ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ: ಇಲ್ಲಿದೆ ಮಾರ್ಗಸೂಚಿ

By Suvarna News  |  First Published Sep 5, 2021, 3:54 PM IST

* ಗಣೇಶೋತ್ಸವ ಆಚರಣೆ ಬಗ್ಗೆ ಅಂತಿಮ ನಿರ್ಧಾರ ಪ್ರಕಟಿಸಿದ ಸರ್ಕಾರ 
* ಸಾರ್ವಜನಿಕ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್
 * ಗಣೇಶೋತ್ಸವ ಆಚರಣೆಗೆ ಷರತ್ತು ಬದ್ಧ ಅನುಮತಿ


ಬೆಂಗಳೂರು, (ಸೆ.05): ಕೊರೋನಾ ಮಧ್ಯೆ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಸಾರ್ವಜನಿಕ ಗಣೇಶೋತ್ಸವ ಆಚರಣೆಯ ಬಗ್ಗೆ ಕೊನೆಗೂ ಸರ್ಕಾರ ತನ್ನ ಅಂತಿಮ ನಿರ್ಧಾರವನ್ನು ಪ್ರಕಟಿಸಿದೆ.

 ಇಂದು (ಸೆ.05) ತಜ್ಞರ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಷರತ್ತು ಬದ್ಧ ಅನುಮತಿ ನೀಡಿದ್ದಾರೆ.

Latest Videos

undefined

3 ವರ್ಷಗಳಿಂದ ವ್ಯಾಪಾರವಿಲ್ಲ, ಗಣೇಶೋತ್ಸವಕ್ಕೆ ಅನುಮತಿ ಕೊಡಿ ಸ್ವಾಮಿ; ಮೂರ್ತಿ ತಯಾರಕ ಅಳಲು

ಕಳೆದ ಕೆಲವು ದಿನಗಳಿಂದ ಚರ್ಚೆಯ ಕೇಂದ್ರ ಬಿಂದುವಾಗಿರುವ ಸಾರ್ವಜನಿಕ ಗಣೇಶೋತ್ಸವ ಆಚರಣೆಯ ಬಗ್ಗೆ ಕೊನೆಗೂ ಸರ್ಕಾರ ನಿರ್ಧಾರ ಪ್ರಕಟಿಸಿದೆ. ಇಂದು ತಜ್ಞರ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿದ್ದಾರೆ.

ಸಾರ್ವಜನಿಕ ಗಣೇಶೋತ್ಸವಕ್ಕೆ ಏನೋ ರಾಜ್ಯ ಸರ್ಕಾರ  ಗ್ರೀನ್ ಸಿಗ್ನಲ್ ನೀಡಿದೆ. ಆದ್ರೆ, ಅದಕ್ಕೆ ತಕ್ಕಂತೆ ನಿಯಮಗಳನ್ನ ರೂಪಿಸಿದೆ. ಇನ್ನು ಗಣೇಶ ಹಬ್ಬಕ್ಕೆ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದ್ದು, ಅದು ಈ ಕೆಳಗಿನಂತಿವೆ.

ಮಾರ್ಗಸೂಚಿ ಇಂತಿದೆ

*ಸಾರ್ವಜನಿಕ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್
* ಗಣೇಶ ಮೂರ್ತಿ 4 ಅಡಿಗಿಂತ ಹೆಚ್ಚು ಇರಬಾರದು.
* ಗಣೇಶ ಮೂರ್ತಿಯನ್ನು 5 ದಿನದೊಳಗೆ ವಿಸರ್ಜನೆ ಮಾಡಬೇಕು. 
* ನಗರಗಳಲ್ಲಿ ವಾರ್ಡ್ ಗೆ ಒಂದು ಮಾತ್ರ ಗಣೇಶ ಮೂರ್ತಿ ಇಡಬಹುದು. 
* ಗ್ರಾಮಕ್ಕೊಂದು ಸ್ಥಳೀಯ ಆಡಳಿತದ ಅನುಮತಿಯ ಮೇರೆಗೆ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು.
* ಕೋವಿಡ್ ಪಾಸಿಟಿವಿಟಿ ರೇಟ್ ಶೇ.2ಕ್ಕಿಂತ ಕಡಿಮೆ ಇದ್ದಲ್ಲಿ ಮಾತ್ರ ಅವಕಾಶ ನೀಡಲಾಗುವುದು. ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚಿರುವ ಕಡೆಗಳಲ್ಲಿ ಗಣೇಶೋತ್ಸವ ನಡೆಸಲು ಅವಕಾಶ ಇಲ್ಲ. 

* ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಸ್ಥಳಗಳಲ್ಲಿ ಕೋವಿಡ್ ಲಸಿಕಾ ಕ್ಯಾಂಪ್ ನಡೆಸಲಾಗುವುದು. 50 ಅಡಿಗಿಂತ ಹೆಚ್ಚು ಪೆಂಡಾಲ್ ಹಾಕುವಂತಿಲ್ಲ 
*ಗಣೇಶೋತ್ಸವ ಸಮಯದಲ್ಲಿ ಮನರಂಜನೆ, ಡಿಜೆ ಗಳಿಗೆ ಅವಕಾಶವಿಲ್ಲ. ಯಾವುದೇ ಮೆರವಣಿಗೆಗೂ ಅವಕಾಶವಿಲ್ಲ. 
* ಶಾಲಾ ಕಾಲೇಜುಗಳಲ್ಲಿ ಗಣೇಶ ಕೂರಿಸುವಂತಿಲ್ಲ. 
* ಏಕಕಾಲಕ್ಕೆ 20 ಜನರಿಗಿಂತ ಹೆಚ್ಚಿನ ಜನರು ಸೇರುವಂತಿಲ್ಲ
"

click me!