16, 6 ಆಯ್ತು ಈಗ ಮತ್ತೆ 4 ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲಿಕೆ: ಯಾವುವು..?

By Suvarna NewsFirst Published Jun 22, 2021, 5:42 PM IST
Highlights

* ಮತ್ತೆ 4 ಜಿಲ್ಲೆಗಳಲ್ಲಿ ಎಲ್ಲಾ‌ ಅಂಗಡಿಗಳನ್ನು ತೆರೆಯಲು ಅನುಮತಿ
* ಎಲ್ಲಾ‌ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಿ ರಾಜ್ಯ ಸರ್ಕಾರ
* 16, 6  ಆಯ್ತು ಈಗ ಮತ್ತೆ  4 ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲಿಕೆ: ಯಾವುವು..?

ಬೆಂಗಳೂರು, (ಜೂನ್.22): ರಾಜ್ಯದ ಇನ್ನೂ 4 ಜಿಲ್ಲೆಗಳಲ್ಲಿ ಎಲ್ಲಾ‌ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. 

ಹೌದು.. ದಕ್ಷಿಣ ಕನ್ನಡ, ಚಾಮರಾಜನಗರ, ಹಾಸನ ಹಾಗೂ‌ ದಾವಣಗೆರೆ ಜಿಲ್ಲೆಗಳಲ್ಲಿ ಎಸಿ ಶಾಪ್, ಎಸಿ ಶಾಪಿಂಗ್ ಕಾಂಪ್ಲೆಕ್ಸ್ ಮತ್ತು ಎಸಿ ಮಾಲ್‌ಗಳನ್ನು ಹೊರತುಪಡಿಸಿ ಸಂಜೆ 5 ಗಂಟೆಯವರೆಗೆ ಎಲ್ಲಾ‌ ಅಂಗಡಿ ತೆರೆಯಲು ಸರ್ಕಾರ ಅನುಮತಿ ನೀಡಿದೆ.

16 ಜಿಲ್ಲೆಗಳೊಂದಿಗೆ ಮತ್ತೆ 6 ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಕೆ

ಈ ಮೊದಲು ಅನ್​ಲಾಕ್ ಪ್ರಕಿಯೆಗೆ ಚಾಲನೆ ನೀಡಿದ್ದ ಸಿಎಂ ಯಡಿಯೂರಪ್ಪ,ಪಾಸಿಟಿವಿಟಿ ದರ ಶೇ.5ರಷ್ಟು ಇದ್ದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ ಜಿಲ್ಲೆ, ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಿಗೆ ಮಾತ್ರ ಲಾಕ್‌ಡೌನ್  ಸಡಿಲಿಕೆ ಮಾಡಿ ಆದೇಶ ಹೊರಡಿಸಲಾಗಿತ್ತು.

ಇದರ ಜೊತೆಗೆ ನಿನ್ನೆಯಷ್ಟೇ ( ಜೂನ್ 21) ಅನ್‌ಲಾಕ್ 2.0 ಜಿಲ್ಲೆಗಳ ಪಟ್ಟಿಗೆ ಮತ್ತೆ 6 ಜಿಲ್ಲೆಗಳನ್ನು ಸೇರ್ಪಡೆಗೊಳಿಸಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿತ್ತು. ಉಡುಪಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳಲ್ಲೂ ಲಾಕ್​ಡೌನ್ ವಿನಾಯಿತಿ ನೀಡಲಾಗಿತ್ತು.

ಇದೀಗ ಈ ಪಟ್ಟಿ ಪತ್ತೆ ನಾಲ್ಕು ಜಿಲ್ಲೆಗಳು ಸೇರ್ಪಡೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು 26 ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲಿಕೆ ಇದೆ.

click me!