜುನಾಥ್ ಅವರ ಸೇವಾವಧಿಯನ್ನು ವಿಸ್ತರಿಸಲಾಗಿದೆ.

ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಮಂಜುನಾಥ್ ಅವರ ಸೇವಾವಧಿಯನ್ನು ಮುಂದಿನ 1 ವರ್ಷದವರೆಗೆ ವಿಸ್ತರಿಸಿ ಕರ್ನಾಟಕ ಸರ್ಕಾರ ಇಂದು(ಸೋಮವಾರ) ಆದೇಶ ಹೊರಡಿಸಿದೆ. ಇದರೊಂದಿಗೆ ಮಂಜುನಾಥ್ ಅವರು ಜುಲೈ 19, 2023ರ ವರೆಗೆ ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಮುಂದುವರಿಯಲಿದ್ದಾರೆ.

ಈ ಹಿಂದೆ ಬಿಎಸ್‌ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಅಗಿದ್ದ ಸಂದರ್ಭದಲ್ಲೂ ಸಹ ಡಾ.ಮಂಜುನಾಥ್ ಅವರ ಸೇವಾವಧಿಯನ್ನು ಒಂದು ವರ್ಷ ವಿಸ್ತರಿಸಲಾಗಿತ್ತು.ಇದೀಗ ಬಸವರಾಜ ಬೊಮ್ಮಾಯಿ ಸರ್ಕಾರ ಸಹ ಮತ್ತೊಂದು ವರ್ಷ ಸೇವಾವಧಿ ವಿಸ್ತರಿಸಿದೆ. ಮಂಜುನಾಥ್ ಅವರ ಕಾರ್ಯ ವೈಖರಿ, ಆಸ್ಪತ್ರೆಯಲ್ಲಿ ಸಿಬ್ಬಂದಿ ಹಾಗೂ ವೈದ್ಯರನ್ನು ನಡೆಸಿಕೊಳ್ಳುವ ರೀತಿ ಹಾಗೂ ರೋಗಿಗಳಿಗೆ ನೀಡುತ್ತಿರುವ ಸ್ಪಂದನೆ ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ.

ಅದಕ್ಕಿಂತ ಮಿಗಿಲಾಗಿ ಮಂಜುನಾಥ್ ಅವರ ದೊಡ್ಡ ಗುಣ, ಮಾನವೀಯತೆ, ಸರಳತೆ ನಿಜ್ಕೂ ಮೆಚ್ಚುವಂತದ್ದು. ಹಾಗಾಗಿಯೇ ಜಯದೇವ ಆಸ್ಪತ್ರೆ ಬಡ ರೋಗಿಗಳಿಗೆ ಅಚ್ಚುಮೆಚ್ಚು. ಇಷ್ಟೇ ದುಡ್ಡು ಕೊಡಬೇಕು. ಇಲ್ಲಂದ್ರೆ ಚಿಕಿತ್ಸೆ ಅಂತೆಲ್ಲ ಈ ಆಸ್ಪತ್ರೆಯಲ್ಲಿ ನಡೆಯಲ್ಲ. ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ. ಹಣವಿಲ್ಲದಿದ್ದರೂ ಸಹ ಬಡ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಿರುವ ಸಾಕಷ್ಟು ಉದಾಹರಣೆಗಳು ನಮ್ಮ ಕಣ್ಣ ಮುಂದೆ ಇವೆ. ಬಡ ಹೃಯದಗಳನ್ನ ಕಾಪಾಡುವ ಹೃದಯವಂತ ಅಂದರೂ ತಪ್ಪಾಗಲಾರದು. ಹಾಗಾಗಿ ಆಸ್ಪತ್ರೆ ಸಿಬ್ಬಂದಿಗಳು ಮಾತ್ರವಲ್ಲ ಜನರು ಸಹ ಮಂಜುನಾಥ್ ಅವರನ್ನ ಬಿಟ್ಟು ಕೊಡಲು ಮನಸ್ಸಿಲ್ಲ.ಹಾಗಾಗಿ ಒಂದು ವೇಳೆ ಮಂಜುನಾಥ್ ಅವವರ ಸೇವಾವಧಿ ಮುಂದುವರಿಸು ನಿರಾಕರಿಸಿದ್ರೆ ಆಸ್ಪತ್ರೆ ಸಿಬ್ಬಂದಿ ಪ್ರತಿಭಟನೆ ಮಾಡಲು ಮುಂದಾಗಿದ್ದರು. 

ಹೃದ್ರೋಗ ತಜ್ಞ ಡಾ. ಮಂಜುನಾಥ್ ಈಗಿನ ಆಹಾರ ಪದ್ದತಿ ಹಾಗೂ ಜೀವನ ಶೈಲಿಯ ಬಗ್ಗೆ ಹೇಳುವುದೇನು?

ಇಂಡಿಯನ್ ಮೆಡಿಕಲ್ ಕೌನ್ಸಿಲ್ ನಿಯಮದ ಪ್ರಕಾರ ಗರಿಷ್ಠ 70 ವರ್ಷದ ವರೆಗೂ ಸೇವೆ ಸಲ್ಲಿಸಬಹುದು. ಆದರೆ ಸದ್ಯ ಡಾ. ಮಂಜುನಾಥ್ ಅವರಿಗೆ  65 ವರ್ಷ ಮಾತ್ರ. ಹೀಗಾಗಿ ಇನ್ನಷ್ಟು ವರ್ಷ ಅವರನ್ನ ನಿರ್ದೇಶಕರಾಗಿ ಮುಂದುವರೆಸಬೇಕು ಒತ್ತಾಯಗಳು ಸಹ ಕೇಳಿಬಂದಿದ್ದವು.

ಡಾ.ಮಂಜುನಾಥ್  ಅವರ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಸ್ಥಾನದ  ಅಧಿಕಾರಾವಧಿ ನಾಳೆ(ಜುಲೈ 18) ಮುಕ್ತಾಯವಾಗುತ್ತಿತ್ತು. ಆದ್ರೆ, ಅವರ ಅಧಿಕಾರವಧಿಯನ್ನು ವಿಸ್ತರಿಸುವಂತೆ ಜಯದೇವ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು.  ಇದಕ್ಕೆ ಸರ್ಕಾರ ಸ್ಪಂದಿಸಿದೆ.

ಸಿಬ್ಬಂದಿ ಬರೆದಿದ್ದ ಪತ್ರ
ಜಯದೇವ ಹೃದ್ರೋಗವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಸಿಬ್ಬಂದಿಯಾದ ನಾವುಗಳು ಈ ಮೂಲಕ ಕೋರುವುದೇನೆಂದರೆ, ಪ್ರಸ್ತುತ ಸಂಸ್ಥೆಯ ನಿರ್ದೇಶಕರಾಗಿರುವ ಡಾ.ಸಿ.ಎನ್. ಮಂಜುನಾಥ್ ರವರ ಸೇವೆಯು ದಿನಾಂಕ: 19-07-2022ಕ್ಕೆ ಅಂತಿಮಗೊಳ್ಳುತ್ತಿರುವುದು ನಮ್ಮೆಲ್ಲರಿಗೂ ಅಪಾರವಾದ ನೋವನ್ನುಂಟುಮಾಡಿದೆ. ನಮ್ಮ ನಿರ್ದೇಶಕರ ಕರುಣೆ, ಶಿಸ್ತು, ಆಪ್ಯಾಯತೆ, ಸೂಕ್ತ ನಿರ್ದೇಶನ, ಮಾರ್ಗದರ್ಶನ ಮುಂತಾದ ಉನ್ನತ ಗುಣಗಳನ್ನು ಮಾದರಿಯಾಗಿಟ್ಟುಕೊಂಡು ಮುನ್ನಡೆಯುತ್ತಿರುವ ಸಂಸ್ಥೆಯ ಸಿಬ್ಬಂದಿ ಹಾಗೂ ಲಕ್ಷಾಂತರ ಬಡ ಹೃದ್ರೋಗಿಗಳಿಗೆ ಈ ವಿಷಯವು ಅತ್ಯಂತ ಖೇದವುಂಟುಮಾಡಿದೆ.

ಆದ್ದರಿಂದ ನ್ಯಾಷನಲ್ ಮೆಡಿಕಲ್ ಕೌನ್ಸಿಲ್ ಪ್ರಕಾರ ಯಾವುದೇ ಸಂಸ್ಥೆಯ ಮುಖ್ಯಸ್ಠರು 70 ವರ್ಷಗಳವರೆಗೆ ಸೇವೆಯನ್ನು ನಿರ್ವಹಿಸಬಹುದು. ಅದರಂತೆ ಪ್ರಸ್ತುತ ಡಾ. ಸಿ.ಎನ್. ಮಂಜುನಾಥ್ ರವರಿಗೆ 65 ವರ್ಷ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಮತ್ತಷ್ಟು ವರ್ಷಗಳವರೆಗೆ ಆಡಳಿತ ನಿರ್ವಹಿಸುವ ನಾಯಕತ್ವ ಗುಣವಿರುವುದನ್ನು ತಮ್ಮ ಗಮನಕ್ಕೆ ತರಬಯಸುತ್ತೇವೆ. ಅಧೋಗತಿಯಲ್ಲಿ ಮುಳುಗುತ್ತಿದ್ದ ಜಯದೇವ ಆಸ್ಪತ್ರೆಯನ್ನು ಕೈಹಿಡಿದೆತ್ತಿದ್ದಾರೆ ಎಂದು ಜಯದೇವ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಪತ್ರದಲ್ಲಿ ಬರೆದಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!