
ಹುಬ್ಬಳ್ಳಿ (ಜ.23): ರಾಜ್ಯದಲ್ಲಿ ಹೆಣ್ಣು ಮಕ್ಕಳ ತಾಳಿ ಕಿತ್ತುಕೊಳ್ಳುತ್ತಿರುವ ಮೈಕ್ರೋ ಫೈನಾನ್ಸ್ ಮೇಲೆ ಸರ್ಕಾರದ ನಿಯಂತ್ರಣ ತಪ್ಪಿದೆ. ಬಹಳಷ್ಟು ಕುಟುಂಬಗಳು ಮನೆ ಬಿಟ್ಟು ಹೋಗಿ ಆತ್ಮಹತ್ಯೆ ಮಾಡಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಇದ್ದರೂ ಕೂಡ ಸರ್ಕಾರ ಕಾನೂನಿನ ಪ್ರಯೋಗ ಮಾಡುತ್ತಿಲ್ಲ. ಯಾರಿಗೂ ಭಯ ಇಲ್ಲ. ವಸೂಲಿಗೆ ರೌಡಿಗಳನ್ನು ಬಿಟ್ಟಿದ್ದಾರೆ. ಸರ್ಕಾರ ಒಂದು ಕಡೆ ಮಹಿಳೆಯರಿಗೆ ಕಾರ್ಯಕ್ರಮ ಮಾಡುತ್ತೇನೆ ಎಂದು ಹೇಳುತ್ತಾರೆ. ಇನ್ನೊಂದು ಕಡೆ ಮಹಿಳೆಯರ ತಾಳಿ ಕಿತ್ತುಕೊಳ್ಳುತ್ತಿರುವಂತಹ ಮೈಕ್ರೊ ಫೈನಾನ್ಸ್ ನಿಯಂತ್ರಣ ಮಾಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದು ದೂರಿದರು.
ಹಿಂದೆ ಎಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆಗಿದ್ದಾಗ ಹೆಚ್ಚು ಬಡ್ಡಿ ವಸೂಲಿ ಮಾಡುವವರ ನಿಯಂತ್ರಣಕ್ಕೆ ಕಾನೂನು ತಂದಿದ್ದರು. ಅದು ಕೋರ್ಟ್ ನಲ್ಲಿ ಸ್ಟೇ ಆಗಿದೆ. ಈ ಸರ್ಕಾರ ಕೂಡಲೇ ಅದನ್ನು ತೆರವುಗೊಳಿಸಿ ಕಠಿಣ ಕ್ರಮ ಕೈಗೊಳ್ಳುವ ಅಧಿಕಾರ ಪಡೆದು, ಮೈಕ್ರೊ ಫೈನಾನ್ಸ್ ಗಳನ್ನು ನಿಯಂತ್ರಿಸಬೇಕು ಎಂದು ಆಗ್ರಹಿಸಿದರು.
ಯಲ್ಲಾಪುರ ಅಪಘಾತ ಗಾಯಾಳುಗಳ ಭೇಟಿ: ಯಲ್ಲಾಪುರ ಸಮೀಪ ಅರಬೈಲ್ ಘಾಟ್ ಹತ್ತಿರ ಟ್ರಕ್ ಪಲ್ಟಿಯಾಗಿ ಭೀಕರ ಅಪಘಾತದಲ್ಲಿ ಹಾವೇರಿ ಜಿಲ್ಲೆಯ ಸವಣೂರ ಪಟ್ಟಣದ 10 ಜನರು ನಿಧನರಾಗಿದ್ದು, ಗಾಯಗೊಂಡ ಉಳಿದವರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗಾಯಗೊಂಡವರನ್ನು ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಸವರಾಜ ಬೊಮ್ಮಾಯಿ ರವರು ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು. ತದನಂತರ ಕುಟುಂಬದ ಸದಸ್ಯರೊಡನೆ ಮಾತನಾಡಿದರು. ಈ ಸಂಧರ್ಭದಲ್ಲಿ ಕಿಮ್ಸ್ ನಿರ್ದೇಶಕರಾದ ಡಾ. ಕಮ್ಮಾರ ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ