200 ಯುನಿಟ್ ಫ್ರೀ ವಿದ್ಯುತ್ ಕೊಟ್ಟ ಸರ್ಕಾರದಿಂದ ನೀರಿನ ಬಿಲ್ ಹೆಚ್ಚಳಕ್ಕೆ ಚಿಂತನೆ: ಡಿ.ಕೆ. ಶಿವಕುಮಾರ್ ಸುಳಿವು

Published : Feb 13, 2024, 09:02 PM IST
200 ಯುನಿಟ್ ಫ್ರೀ ವಿದ್ಯುತ್ ಕೊಟ್ಟ ಸರ್ಕಾರದಿಂದ ನೀರಿನ ಬಿಲ್ ಹೆಚ್ಚಳಕ್ಕೆ ಚಿಂತನೆ: ಡಿ.ಕೆ. ಶಿವಕುಮಾರ್ ಸುಳಿವು

ಸಾರಾಂಶ

ಕಳೆದ 11 ವರ್ಷಗಳಿಂದ ಬೆಂಗಳೂರಿಗೆ ಪೂರೈಸುತ್ತಿರುವ ನೀರಿನ ದರ ಹೆಚ್ಚಳ ಮಾಡಿಲ್ಲ ಎಂದು ಹೇಳುವ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನೀರಿನ ದರ ಹೆಚ್ಚಳದ ಬಗ್ಗೆ ಸುಳಿವು ನೀಡಿದರು.

ವಿಧಾನಸಭೆ (ಫೆ.13): ರಾಜ್ಯದ ಪ್ರತಿಯೊಂದು ಮನೆಗೂ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಗೃಹಜ್ಯೋತಿ ಯೋಜನೆ ಜಾರಿಗೊಳಿಸಿದ ಕಾಂಗ್ರೆಸ್‌ ಸರ್ಕಾರದ ಈಗ ರಾಜಧಾನಿಯ ಜನತೆಗೆ ಜಲಮಂಡಳಿಯ ನೀರಿನ ಬಿಲ್ ಹೆಚ್ಚಳಕ್ಕೆ ಮುಂದಾಗಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಉಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಬಗ್ಗೆ ಸುಳಿವು ನೀಡಿದ್ದಾರೆ.

ಹೌದು, ರಾಜ್ಯ ವಿಧಾನಸಭೆಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಜಯನಗರದ ಕೊಳಚೆ ಪ್ರದೇಶಗಳಿಗೆ ಕಾವೇರಿ ನೀರು ಕೊಡದ ಬಗ್ಗೆ ಶಾಸಕ ಸಿ.ಕೆ. ರಾಮಮೂರ್ತಿ ಅವರು ಕೇಳಿದ ಪ್ರಶ್ನೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು ಉತ್ತರ ನೀಡಿದರು. ಈ ವೇಳೆ ಜಲಂಮಡಳಿ ನೀರಿನ ದರ ಹೆಚ್ಚಳವಾಗದ ಬಗ್ಗೆ ಪ್ರಸ್ತಾಪವನ್ನು ಮಾಡಿದರು. ಜೊತೆಗೆ. 11 ವರ್ಷಗಳಿಂದ ಬೆಂಗಳೂರಿನಲ್ಲಿ ನೀರಿನ ದರವನ್ನೇ ಹೆಚ್ಚಳ ಮಾಡಲು ಆಗಿಲ್ಲ ಎಂದು ಹೇಳಿದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡುತ್ತಾ, ಕಳೆದ 11 ವರ್ಷಗಳಿಂದ ಬೆಂಗಳೂರಿನಲ್ಲಿ ನೀರಿನ ದರ ಹೆಚ್ಚಳ ಮಾಡಲು ಆಗಿಲ್ಲ. ಆದರೆ, ರಾಜ್ಯದಲ್ಲಿ ಪ್ರತಿ ವರ್ಷ ವಿದ್ಯುತ್ ದರ ಹೆಚ್ಚಾಗುತ್ತಲೇ ಇದೆ. ಆದರೆ, ಇದಿವರೆಗೆ ಮಾತ್ರ ನೀರಿನ ದರವನ್ನು ಮಾತ್ರ ಹೆಚ್ಚಳ ಮಾಡಿಲ್ಲ. ಇದಕ್ಕೆ ರಾಜಕಾರಣವೂ ಕಾರಣವಾಗಿದೆ. ಜೊತೆಗೆ, ವಿವಿಧ ಕಾರಣಗಳಿಂದ ನೀರು ದರವನ್ನು ಹೆಚ್ಚಿಸಿಲ್ಲ. ಈಗ ನೀರು ಸಿಗಬೇಕಾದರೆ ಕೊಳೆಗೇರಿ ಅಭಿವೃದ್ಧಿ ಮಂಡಳಿ (Slum Board) ಅವರು ಪ್ರೋರೇಟಾ ಶುಲ್ಕ ಕಟ್ಟಿದರೆ ಕೊಳಚೆ ಪ್ರದೇಶಗಳಿಗೆ ಕಾವೇರಿ ನೀರು ಸಿಗಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚಾಗುತ್ತಿದೆ. ಅದಕ್ಕೆ ತಕ್ಕಂತೆ ಕುಡಿಯುವ ನೀರಿಗೂ ತೀವ್ರ ಬೇಡಿಕೆ ಉಂಟಾಗುತ್ತಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳುತ್ತೇವೆ ಎಂದು ತಿಳಿಸಿದರು.

ಪ್ರಧಾನಿ ಮೋದಿಯವರೇ ಉದ್ಯೋಗ ಮೇಳದ ನಾಟಕ ಸಾಕು, 20 ಕೋಟಿ ಉದ್ಯೋಗವೆಲ್ಲಿ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು ನಗರ ಅಭಿವೃದ್ಧಿ ಉಸ್ತುವಾರಿ ಸಚಿವರೂ ಕೂಡ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು, 'ಬೆಂಗಳೂರಿನ ಸುಮಾರು ಶೇ.20 ಪ್ರತಿಶತದಷ್ಟು ನೀರಿನ ಅಗತ್ಯವನ್ನು ಟ್ಯಾಂಕರ್‌ಗಳ ಮೂಲಕ ಪೂರೈಸಲಾಗುತ್ತಿದೆ. ಬೆಂಗಳೂರು ವೇಗವಾಗಿ ಬೆಳೆಯುತ್ತಿದೆ. ಪ್ರತಿ ವರ್ಷ ನಗರದ ಜನಸಂಖ್ಯೆ 10 ಲಕ್ಷ ಏರಿಕೆಯಾಗುತ್ತಿದೆ. ನೀರಿನ ಸಮಸ್ಯೆ ದೊಡ್ಡದಾಗಿದೆ. ಆದರೆ ಬೆಂಗಳೂರಿನ ಗೌರವ ಮತ್ತು ಹೆಮ್ಮೆಗಾಗಿ ನಾವು ಕುಡಿಯುವ ನೀರಿಗೆ ಆದ್ಯತೆ ನೀಡುತ್ತೇವೆ, ನಾವು ಅದನ್ನು ಸರಿಪಡಿಸುತ್ತೇವೆ ಎಂದು ಹೇಳಿದರು.

ಬೆಂಗಳೂರು ನಗರದಲ್ಲಿ 2013ರಿಂದ ಸರ್ಕಾರ ನೀರಿನ ದರ ಏರಿಸದಿರುವುದನ್ನು ಗಮನಿಸಿದ ಅವರು, ‘ವಿದ್ಯುತ್ ದರದಂತಹ ಎಲ್ಲ ದರಗಳನ್ನು ಹೆಚ್ಚಿಸಿ ಖರ್ಚು ಹೆಚ್ಚಿಸಿದರೂ ನೀರಿನ ದರ ಏರಿಕೆಯಾಗಿಲ್ಲ, ಕಳೆದ 11 ವರ್ಷ ನೀರಿನ ದರ ಏರಿಕೆಯಾಗದೇ ಕಳೆದಿದ್ದೇವೆ. ರಾಜಕೀಯ ಮತ್ತು ಇತರ ಕಾರಣಗಳಿಂದಾಗಿ. ದೊಡ್ಡ ಸಮಸ್ಯೆ ಇದೆ. ಬೆಂಗಳೂರಿಗೆ ಹೆಚ್ಚುವರಿಯಾಗಿ ಆರು ಟಿಎಂಸಿ ಅಡಿ ಕಾವೇರಿ ನೀರನ್ನು ಕುಡಿಯುವ ಉದ್ದೇಶಕ್ಕೆ ಹಂಚಿಕೆ ಮಾಡಿ ಆದೇಶ ಹೊರಡಿಸಿರುವುದಾಗಿ ಡಿಕೆ ಶಿವಕುಮಾರ್ ತಿಳಿಸಿದರು.

ಲಿಮ್ಕಾ ಬುಕ್ ಆಫ್ ರೆಕಾರ್ಡ್ ಸೇರಿದ ಸಭಾಪತಿ ಬಸವರಾಜ ಹೊರಟ್ಟಿ; 8 ಬಾರಿ ಗೆಲುವಿನ ಗುಟ್ಟು ಬಹಿರಂಗ!

ಅಂತೆಯೇ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) 2017 ರಿಂದ ಪ್ರತಿ ತಿಂಗಳು 10,000 ಲೀಟರ್ ಕಾವೇರಿ ನೀರನ್ನು ಕೊಳೆಗೇರಿಗಳಿಗೆ ಉಚಿತವಾಗಿ ನೀಡುತ್ತಿದೆ. ಎಸ್‌ಸಿ/ಎಸ್‌ಟಿ ಕಾಲೋನಿಗಳಲ್ಲಿ 32,510 ಕುಟುಂಬಗಳಿದ್ದು, ಜಯನಗರ ಕ್ಷೇತ್ರದಲ್ಲಿ 5,515 ಮನೆಗಳಿಗೆ ಪ್ರತಿ ತಿಂಗಳು ಉಚಿತ ಕಾವೇರಿ ನೀರು ಸಿಗುತ್ತಿದೆ. ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯು ಬಿಡಬ್ಲ್ಯುಎಸ್‌ಎಸ್‌ಬಿಗೆ ಅನುಪಾತ ಮತ್ತು ಇತರ ಶುಲ್ಕಗಳನ್ನು ಪಾವತಿಸಿದ ನಂತರ ನೀರಿನ ಸಂಪರ್ಕವನ್ನು ಒದಗಿಸಲಾಗುವುದು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: ಆಲೂಗಡ್ಡೆಗೆ ಮೊಳಕೆ ಬಂದರೆ ತಿನ್ನಬಹುದಾ? ತಜ್ಞರ ಎಚ್ಚರಿಕೆ ಏನು, ಯಾವುದು- ಯಾರಿಗೆ ಅಪಾಯ?