Coronavirus ಕರ್ನಾಟಕದಲ್ಲಿ ಕೊರೋನಾ ಹೆಚ್ಚಳ, ಆಸ್ಪತ್ರೆಗಳಿಗೆ ಖಡಕ್ ಸೂಚನೆ ಕೊಟ್ಟ ಸರ್ಕಾರ

By Suvarna News  |  First Published Jan 5, 2022, 10:23 PM IST

* ಕರ್ನಾಟಕದಲ್ಲಿ ಕೊರೋನಾ ದ್ವಿಗುಣ
* ಮುಂಜಾಗ್ರತಾ ಕ್ರಮ ಕೈಗೊಂಡ ಸರ್ಕಾರ
* ಬೆಡ್ ಮೀಸಲಿಡುವಂತೆ ಆಸ್ಪತ್ರೆಗಳಿಗೆ ಸರ್ಕಾರ ಸೂಚನೆ


ಬೆಂಗಳೂರು, (ಜ.05): ಕಳೆದ ಕೆಲವು ದಿನಗಳಿಂದ ಕರ್ನಾಟಕದಲ್ಲಿ ಕೊರೋನಾ ವೈರಸ್ ಎಗ್ಗಿಲ್ಲದೆ ಜಾಸ್ತಿಯಾಗುತ್ತಿದೆ. ಅದು ದಿನದಿಂದ ದಿನಕ್ಕೆ ದುಪ್ಪಟ್ಟು ಆಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಈ ಹಿನ್ನೆಲೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳುತ್ತಿದೆ. ಆಸ್ಪತ್ರೆ, ಬೆಡ್ ಸೇರಿದಂತೆ ಚಿಕಿತ್ಸೆಗೆ ಸಂಬಂಧಿಸಿದ ಎಲ್ಲಾವುಗಳನ್ನ ಸ್ಟಾಕ್ ಮಾಡಿಕೊಳ್ಳುವಂತೆ ಆರೋಗ್ಯ ಇಲಾಖೆಗೆ ಸೂಚಿಸಿದೆ.

Latest Videos

undefined

Corona Update ಕರ್ನಾಟಕದಲ್ಲಿ ಕೊರೋನಾ ಕೇಸ್ ದ್ವಿಗುಣ, ಹೆಚ್ಚಾಯ್ತು ಆತಂಕ

ಇದರ ಬೆನ್ನಲ್ಲೇ ಇದೀಗ  3ನೇ ಅಲೆಯ ಭೀತಿ (Coronavirus 3rd Wave) ಕಾಣಿಸಿಕೊಂಡಿರುವುದಿರಂದ ಕರ್ನಾಟಕದ ಎಲ್ಲ ಖಾಸಗಿ ಆಸ್ಪತ್ರೆ, ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ತಕ್ಷಣದಿಂದ ಶೇ 30ರಷ್ಟು ಬೆಡ್​ಗಳನ್ನು ಸೋಂಕಿತರ ಚಿಕಿತ್ಸೆಗೆ ಮೀಸಲಿಡಬೇಕು ಎಂದು ರಾಜ್ಯ ಸರ್ಕಾರ ಸೂಚನೆ ರವಾನಿಸಿದೆ. 

ಜ.7ರ ಒಳಗೆ ಖಾಸಗಿ ಆಸ್ಪತ್ರೆಗಳು ಶೇ 50ರಷ್ಟು ಬೆಡ್​ಗಳನ್ನು ಮೀಸಲಿಡಬೇಕು. ಜ.10ರ ಒಳಗೆ ವೈದ್ಯಕೀಯ ಶಿಕ್ಷಣ ಸಂಸ್ಥೆಯಲ್ಲಿ ಶೇ 75ರಷ್ಟು ಬೆಡ್​ಗಳನ್ನು ಮೀಸಲಿಡಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. ಆರೋಗ್ಯ ಇಲಾಖೆಯಿಂದ ಶಿಫಾರಸಾಗುವ ರೋಗಿಗಳ ಚಿಕಿತ್ಸೆಗೆ ಈ ಬೆಡ್​ಗಳು ಮೀಸಲಿರಬೇಕು ಎಂದು ಆದೇಶದಲ್ಲಿ ತಿಳಿಸಿದೆ.

ಈಗಾಗಲೇ ವಾರ್‌ ರೂಂ, ನೋಡಲ್ ಅಧಿಕಾರಿಗಳನ್ನ ಸರ್ಕಾರ ನೇಮಿಸಿದ್ದು, ಬೆಡ್, ಆಸ್ಪತ್ರೆ, ಆಕ್ಸಿಜನ್ ಕೊರತೆ ಆಗದಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸರ್ಕಾರ ಖಡಕ್ ಆಗಿ ಹೇಳಿದೆ.

ಖಾಸಗಿ ಸಂಸ್ಥೆಗಳು, ಕಚೇರಿಗಳು, ಕಾರ್ಖಾನೆಗಳಲ್ಲಿ ಕಾರ್ಯನಿರ್ವಹಿಸುವ ನೌಕರರಿಗೆ ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದಿದ್ದರೇ ಮಾತ್ರ ಕೆಲಸಕ್ಕೆ ಅನುಮತಿಸುವಂತೆ ಸರ್ಕಾರ ಆದೇಶಿಸಿದೆ.

ಕರ್ನಾಟಕದಲ್ಲಿ ಕೊರೋನಾ ದ್ವಿಗುಣ
ಕರ್ನಾಟಕ ಕೊರೋನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಿದೆ. ಆದರೂ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಬದಲಿಗೆ ದಿನ ದಿನಕ್ಕೆ ದ್ವಿಗುಣವಾಗುತ್ತಿದೆ.

ಹೌದು...ನಿನ್ನೆಗಿಂತ (ಜ.04)ಗ ಇಂದು(ಜ.05) ಕೊರೋನಾ ಪಾಸಿಟಿವ್ ಕೇಸ್‌ಗಳ ಸಂಖ್ಯೆ ಡಬಲ್ ಆಗಿದೆ. ಕಳೆದ 24 ಗಂಟೆಗಳಲ್ಲಿ  4,246  ಪ್ರಕರಣಗಳು ಪತ್ತೆ ಆಗಿವೆ. 

ಇನ್ನು ಕೊರೋನಾ ಹಾಟ್‌ಸ್ಫಾಟ್ ಆಗುತ್ತಿರುವ ಬೆಂಗಳೂರಿನಲ್ಲಿ ಇಂದು ಒಂದೇ ದಿನ 3,605 ಜನರಿಗೆ ಸೋಂಕು ದೃಢವಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ರೇಟ್​ ಶೇ. 3.33ಕ್ಕೇರಿದೆ. ಕೊರೋನಾ ಆತಂಕದ ಮಧ್ಯೆ ರೂಪಾಂತರಿ ವೈರಸ್ ಒಮಿಕ್ರಾನ್‌ ಸಹ ಹೆಚ್ಚಳವಾಗಿದ್ದು, ಇದುವರೆಗೆ 226 ಜನರಿಗೆ ಕೇಸ್ ಪತ್ತೆಯಾಗಿದೆ  ಎಂದು ಟ್ವಿಟರ್​​ನಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್​ ಮಾಹಿತಿ ನೀಡಿದ್ದಾರೆ.

click me!