
ಬೆಂಗಳೂರು, (ಜೂನ್.25): ಹಬ್ಬದ ರೀತಿಯಲ್ಲಿ ಕಂಗೊಳಿಸುತ್ತಿದ್ದ ಮದುವೆ ಕಲ್ಯಾಣ ಮಂಟಪಗಳು ಕೊರೋನಾ ಎರಡನೇ ಅಲೆಗೆ ಸಿಲುಕಿ ಬಂದ್ ಆಗಿದ್ದವು. ಇದೀಗ ಕಲ್ಯಾಣ ಮಂಟಪಗಳಲ್ಲಿ ಮದುವೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ.
ಹೌದು...ಕೋವಿಡ್ -19 ನಿಯಂತ್ರಣದ ಕುರಿತು ಇಂದು (ಶುಕ್ರವಾರ) ಮುಖ್ಯಮಂತ್ರಿ ನಿವಾಸದಲ್ಲಿ ನಡೆದ ಸಚಿವರು ಹಾಗು ಅಧಿಕಾರಿಗಳ ಸಭೆಯಲ್ಲಿ ಕಲ್ಯಾಣ ಮಂಟಪಗಳಲ್ಲಿ ಮದುವೆಗೆ ಷರತ್ತುಬದ್ಧ ಅನುಮತಿ ನೀಡಲು ತೀರ್ಮಾನಿಸಲಾಗಿದೆ.
ರಾಜ್ಯದಲ್ಲಿ 2 ಡೆಲ್ಟಾಪ್ಲಸ್ ಕೇಸ್ ಪತ್ತೆ, ಇಬ್ಬರೂ ಗುಣ
ಮದುವೆಗೆ 40 ಜನರಿಗೆ ಅವಕಾಶ ನೀಡಲಾಗಿದ್ದು, ಭಾಗಿಯಾಗುವವರಿಗೆ ಪಾಸ್ ಕಡ್ಡಾಯವಾಗಿರುತ್ತದೆ. ಹೋಟೆಲ್, ರೆಸಾರ್ಟ್ ಗಳು, ಪಾರ್ಟಿ ಹಾಲ್ ಗಳಲ್ಲಿಯೂ ಮದುವೆ ಮಾಡಬಹುದು. ಸೋಮವಾರದಿಂದ ಜಾರಿಗೆ ಬರುವಂತೆ ಷರತ್ತುಬದ್ಧ ಅನುಮತಿ ನೀಡಲು ನಿರ್ಧರಿಸಲಾಗಿದೆ.
ಇನ್ನು ಸಭೆಯಲ್ಲಿ ಡೆಲ್ಟಾ ಪ್ಲಸ್ ವೈರಸ್ ಬಗ್ಗೆ ನಿಗಾ ವಹಿಸಲು ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಬೇಕು ಎಂದು ತಿಳಿಸಿದರು.
ಅಲ್ಲದೇ ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವವರ ಮೇಲೆ ತೀವ್ರ ನಿಗಾ ಇಟ್ಟು ಅವರನ್ನು ಕೊರೋನಾ ಟೆಸ್ಟ್ ಗೆ ಒಳಪಡಿಸುವಂತೆ ಸೂಚಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ