ಕರ್ನಾಟಕ ಜನತೆ ಇದೀಗ ಅಕ್ಷರಶಃ ನಲುಗಿ ಹೋಗಿದ್ದಾರೆ. ಪ್ರತಿ ದಿನ ಒಂದಲ್ಲಾ ಒಂದು ಬೆಲೆ ಏರಿಕೆಯಾಗುತ್ತಿದೆ. ಹಾಲು, ವಿದ್ಯುತ್ ಸೇರಿದಂತೆ ಹಲವು ವಸ್ತುಗಳ ಮೇಲೆ ಬೆಲೆ ಏರಿಕೆ ಮಾಡಲಾಗಿದೆ. ಇದರ ಬೆನ್ನಲ್ಲೇ ರಾಜ್ಯದಲ್ಲಿ ಡೀಸೆಲ್ ಬೆಲೆ ಏರಿಕೆಯಾಗಿದೆ.
ಬೆಂಗಳೂರು(ಏ.01) ಕರ್ನಾಟಕದಲ್ಲಿ ಬೆಲೆ ಏರಿಕೆಯಿಂದ ಜನರು ಕಂಗಾಲಾಗಿದ್ದಾರೆ. ಎಪ್ರಿಲ್ 1 ರಿಂದ ಹಾಲಿನ ದರ ಲೀಟರ್‌ಗೆ 4 ರೂಪಾಯಿ ಏರಿಕೆಯಾಗಿದೆ. ವಿದ್ಯುತ್ ದರ ಏರಿಕಯಾಗಿದೆ. ಕಸದ ಮೇಲೆ ಸೆಸ್ ಹಾಕಲಾಗಿದೆ. ಈ ಎಲ್ಲಾ ಸಂಕಷ್ಟಗಳ ನಡುವೆ ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ಇಂದಿನಿಂದಲೇ ಕರ್ನಾಟಕದಲ್ಲಿ ಡೀಸೆಲ್ ಬೆಲೆ ಏರಿಕೆ ಮಾಡಿದೆ. ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಕರ್ನಾಟಕ ಸರ್ಕಾರ ಹೆಚ್ಚಿಸಿದೆ. ಬಳಿಕ ಇದನ್ನು ಸಮರ್ಥಸಿಕೊಂಡಿದೆ. ಬೇರೆ ರಾಜ್ಯಕ್ಕೆ ಹೋಲಿಸಿದರೆ ಕರ್ನಾಟಕದಲ್ಲಿ ಡೀಸೆಲ್ ಬೆಲೆ ದುಬಾರಿಯಾಗಿಲ್ಲ ಎಂದಿದೆ.
ತೆರಿಗೆ ದರ ಶೇಕಡಾ 21.17
ರಾಜ್ಯ ಕಾಂಗ್ರೆಸ್ ಸರ್ಕಾರ ಈ ಕುರಿತು ಅಧಿಸೂಚನೆ ಹೊರಡಿಸಿದೆ. ಡೀಸೆಲ್ ಮೇಲೆ ವಿಧಿಸಲಾಗುತ್ತಿರುವ ಮಾರಾಟ ತೆರಿಗೆ ದರವನನು ಶೇಕಡಾ 21.17ಕ್ಕೆ ಏರಿಸಲಾಗಿದೆ. ಹೀಗಾಗಿ ಪ್ರತಿ ಲೀಟರ್ ಮೇಲೆ 2 ರೂಪಾಯಿ ಏರಿಕೆಯಾಗಿದೆ. ಏರಿಕೆ ಬಳಿಕ ಕರ್ನಾಟಕದಲ್ಲ ಡೀಸೆಲ್ ಮಾರಟ ದರ 91.02 ರೂಪಾಯಿ ಆಗಿದೆ. ಪರಿಷ್ಕೃತ ಮಾರಾಟ ದರವೂ ನರೆಯ ರಾಜ್ಯಗಳಿಗೆ ಹೋಲಿಸಿದರೆ ಕಡಿಮೆ ಇರುತ್ತದೆ ಎಂದು ಸರ್ಕಾರ ತನ್ನ ಅಧಿಸೂಚನೆಯಲ್ಲಿ ಹೇಳಿದೆ.
Breaking ಹಾಲಿನ ಬೆನ್ನಲ್ಲೇ ರಾಜ್ಯದ ಜನತಗೆ ಮತ್ತೊಂದು ಬೆಲೆ ಏರಿಕೆ ಶಾಕ್
2021ರ ನವೆಂಬರ್ ತಿಂಗಳಿಗೂ ಮೊದಲು ಕರ್ನಾಟಕದಲ್ಲಿ ಡೀಸೆಲ್ ಮೇಲೆ ಮಾರಾಟ ತೆರಿಗೆ ದರ ಶೇಕಡಾ 24ರಷ್ಟಿತ್ತು. ಅಂದು ಡೀಸೆಲ್ ಮಾರಾಟ ದರ 92.03 ರೂಪಾಯಿ ಆಗಿತ್ತು. ಆದರೆ ಡೀಸೆಲ್ ಹಾಗೂ ಪೆಟ್ರೋಲ್ ದರ ದುಬಾರಿಯಾದ ಕಾರಣ ಬಿಜೆಪಿ ಆಡಳಿತ ರಾಜ್ಯದಳು ಮರಾಟ ತೆರಿಗೆಯನ್ನು ಕಡಿತಗೊಳಿಸಿತ್ತು. ಈ ವೇಳೆ ರಾಜ್ಯದಲ್ಲಿ ಆಡಳಿತದಲ್ಲಿದ್ದ ಬಸವರಾಜ್ ಬೊಮ್ಮಾಯಿ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆ ದರವನ್ನು 18.44ಕ್ಕೆ ಕಡಿತಗೊಳಿಸಿತ್ತು. ಇದೀಗ ಸಿದ್ದರಾಮಯ್ಯ ಸರ್ಕಾರ ಈ ಮಾರಾಟ ತೆರಿಗೆ ದರವನ್ನು ಶೇಕಡಾ 21.17ಕ್ಕೆ ಏರಿಕೆ ಮಾಡಿದೆ.
ರಾಜ್ಯ ಸರ್ಕಾರ ಹೊರಡಿಸಿದ ಅಧಿಸೂಚನೆಯಲ್ಲಿ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಮಹಾರಾಷ್ಟ್ರದಲ್ಲಿನ ಡೀಸೆಲ್ ಬೆಲೆ ಉಲ್ಲೇಖಿಸಿದೆ. ಬಳಿಕ ಡೀಸೆಲ್ ಮೇಲಿನ ಮಾರಾಟ ತೆರಿಗೆ ದರ ಏರಿಕೆ ಮಾಡಿದರೂ ಕರ್ನಾಟದಲ್ಲಿ ಡೀಸೆಲ್ ಬೆಲೆ ಕಡಿಮೆ ಎಂದಿದೆ.
ಗ್ಯಾರೆಂಟಿ ಕೊಟ್ಟು ಬೆಲೆ ಏರಿಸಿತಾ ಸರ್ಕಾರ?
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಉಚಿತ ಗ್ಯಾರೆಂಟಿ ಯೋಜನೆ ನೀಡುತ್ತಿದೆ. ಇದರ ಸಲುವಾಗಿ ರಾಜ್ಯದ ಬೊಕ್ಕಸ ಬರಿದಾಗಿದೆ. ಅಭಿವೃದ್ಧಿ ಕೆಲಸಗಳು ಕುಂಠಿತವಾಗಿದೆ. ಶಾಸಕರಿಗೆ ಅನುದಾನ ಸಿಗುತ್ತಿಲ್ಲ. ಹೀಗಾಗಿ ಗ್ಯಾರೆಂಟಿ ನಷ್ಟವನ್ನು ಸರಿದೂಗಿಸಲು ರಾಜ್ಯದಲ್ಲಿ ಬೆಲೆ ಏರಿಕೆ ಪರ್ವ ಮಾಡುತ್ತಿದೆ ಎಂದು ಬಿಜೆಪಿ ಆಕ್ರೋಶ ಹೊರಹಾಕಿದೆ. ಉಚಿತ ಗ್ಯಾರೆಂಟಿಯಿಂದ ರಾಜ್ಯದ ಜನತೆಗೆ ನೆಮ್ಮದಿ ಇಲ್ಲದಾಗಿದೆ ಎಂದು ಆರೋಪಿಸಿದೆ.
ದರ ಏರಿಕೆ ಶಾಕ್
ಏಪ್ರಿಲ್ 1 ರಿಂದ ಕರ್ನಾಟಕದಲ್ಲಿ ಬಹುತೇಕ ಎಲ್ಲಾ ವಸ್ತುಗಳ ಬೆಲೆ ಏರಿಕೆ ಮಾಡಲಾಗಿದೆ. ಹಾಲಿನ ದರ ಲೀಟರ್‌ಗೆ 4 ರೂಪಾಯಿ ಏರಿಕೆ ಮಾಡಿದೆ. ವಿದ್ಯುತ್ ದರ ಏರಿಕೆ ಮಾಡಲಾಗಿದೆ. ಇನ್ನು ಕಸದ ಸಂಗ್ರಹಣೆ ಹಾಗೂ ವಿಲೇವಾರಿ ಮೇಲೆ ಸೆಸ್ ವಿಧಿಸಲಾಗಿದೆ. ಇದರ ಬೆನ್ನಲ್ಲೇ ರಾಜ್ಯ ಹೊಟೆಲ್ ಮಾಲೀಕರ ಸಂಘ ಊಟ ತಿಂಡಿ, ಕಾಫಿ, ಟೀ ಬೆಲೆ ಏರಿಕೆ ಮಾಡಲು ನಿರ್ಧರಿಸಿದೆ.
ರಾಜ್ಯದ ಜನರ ಆಕ್ರೋಶ
ರಾಜ್ಯದಲ್ಲಿ ಸತತ ಬೆಲೆ ಏರಿಕೆಯಿಂದ ಜನರು ಆಕ್ರೋಶಗೊಂಡಿದ್ದಾರೆ. ಜನಸಾಮಾನ್ಯರ ಬುದುಕು ದುಸ್ತರವಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ, ಹಾಲಿನ ದರ ಏರಿಕೆಯಿಂದ ದಿನ ದೂಡುವುದು ಕಷ್ಟವಾಗುತ್ತಿದೆ ಅನ್ನೋ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಡೀಸೆಲ್ ಬೆಲೆ ಏರಿಕೆಯಿಂದ ಕರ್ನಾಟಕದಲ್ಲಿ ಅಗತ್ಯ ವಸ್ತುಗಳ ಮೇಲಿನ ಬೆಲೆ ಮತ್ತಷ್ಟು ಏರಿಕೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಯುಗಾದಿಗೆ ಬೆಲೆ ಏರಿಕೆ ಹೋಳಿಗೆ, ಮಹಾದೇವಪ್ಪನಿಗೂ ಶಾಕು-ಕಾಕಾ ಪಾಟೀಲಗೂ ಶಾಕು,ಕಾಂಗ್ರೆಸ್ ತಿವಿದ HDK