ರಾಜ್ಯದಲ್ಲಿ ನೈಟ್​ ಕರ್ಫ್ಯೂ ಜಾರಿ: ಏನಿರುತ್ತೆ? ಏನಿರಲ್ಲ? ಮಾರ್ಗಸೂಚಿ ಪ್ರಕಟ

By Suvarna News  |  First Published Dec 23, 2020, 6:12 PM IST

ಹೊಸ ಮಾದರಿಯ ಕೊರೋನಾ ಬ್ರಿಟನ್‌ನಲ್ಲಿ ಪತ್ತೆಯಾದ ಬೆನ್ನಲ್ಲೇ ಇದನ್ನು ಕಟ್ಟಿ ಹಾಕಲು ರಾಜ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಈ ಬಗ್ಗೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.


ಬೆಂಗಳೂರು, (ಡಿ.23): ಬ್ರಿಟನ್ ನಲ್ಲಿ ಹೊಸ ರೂಪದ ಕೊರೋನಾ ವೈರಸ್ ಪತ್ತೆಯಾಗಿ ಆತಂಕ ಸೃಷ್ಟಿಸಿದೆ. ಈಗಾಗಲೇ ಚೀನಾ ಕೊರೋನಾ ವೈರಸ್‌ನಿಂದ ಇಡೀ ಜಗತ್ತು ತತ್ತರಿಸಿ ಹೋಗಿದೆ. ಇದೀಗ ಬ್ರಿಟನ್ ವೈರಸ್ ವಕ್ಕರಿಸಿಕೊಂಡಿದೆ.

ಈ ಹಿನ್ನೆಲೆಯಲ್ಲಿ  ಕರ್ನಾಟದಲ್ಲಿ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಈಗಾಗಲೇ ಡಿ.24 ರಿಂದ ಜನವರಿ 2ರ ವರೆಗೆ ನೈಟ್ ಕರ್ಫ್ಯೂ (ರಾತ್ರಿ 11ರಿಂದ ಬೆಳಗ್ಗೆ 5ರ ವರೆಗೆ) ಜಾರಿ ಮಾಡಲಾಗಿದೆ. ಇನ್ನು ಈ ಬಗ್ಗೆ ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

Tap to resize

Latest Videos

undefined

ರಾಜ್ಯದಲ್ಲಿ ನೈಟ್ ಕರ್ಫ್ಯೂ ಡೇಟ್, ಟೈಮಿಂಗ್ ಬದಲಾವಣೆ: ಸಿಎಂ ಮಹತ್ವದ ಆದೇಶ 

ಮಾರ್ಗಸೂಚಿ
ರಾತ್ರಿ ವೇಳೆ ಬಸ್​, ರೈಲು, ವಿಮಾನ ಸಂಚಾರಕ್ಕೆ ಅವಕಾಶ ಇದೆ. ಹೀಗಾಗಿ ಪ್ರಯಾಣಿಕರನ್ನು ಪಿಕಪ್, ಡ್ರಾಪ್​ ಮಾಡಲು ಆಟೋ, ಟ್ಯಾಕ್ಸಿಗಳಿಗೆ ಅವಕಾಶ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸರಕು ಸಾಗಣೆಗೆ ಯಾವುದೇ ನಿರ್ಬಂಧವನ್ನು ಸರ್ಕಾರ ಹೇರಿಲ್ಲ.

ಇನ್ನು, 24 ಗಂಟೆ ಕೆಲಸ ನಿರ್ವಹಿಸಬೇಕಾದ ಕೈಗಾರಿಕೆಗಳಿಗೆ ನಿರ್ಬಂಧ ಇಲ್ಲ. ನೈಟ್​ ಶಿಫ್ಟ್​ನಲ್ಲಿ ಶೇ.50ರಷ್ಟು ಸಿಬ್ಬಂದಿ ಬಳಕೆಗೆ ಅವಕಾಶ ಇದೆ. ರಾತ್ರಿ ಕೆಲಸ ಮುಗಿಸಿ ಸಂಚಾರ ನಡೆಸುವ ಕಾರ್ಮಿಕರಿಗೆ ಕಂಪನಿ ಐಡಿ ಕಾರ್ಡ್ ಕಡ್ಡಾಯ ಎಂದು ಸರ್ಕಾರ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಪಾರ್ಟಿಗಳಿಗೆ ನಿಷೇಧ:
2021 ಹೊಸವರ್ಷಕ್ಕೆ ಸಾರ್ವಜನಿಕವಾಗಿ ಪಾರ್ಟಿ ಮಾಡುವುದರ ಮೇಲೆ ಸರ್ಕಾರ ನಿರ್ಬಂಧ ವಿಧಿಸಿದೆ. ಕ್ಲಬ್-ಪಬ್-ರೆಸ್ಟೋರೆಂಟ್ ತೆರೆಯಬಹುದು. ಆದರೆ, ಕ್ಲಬ್-ಪಬ್-ರೆಸ್ಟೋರೆಂಟ್‌ನಲ್ಲಿ ನ್ಯೂಇಯರ್ ಪಾರ್ಟಿಗೆ ನಿಷೇಧ ಇರಲಿದೆ. ದೈಹಿಕ ಅಂತರವಿಲ್ಲದೇ ಯಾರೂ ಒಂದೆಡೆ ಸೇರುವಂತಿಲ್ಲ.

click me!