ಮನೆಯಲ್ಲೇ ಮದುವೆ, 40 ಜನಕ್ಕಷ್ಟೇ ಅವಕಾಶ: ರಾಜ್ಯ ಸರ್ಕಾರದಿಂದ ಹೊಸ ನಿಯಮ ಜಾರಿ!

Published : May 09, 2021, 07:24 AM ISTUpdated : May 09, 2021, 09:13 AM IST
ಮನೆಯಲ್ಲೇ ಮದುವೆ, 40 ಜನಕ್ಕಷ್ಟೇ ಅವಕಾಶ: ರಾಜ್ಯ ಸರ್ಕಾರದಿಂದ ಹೊಸ ನಿಯಮ ಜಾರಿ!

ಸಾರಾಂಶ

ಮನೆಯಲ್ಲೇ ಮದುವೆ, 40 ಜನಕ್ಕಷ್ಟೇ ಅವಕಾಶ| ರಾಜ್ಯ ಸರ್ಕಾರದಿಂದ ಹೊಸ ನಿಯಮ ಜಾರಿ| ಕಲ್ಯಾಣಮಂಟಪ ಸೇರಿದಂತೆ ಇತರೆಡೆ ನಿಷಿದ್ಧ| ಪಾಸ್‌ ಕಡ್ಡಾಯ| ತಹಸೀಲ್ದಾರ್‌ಗೆ ಅರ್ಜಿ ಸಲ್ಲಿಸಿ ಪಾಸ್‌ ಪಡೆಯಬೇಕು| ಅರ್ಜಿಯಲ್ಲಿ ಅತಿಥಿಗಳ ಹೆಸರನ್ನು ಉಲ್ಲೇಖಿಸಬೇಕು| ಅತಿಥಿಗಳಿಗೆ ಪಾಸ್‌ ಕಡ್ಡಾಯ, ವರ್ಗಾಯಿಸುವಂತಿಲ್ಲ

ಬೆಂಗಳೂರು(ಮೇ.09): ಸೆಮಿ ಲಾಕ್‌ಡೌನ್‌ ಅವಧಿಯಲ್ಲಿ ಮದುವೆ ಸಮಾರಂಭಕ್ಕೆ ಮತ್ತಷ್ಟುಕಠಿಣ ನಿರ್ಬಂಧಗಳನ್ನು ವಿಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಪೂರ್ವಾನುಮತಿಯೊಂದಿಗೆ ಕೇವಲ 40 ಮಂದಿಯೊಂದಿಗೆ ಮನೆಯಲ್ಲೇ ಮದುವೆ ಆಗಲು ಮಾತ್ರ ಅನುಮತಿ ನೀಡುವುದಾಗಿ ಹೇಳಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಮದುವೆ ಆಗುವವರು ಬಿಬಿಎಂಪಿ ವಲಯ ಆಯುಕ್ತರು ಹಾಗೂ ಇತರ ಜಿಲ್ಲೆಗಳ ವ್ಯಾಪ್ತಿಯಲ್ಲಿ ತಹಸೀಲ್ದಾರ್‌ ಅವರಿಂದ ಅನುಮತಿ ಪಡೆಯಬೇಕು.

"

ಅನುಮತಿ ಪಡೆಯಲು ಮದುವೆ ದಿನಾಂಕ, ಆಹ್ವಾನ ಪತ್ರಿಕೆ ಅಥವಾ ಸಂಬಂಧಪಟ್ಟದಾಖಲೆಗಳೊಂದಿಗೆ ಮದುವೆಗೆ ಆಗಮಿಸುವ 40 ಮಂದಿಯ ವಿವರಗಳನ್ನು ಒಳಗೊಂಡ ಅರ್ಜಿ ಸಲ್ಲಿಸಬೇಕು.

ಅರ್ಜಿ ಪಡೆದು ವಲಯ ಆಯುಕ್ತರು ಅಥವಾ ತಹಸೀಲ್ದಾರ್‌ ಅವರು ಮದುವೆಗೆ ಅನುಮತಿಯೊಂದಿಗೆ 40 ಪಾಸುಗಳನ್ನು ವಿತರಿಸುತ್ತಾರೆ. ಕಡ್ಡಾಯವಾಗಿ ಮನೆಯ ಬಳಿಯೇ ಮದುವೆ ಮಾಡಬೇಕು. ಕಲ್ಯಾಣ ಮಂಟಪದಲ್ಲಿ ವಿವಾಹ ನಡೆಯುವಂತಿಲ್ಲ. ಮದುವೆಗೆ ಆಗಮಿಸುವವರು ಕಡ್ಡಾಯವಾಗಿ ಪಾಸನ್ನು ತೆಗೆದುಕೊಂಡೇ ಬರಬೇಕು. ಒಬ್ಬರ ಪಾಸನ್ನು ಮತ್ತೊಬ್ಬರಿಗೆ ಹಸ್ತಾಂತರಿಸುವಂತಿಲ್ಲ. ಜತೆಗೆ ಕೊರೋನಾ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ.

ಇನ್ನು ಇದೇ ಆದೇಶದಲ್ಲಿ ಕಬ್ಬಿಣ ಅದಿರು ಗಣಿಗಾರಿಕೆ ಹಾಗೂ ಸಿಮೆಂಟ್‌ ಉತ್ಪಾದನೆಗೆ ಬಳಸುವ ಸುಣ್ಣದ ಕಲ್ಲು ಗಣಿಗಾರಿಕೆಗೂ ಅನುಮತಿ ನೀಡಲಾಗಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ
ಬಿಡಿಎ ಸೈಟ್ ತಗೊಂಡ್ರೆ ಚಿಪ್ಪೇ ಗತಿ; ಕೆಂಪೇಗೌಡ ಲೇಔಟ್ ಸೈಟ್ ತಗೊಂಡು 15 ವರ್ಷವಾದ್ರೂ ಸೈಟೂ ಇಲ್ಲ, ಸಾಲನೂ ಸಿಗ್ತಿಲ್ಲ!