ಕೊರೋನಾ ಸಂದರ್ಭದಲ್ಲಿ ಖಾಸಗಿ ಅಸ್ಪತ್ರೆಗಳು ಜನರು ಲೂಟಿಗಿಳಿದಿವೆ. ಈ ದುಬಾರಿ ಹಣ ವಸೂಲಿಗೆ ಕಡಿವಾಣ ಹಾಕಿ ಸರ್ಕಾರ ದರ ನಿಗದಿ ಮಾಡಿದೆ.
ಬೆಂಗಳೂರು, (ಮೇ.07): ಖಾಸಗಿ ಆಸ್ಪತ್ರೆಗಳಲ್ಲಿ ಸಿ.ಟಿ. ಸ್ಕ್ಯಾನಿಂಗ್ ದರವನ್ನು ನಿಗದಿಗೊಳಿಸಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಆದೇಶಿಸಿದ್ದಾರೆ.
ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳಲ್ಲಿ ಸಿ.ಟಿ.ಸ್ಕ್ಯಾನಿಂಗ್ ಗಾಗಿ 1500. ಹಾಗೂ ಡಿಜಿಟಲ್ ಎಕ್ಸ್ - ರೇಗೆ ಗರಿಷ್ಠ 250 ರೂ. ದರ ನಿಗದಿ ಮಾಡಿ ಆದೇಶ ಹೊರಡಿಸಲಾಗಿದೆ. ಒಂದು ವೇಳೆ ನಿಗದಿಪಡಿಸಿರುವುದಕ್ಕಿಂತ ಹೆಚ್ಚಿನ ಹಣ ಪಡೆದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದೂ ಸಚಿವರು ಎಚ್ಚರಿಕೆ ನೀಡಿದ್ದಾರೆ.
BP, ಶುಗರ್ ಇದ್ರೂ ಮನೆಯಲ್ಲೇ ಕೊರೋನಾ ಸೋಲಿಸಿದ 100ರ ವೃದ್ಧೆ
ಈ ಕುರಿತು ಸಚಿವ ಸುಧಾಕರ್ ಮಾತನಾಡಿ, ಕೆಲ ಆಸ್ಪತ್ರೆಗಳಲ್ಲಿ ರೋಗಿಗಳಿಂದ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ಮಹತ್ವದ ಆದೇಶ ಹೊರಡಿಸಲಾಗಿದೆ.
ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳಲ್ಲಿ ಸಿ.ಟಿ.ಸ್ಕ್ಯಾನಿಂಗ್ ಗಾಗಿ ಒಂದೂವರೆ ಸಾವಿರ ರೂಪಾಯಿ ನಿಗದಿ ಪಡಿಸಲಾಗಿದೆ. ಒಂದು ವೇಳೆ ನಿಗದಿಪಡಿಸಿರುವುದಕ್ಕಿಂತ ಹೆಚ್ಚಿನ ಹಣ ಪಡೆದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದೂ ಸಚಿವರು ಎಚ್ಚರಿಕೆ ನೀಡಿದ್ದಾರೆ.
ಸರ್ಕಾರಿ ವ್ಯವಸ್ಥೆಯಲ್ಲಿ ಸ್ಕ್ಯಾನಿಂಗ್ ಅನ್ನು ಉಚಿತವಾಗಿ ಮಾಡಲಾಗುತ್ತಿದೆ. ಸಾರ್ವಜನಿಕರು ಸರಕಾರಿ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದೂ ಸಚಿವ ಸುಧಾಕರ್ ಮನವಿ ಮಾಡಿದ್ದಾರೆ.