
ಬೆಂಗಳೂರು, (ಜುಲೈ.03): ಕೋವಿಡ್ ಎರಡನೇ ಅಲೆ ಹಾವಳಿ ಮತ್ತಷ್ಟು ಕಡಿಮೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನಷ್ಟು ನಿರ್ಬಂಧಗಳ ಸಡಿಲಿಕೆಗೆ ಸರ್ಕಾರ ಚಿಂತನೆ ನಡೆಸಿದೆ.
ಇದರ ಮೊದಲ ಭಾಗವಾಗಿ ರಾಜ್ಯದಲ್ಲಿ ದೇವಸ್ಥಾನಗಳನ್ನ ತೆರೆಯಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಬಗ್ಗೆ ಇಂದು (ಶನಿವಾರ) ಸಿಎಂ ಬಿಎಸ್ ಯಡಿಯೂರಪ್ಪ ಅವರು ಮುಜರಾಯಿ ಇಲಾಖೆಯ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ.
ಕರ್ನಾಟಕದಲ್ಲಿ ಶೇ.1.92ಕ್ಕೆ ಇಳಿದ ಕೊರೋನಾ ಪಾಸಿಟಿವಿಟಿ ದರ
ಈ ಮೂಲಕ ಎರಡು ತಿಂಗಳ ಬಳಿಕ ದೇವಸ್ಥಾನಗಳು ಓಪನ್ ಆಗುತ್ತಿದ್ದು, ಜುಲೈ.05ರಿಂದ ಭಕ್ತರು ದೇವರ ಆಶೀರ್ವಾದ ಪಡೆದುಕೊಳ್ಳಬಹುದು. ಆದ್ರೆ, ಹೋಮ-ಹವನ ಮಾಡುವುದಕ್ಕೆ ಅವಕಾಶ ಇಲ್ಲ, ಪ್ರಸಾದ ವಿತರಣೆ ಮಾಡುವಂತಿಲ್ಲ ಎಂದು ಸರ್ಕಾರ ತಿಳಿಸಿದೆ.
ಬಹುಮುಖ್ಯವಾಗಿ ಮಾಸ್ಕ್, ಸಮಾಜಿಕ ಅಂತರ ಕಾಪಾಡಿಕೊಳ್ಳುವುದು ಮುಖ್ಯವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ದೇವಸ್ಥಾನದ ಅರ್ಚಕರು ಹಾಗೂ ಸಮಿತಿಗಳು ಕೋವಿಡ್ ಮಾರ್ಗಸೂಚಿ ಪಾಲಿಸಬೇಕೆಂದು ಸೂಚಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ