16 ಜಿಲ್ಲೆಗಳೊಂದಿಗೆ ಮತ್ತೆ 6 ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಕೆ

By Suvarna NewsFirst Published Jun 21, 2021, 2:34 PM IST
Highlights

* ಮತ್ತೆ 6 ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಕೆ
* ಅನ್ ಲಾಕ್ ಪ್ರಕ್ರಿಯೆಗೆ ಒಳಪಟ್ಟ 16 ಜಿಲ್ಲೆಗಳೊಂದಿಗೆ ಮತ್ತೆ ಆರು ಜಿಲ್ಲೆಗಳಲ್ಲಿ ಲಾಕ್‌ಡೌನ್ ಓಪನ್
*ಈ ಮೂಲಕ ರಾಜ್ಯದಲ್ಲಿ ಒಟ್ಟು 22 ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲಿಕೆ

ಬೆಂಗಳೂರು, (ಜೂನ್.21): ಈಗಾಗಲೇ ರಾಜ್ಯ ಸರ್ಕಾರ 16 ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲಿಕೆ ಮಾಡಿ ಆದೇಶ ಹೊರಿಡಿಸಿದೆ. ಇದರ ಬೆನ್ನಲ್ಲೇ ಇದೀಗ ಮತ್ತೆ 6 ಜಿಲ್ಲೆಗಳನ್ನು ಅನ್ ಲಾಕ್ ಮಾಡಿ ಆದೇಶಿಸಿದೆ. 

ಇಂದಿನಿಂದ ಅನ್ ಲಾಕ್ ಪ್ರಕ್ರಿಯೆಗೆ ಒಳಪಟ್ಟ 16 ಜಿಲ್ಲೆಗಳೊಂದಿಗೆ ಉಡುಪಿ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ನಿಯಮ ಸಡಿಲಿಕೆ ಮಾಡಲು ಸರ್ಕಾರ ತೀರ್ಮಾನಿಸಿದೆ. ಅದರಂತೆ ಈ ಜಿಲ್ಲೆಗಳಲ್ಲಿ ಸಂಜೆ 5 ಗಂಟೆಯವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು 22 ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲಿಕೆ ಮಾಡಿದಂತಾಗಿದೆ.

ರಾಜ್ಯದಲ್ಲಿ ಮತ್ತಷ್ಟು ಲಾಕ್‌ಡೌನ್‌ ಸಡಿಲಿಕೆ, ಬಸ್ ಓಡಾಡುತ್ತವೆ, ಕಂಡೀಷನ್ಸ್ ಅಪ್ಲೈ

ಉತ್ತರಕನ್ನಡ, ಬೆಳಗಾವಿ, ಮಂಡ್ಯ,ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿಬಿಎಂಪಿ ಸೇರಿ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಮತ್ತು ಬೀದರ್‌ ಜಿಲ್ಲೆಗಳಲ್ಲಿ ಬೆಳಿಗ್ಗೆ 5ರಿಂದ ಸಂಜೆ 5ರವರೆಗೆ ಎಲ್ಲ ಅಂಗಡಿ-ಮುಂಗಟ್ಟುಗಳನ್ನು ತೆರೆಯಲು ಶನಿವಾರ ಮುಖ್ಯಮಂತ್ರಿಗಳು ಅವಕಾಶ ಕಲ್ಪಿಸಿದ್ದರು. ಇದೀಗ ಮತ್ತೆ ಆರು ಜಿಲ್ಲೆಗೆ ಈ ನಿಯಮವನ್ನು ವಿಸ್ತರಿಸಲಾಗಿದೆ.

ಈ ಜಿಲ್ಲೆಗಳಲ್ಲಿ ಶೇ. 50ರಷ್ಟು ಸಾಮರ್ಥ್ಯದೊಂದಿಗೆ ಬಸ್‌, ಮೆಟ್ರೋ ಸಂಚಾರ, ಹೋಟೆಲ್‌, ಕ್ಲಬ್‌ಗಳು, ಹೊರಾಂಗಣ ಚಿತ್ರೀಕರಣ, ಹೊರಾಂಗಣ ಕ್ರೀಡೆಗಳು (ವೀಕ್ಷಕರಿಗೆ ಅವಕಾಶ ಇಲ್ಲ), ಲಾಡ್ಜ್ ಗಳು, ರೆಸಾರ್ಟ್‌ಗಳು, ಜಿಮ್‌ಗಳು ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಹವಾನಿಯಂತ್ರಣ (ಎಸಿ) ವ್ಯವಸ್ಥೆ ಇಲ್ಲದೆ ಕಾರ್ಯನಿರ್ವಹಿಸತಕ್ಕದ್ದು ಎಂದು ಸೂಚಿಸಲಾಗಿದೆ.

ಮತ್ತೆ 6 ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಲಿಕೆ
ಉಡುಪಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ವಿಜಯಪುರ

ಮೊದಲ ಹಂತದಲ್ಲಿ ಅನ್‌ಲಾಕ್‌ ಆಗಿರುವ 16 ಜಿಲ್ಲೆಗಳು
ಅನ್‌ಲಾಕ್‌ ಜಿಲ್ಲೆಗಳು ರಾಯಚೂರು, ಕೊಪ್ಪಳ, ಕಲಬುರಗಿ, ರಾಮನಗರ, ಉತ್ತರ ಕನ್ನಡ, ಮಂಡ್ಯ, ಚಿಕ್ಕಬಳ್ಳಾಪುರ, ತುಮಕೂರು, ಕಲಬುರಗಿ, ರಾಮನಗರ, ಹಾವೇರಿ,ಬೀದರ್, ಬೆಳಗಾವಿ, ಕೋಲಾರ, ಯಾದಗಿರಿ ಹಾಗೂ ಬಾಗಲಕೋಟೆ.

click me!